ಸಹಾನುಭೂತಿಗೆ ಅಪರಾಧಿಯ ಜಾತಿ ಉಲ್ಲೇಖ ಅಗತ್ಯವಿಲ್ಲ: ಸುಪ್ರೀಂ ಕೋರ್ಟ್

Date:

ಅಪರಾಧಿಗಳು ಸಹಾನುಭೂತಿ ಪಡೆಯಲು ಅವರ ಜಾತಿಯನ್ನು ಪರಿಗಣಿಸುವ ಅಥವಾ ಉಲ್ಲೇಖಿಸುವ ಅಗತ್ಯವಿಲ್ಲ. ಅದನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ರಾಜಸ್ಥಾನದಲ್ಲಿ ಆರು ವರ್ಷದ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅಪರಾಧಿಗೆ ಜೀವಾವಧಿ ಶಿಕ್ಷೆ ನೀಡಲಾಗಿತ್ತು. ಆ ಶಿಕ್ಷೆಯನ್ನು 12 ವರ್ಷಗಳ ಜೈಲು ಶಿಕ್ಷೆಗೆ ಇಳಿಸಿ ರಾಜಸ್ಥಾನ ಹೈಕೋರ್ಟ್ ತೀರ್ಪು ನೀಡಿತ್ತು. ತೀರ್ಪಿನಲ್ಲಿ ಆತನ ಜಾತಿಯನ್ನು ಕೋರ್ಟ್ ಉಲ್ಲೇಖಿಸಿತ್ತು.

ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ರಾಜಸ್ಥಾನ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಅಭಯ್‌ ಎಸ್‌ ಓಕಾ ಮತ್ತು ಪಂಕಜ್ ಮಿತ್ತಲ್‌ ಅವರಿದ್ದ ನ್ಯಾಯಪೀಠ ಅರ್ಜಿಯ ವಿಚಾರಣೆ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಚಾರಣೆ ವೇಳೆ ದಾವೆಯನ್ನು ಗಮನಿಸಿದ ಪೀಠ, “ದಾವೆಯಲ್ಲಿ ಆರೋಪಿಯ ಜಾತಿಯನ್ನು ನಮೂದಿಸಲೇಬಾರದು” ಎಂದು ಹೇಳಿದೆ.

“ವಿಚಾರಣಾ ನ್ಯಾಯಾಲಯ ಮತ್ತು ರಾಜಸ್ಥಾನ ಹೈಕೋರ್ಟ್‌ ತಮ್ಮ ಆದೇಶದಲ್ಲಿ ಅಪರಾಧಿಯ ಜಾತಿಯನ್ನು ಏಕೆ ಉಲ್ಲೇಖಿಸಿವೆ ಎಂಬುದೇ ಅರ್ಥವಾಗುತ್ತಿಲ್ಲ. ವಾದಿ ಅಥವಾ ಪ್ರತಿವಾದಿಯ ಜಾತಿ ಇಲ್ಲವೇ ಧರ್ಮವನ್ನು ತೀರ್ಪಿನಲ್ಲಿ ನಮೂದಿಸಬಾರದು” ಎಂದು ಹೇಳಿದೆ.

ಅಲ್ಲದೆ, ಅಪರಾಧಿಗೆ ಶಿಕ್ಷೆಯನ್ನ 14 ವರ್ಷಕ್ಕೆ ಹೆಚ್ಚಿಸಿ ಆದೇಶ ಹೊರಡಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...