ಬಿಹಾರದಲ್ಲಿ ವಸತಿ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಿದ ‘ಕ್ಯಾಟಿ ಬಾಸ್‌’ನ ಮಗ ಕ್ಯಾಟ್‌ ಕುಮಾರ್‌!

Date:

ಬೆಕ್ಕಿನ ಹೆಸರಿನಲ್ಲಿ ವಸತಿ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಲಾಗಿರುವ ಘಟನೆ ಬಿಹಾರದ ರೋಹ್ತಾಸ್‌ನಲ್ಲಿ ನಡೆದಿದೆ. ಅರ್ಜಿದಾರರ ಹೆಸರು ಕ್ಯಾಟ್ ಕುಮಾರ್, ತಂದೆ ಕ್ಯಾಟಿ ಬಾಸ್ ಮತ್ತು ತಾಯಿ ಕ್ಯಾಟಿಯಾ ದೇವಿ ಎಂದು ಉಲ್ಲೇಖಿಸಲಾಗಿದೆ. ಈ ಸಂಬಂಧ ರೋಹ್ತಾಸ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಉದಿತಾ ಸಿಂಗ್ ಅವರು ನಸ್ರಿಗಂಜ್ ಪೊಲೀಸ್ ಠಾಣೆಯಲ್ಲಿ ಅಪರಿಚಿತರ ವಿರುದ್ದ ಪ್ರಕರಣ ದಾಖಲಿಸಲು ಕಂದಾಯ ಅಧಿಕಾರಿ ಕೌಶಲ್ ಪಟೇಲ್‌ಗೆ ಸೂಚಿಸಲಾಗಿದ್ದು ತನಿಖೆ ನಡೆಯುತ್ತಿದೆ.

ಒಂದೇ ವಾರದಲ್ಲಿ ಎರಡು ರೀತಿಯ ನಕಲಿ ಅರ್ಜಿಗಳು ಸಲ್ಲಿಕೆಯಾದ, ಕೆಲವೇ ವಾರಗಳ ನಂತರ ಕ್ಯಾಟ್‌ ಕುಮಾರ್‌ ಅರ್ಜಿ ಬಂದಿದೆ. ಈ ಹಿಂದೆ ಪಟನಾದಲ್ಲಿ ‘ಡಾಗ್ ಬಾಬು’ ಎಂಬ ಹೆಸರಲ್ಲಿ ಅರ್ಜಿ ಬಂದಿತ್ತು. ಚಂಪಾರನ್‌ನಲ್ಲಿ ‘ಸೋನಾಲಿಕಾ ಟ್ರ್ಯಾಕ್ಟರ್‌’ ಎಂಬ ಹೆಸರಿನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಈ ನಕಲಿ ಅರ್ಜಿಗಳ ಬಗ್ಗೆ ತನಿಖೆ ನಡೆಯುತ್ತಿರುವ ನಡುವೆಯೇ ಇದೀಗ ಕ್ಯಾಟ್‌ ಕುಮಾರ್‌ ಹೆಸರಲ್ಲಿ ಅರ್ಜಿ ಸಲ್ಲಿಕೆಯಾಗಿದೆ.

ಇದನ್ನು ಓದಿದ್ದೀರಾ? SIR | ಬಿಹಾರದಲ್ಲಿ ಮತದಾರರ ಪಟ್ಟಿ ಕರಡು ಪ್ರಕಟಿಸಿದ ಚುನಾವಣಾ ಆಯೋಗ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದಡಿ ಸದ್ಯ ದೂರು ದಾಖಲಾಗಿದ್ದು, ಆರೋಪಿಗಳ ಬಂಧನವಾದ ಬಳಿಕ ಇತರೆ ಆರೋಪಗಳಡಿ ಪ್ರಕರಣ ದಾಖಲಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ ವರದಿಯಾಗಿದೆ.

ಬಿಹಾರ ಸಾರ್ವಜನಿಕ ಸೇವಾ ಹಕ್ಕು ಕಾಯ್ದೆಯಡಿಯಲ್ಲಿ ರಾಜ್ಯದ ನಿವಾಸಿಗಳು ಆನ್‌ಲೈನ್ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿದೆ. ಸಲ್ಲಿಸಿದ ಪ್ರತಿಯೊಂದು ಅರ್ಜಿಯನ್ನು ಸಂಬಂಧಪಟ್ಟ ಅಧಿಕಾರಿಯು ಮೌಲ್ಯಮಾಪನ ಮಾಡುತ್ತಾರೆ.

ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಾರಂಭವಾದಾಗಿನಿಂದ, ವಸತಿ ಪ್ರಮಾಣಪತ್ರ ಕೋರಿ ಹಲವು ಅರ್ಜಿಗಳು ಸಲ್ಲಿಕೆಯಾಗಿದೆ. ಚುನಾವಣಾ ಆಯೋಗವು ಸ್ವೀಕರಿಸುವ 11 ದಾಖಲೆಗಳ ಪೈಕಿ ಇದೂ ಒಂದು ಆಗಿರುವುದು ಕಾರಣವಾಗಿರಬಹುದು ಎನ್ನಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...