ಜಾತಿ ದೌರ್ಜನ್ಯ | ಜಾತ್ರೆಗೆ ಬಂದಿದ್ದ ದಲಿತ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ; 2 ತಿಂಗಳ ಶಿಶು ಸಾವು

Date:

ಜಾತ್ರೆಗೆ ಬಂದಿದ್ದ ದಲಿತ ಮಹಿಳೆ ಮೇಲೆ‌ ಪ್ರಬಲ ಜಾತಿಯ ದುರುಳರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದು, ಮಹಿಳೆಯ ಎರಡು ತಿಂಗಳ ಮಗು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ತೆಲಂಗಾಣದ ನಾಗರ್ಕರ್ನೂಲ್‌ ಜಿಲ್ಲೆಯಲ್ಲಿ ನಡೆದಿದೆ.

ನಾಗರ್ಕರ್ನೂಲ್ ಜಿಲ್ಲೆಯ ಕುಮ್ಮೇರಾ ಗ್ರಾಮದಲ್ಲಿ ‘ಕುಮ್ಮೇರಾ ಜಾತ್ರೆ’ ನಡೆದಿದೆ. ಜಾತ್ರೆ ಸಂದರ್ಭದಲ್ಲಿ ದೇವಾಲಯ ಪ್ರವೇಶ ವಿಚಾರವಾಗಿ ದಲಿತ ‘ಚಕ್ಲಿ’ ಸಮುದಾಯ ಮತ್ತು ಪ್ರಬಲ ಜಾತಿಯವರ ನಡುವೆ ವಿವಾದ ಉಂಟಾಗಿತ್ತು. ಇದೇ ಕಾರಣಕ್ಕಾಗಿ, ದಲಿತ ಸಮುದಾಯದ ಕುಟುಂಬದ ಮೇಲೆ‌ ಹಲ್ಲೆ ನಡೆದಿದೆ ಎಂದು ವರದಿಯಾಗಿದೆ.

ಘಟನೆಯಲ್ಲಿ ಕುಟುಂಬದ ಹಿರಿಯ ಚಿಲುಕೇಶ್ವರಂ ಚಂದ್ರಕಲಾ, ಅವರ ಕಿರಿಯ ಮಗ ಗಣೇಶ್‌, ಸೊಸೆ‌ ಮೋನಿಕಾ ಹಾಗೂ ಕುಟುಂಬದ ಇತರ ಸದಸ್ಯರ ಮೇಲೆ ಜಾತಿ‌ನಿಂದನೆ ಮಾಡಿ, ಹಲ್ಲೆ ಮಾಡಿದ್ದಾರೆ. ಈ ಸೊಸೆ ಮೋನಿಕಾಗೆ ಗಂಭೀರ‌ಗಾಯಗಳಾಗಿವೆ. ಆಕೆಯ ಮಗು ಸಾವನ್ನಪ್ಪಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯ ನಂತರ, ಕುಟುಂಬವು ನಾಗರ್ಕರ್ನೂಲ್ ಪಟ್ಟಣಕ್ಕೆ ತೆರಳಿದೆ. ಪೊಲೀಸರಿಗೆ ದೂರು ದಾಖಲಿಸಿದೆ. ಸ್ಥಳೀಯ ನಿವಾಸಿಗಳು ಪ್ರತಿಭಟನೆ ನಡೆಸಿದ್ದ ಆರೋಪಿ ದುರುಳರನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಪೊಲೀಸರು ಎಸ್‌ಸಿ/ಎಸ್‌ಟಿ ಕಾಯ್ದೆ ಮತ್ತು ಕೊಲೆಯತ್ನಕ್ಕೆ ಸಂಬಂಧಿಸಿದ ಬಿಎನ್ಎಸ್ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮಗುವಿನ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ವರದಿಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಇಲ್ಲಿಯವರೆಗೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...