ಜಾತಿ ದೌರ್ಜನ್ಯ | ಬ್ರಾಹ್ಮಣನ ಪಾದ ತೊಳೆದು ನೀರು ಕುಡಿಯುವಂತೆ OBC ಯುವಕನಿಗೆ ಒತ್ತಾಯ

Date:

ಒಬಿಸಿ ಸಮುದಾಯದ ಯುವಕನಿಗೆ ಬ್ರಾಹ್ಮಣ ವ್ಯಕ್ತಿಯ ಪಾದ ತೊರೆದು ನೀರು ಕುಡಿಯುವಂತೆ ಮಾಡಿ ಜಾತಿ ದೌರ್ಜನ್ಯ ಎಸಗಿರುವ ಅಮಾನವೀಯ ಘಟನೆ ಮಧ್ಯಪ್ರದೇಶದ ದಾಮೋಹ್‌ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಸತಾರಿಯಾ ಗ್ರಾಮದಲ್ಲಿ ಘಟನೆ ನಡೆದಿದೆ. ಮದ್ಯ ಮಾರಾಟ ಮಾಡುತ್ತಿದ್ದ ಬ್ರಾಹ್ಮಣ ಸಮುದಾಯದ ವ್ಯಕ್ತಿಗೆ ಚಪ್ಪಲಿ ಹಾರ ಹಾಕಿರುವಂತೆ ಎಐ ಚಿತ್ರ ರಚಿಸಿದ್ದಕ್ಕಾಗಿ ಒಬಿಸಿ ಪ್ರವರ್ಗಕ್ಕೆ ಸೇರಿದ ಕುಶ್ವಾಹ ಸಮುದಾಯದ ಯುವಕನ ಮೇಲೆ ದೌರ್ಜನ್ಯ ಎಸಗಲಾಗಿದೆ ಎಂದು ವರದಿಯಾಗಿದೆ.

ಸತಾರಿಯಾ ಗ್ರಾಮವನ್ನು ಇತ್ತೀಚೆಗೆ ಮದ್ಯ ಮುಕ್ತ ಗ್ರಾಮವೆಂದು ಘೋಷಿಸಲಾಗಿತ್ತು. ಆದಾಗ್ಯೂ, ಬ್ರಾಹ್ಮಣ ಸಮುದಾಯದ ಅನ್ನು ಪಾಂಡೆ ಎಂಬಾತ ಮದ್ಯ ಮಾರಟವನ್ನು ಮುಂದುವರೆಸಿದ್ದರು. ಆತನನ್ನು ‘ರೆಡ್‌ ಹ್ಯಾಂಡ್‌’ಆಗಿ ಹಿಡಿದು, 2,100 ರೂ. ದಂಡ ವಿಧಿಸಿ, ಬ್ರಾಹ್ಮಣ ಸಮುದಾಯದಲ್ಲಿ ಕ್ಷಮೆ ಕೇಳುವಂತೆ ಸೂಚಿಸಲಾಗಿತ್ತು. ಗ್ರಾಮಸ್ಥರ ನಿರ್ಧಾರವನ್ನು ಪಾಂಡೆ ಒಪ್ಪಿಕೊಂಡಿದ್ದರು ಮತ್ತು ಪಾಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದಾಗ್ಯೂ, ಗ್ರಾಮದ ಯುವಕ, ಕುಶ್ವಾಹ ಸಮುದಾಯದ ಪರ್ಶೋತ್ತಮ್ ಕುಶ್ವಾಹ ಎಂಬವರು ಪಾಂಡೆಗೆ ಚಪ್ಪಲಿ ಹಾರ ಹಾಕಿರುವಂತೆ ಎಐ ಚಿತ್ರವನ್ನು ರಚಿಸಿ, ವಾಟ್ಸಾಪ್‌ನಲ್ಲಿ ಹಂಚಿಕೊಂಡಿದ್ದರು. ಆದರೂ, ಕೆಲವೇ ನಿಮಿಷಗಳಲ್ಲಿ ಪೋಸ್ಟ್‌ಅನ್ನು ಅಳಿಸಿ ಹಾಕಿದ್ದರು. ಆದರೂ, ಘಟನೆಯು ವಿವಾದಕ್ಕೆ ತಿರುಗಿತು.

ಈ ಲೇಖನ ಓದಿದ್ದೀರಾ?: ಬೂಟು- ಅಸ್ತವ್ಯಸ್ತಗೊಂಡ ಭಾರತದ ಸಂಕೇತ

ಗ್ರಾಮದ ಬ್ರಾಹ್ಮಣ ಸಮುದಾಯದವರು ಪಂಚಾಯತಿ ನಡೆಸಿ, ಪಾರ್ಷೋತ್ತಮ್ ಅವರು ತಮ್ಮ ಕೃತ್ಯಕ್ಕೆ ‘ಪ್ರಾಯಶ್ಚಿತ್ತ’ ಮಾಡಿಕೊಳ್ಳಬೇಕು. ಅವರು ಪಾಂಡೆಯ ಕಾಲು ತೊಳೆದು, ಆ ನೀರು ಕುಡಿಯಬೇಕು. 5,100 ರೂ. ದಂಡ ಪಾವತಿಸಬೇಕು ಎಂದು ಒತ್ತಾಯಿಸಿದೆ. ಅವರ ಒತ್ತಾಯಕ್ಕೆ ಮಣಿದ ಪಾರ್ಷೋತ್ತಮ್, ಬ್ರಾಹ್ಮಣ ಮುಖಂಡರು ಹೇಳಿದಂತೆ ಮಾಡಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವಿಡಿಯೋ ನೋಡದ ನೆಟ್ಟಿಗರು ಜಾತಿ ಆಧಾರಿತ ತಾರತಮ್ಯವನ್ನು ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುಶ್ವಾಹ ಸಮುದಾಯದ ಸದಸ್ಯರೊಬ್ಬರು ಸಲ್ಲಿಸಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...