ದಲಿತ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜಿಸಿ ಥಳಿತ: ಆಂಧ್ರಪ್ರದೇಶದಲ್ಲಿ ಅಮಾನುಷ ಘಟನೆ

Date:

ರಾಜಸ್ಥಾನದಲ್ಲಿ ಆದಿವಾಸಿ ಸಮುದಾಯದ ವ್ಯಕ್ತಿಯ ಮೇಲೆ ಬಿಜೆಪಿ ಮುಖಂಡನೊಬ್ಬ ಮೂತ್ರ ವಿಸರ್ಜಿಸಿದ ಪ್ರಕರಣ ಮಾಸುವ ಮುನ್ನವೆ ಆಂಧ್ರಪ್ರದೇಶದ ಓಂಗೋಲ್‌ ಜಿಲ್ಲೆಯ ಪಟ್ಟಣವೊಂದರಲ್ಲಿ ಒಂಬತ್ತು ಮಂದಿಯ ಗುಂಪು ದಲಿತ ವ್ಯಕ್ತಿಯೊಬ್ಬನನ್ನು ಥಳಿಸಿ ಮೂತ್ರ ವಿಸರ್ಜಿಸಿದ ಅಮಾನುಷ ಘಟನೆ ನಡೆದಿದೆ.

ಹಲ್ಲೆ ನಡೆಸಿದ ಒಬ್ಬಾತ ಮಾಡಿಕೊಂಡ ವಿಡಿಯೋ ವೈರಲ್‌ನಿಂದಾಗಿ ಪ್ರಕರಣ ಬೆಳಕಿಗೆ ಬಂದಿದೆ. ಹಲ್ಲೆ ನಡೆಸಿದವರಲ್ಲಿ ಇಬ್ಬರು ಮೂತ್ರ ವಿಸರ್ಜಿಸಿದ್ದಾರೆ.

ಅಮಾನುಷ ಕೃತ್ಯಕ್ಕೆ ಒಳಗಾದ ವ್ಯಕ್ತಿಯ ಹೆಸರು ಮೋಟಾ ನವೀನ್. ಇವರು ಪರಿಶಿಷ್ಟ ಪಂಗಡಕ್ಕೆ ಸೇರಿದವನಾಗಿದ್ದಾರೆ. ಒಂಬತ್ತು ಮಂದಿ ಈತನ ಮೇಲೆ ಹಲ್ಲೆ ನಡೆಸಿದ್ದು, ಇಬ್ಬರು ಆತನ ಮೇಲೆ ಮೂತ್ರ ವಿಸರ್ಜಿಸಿದ್ದಾರೆ. ಪ್ರಮುಖ ಆರೋಪಿಯನ್ನು ಮನ್ನೆ ರಾಮಾಂಜನೇಯುಲು ಎಂದು ಗುರುತಿಸಲಾಗಿದ್ದು, ಗುಂಪಿನಲ್ಲಿ ಇಬ್ಬರು ಅಪ್ರಾಪ್ತರು ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೂತ್ರ ವಿಸರ್ಜಿಸಿಕೊಂಡ ಮೋಟಾ ನವೀನ್ ಮತ್ತು ಪ್ರಮುಖ ಆರೋಪಿ ರಾಮಾಂಜನೇಯುಲು ನಡುವೆ ಹುಡುಗಿಯ ವಿಷಯಕ್ಕಾಗಿ ಜಗಳ ನಡೆದಿತ್ತು. ನಂತರ ರಾಮಾಂಜನೇಯುಲು ಮತ್ತು ಆತನ ಸ್ನೇಹಿತರು ಜೂನ್ 19 ರಂದು ರಾತ್ರಿ 9 ಗಂಟೆಗೆ ನವೀನ್‌ ಅವರನ್ನು ಪ್ರತ್ಯೇಕ ಸ್ಥಳಕ್ಕೆ ಕರೆಸಿಕೊಂಡು ಹಲ್ಲೆ ನಡೆಸಿ ಮೂತ್ರ ವಿಸರ್ಜಿಸಿದ್ದಾರೆ ಎಂದು ಓಂಗೋಲ್ ಎಸ್‌ಪಿ ಮಲಿಕಾ ಗಾರ್ಗ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಂಗಳೂರಿನಲ್ಲಿ ಹುಟ್ಟಿರುವ ‘ಇಂಡಿಯಾ’ದ ದಾರಿ ಸಲೀಸಲ್ಲ

“ಹಲ್ಲೆಗೊಳಗಾದ ನಂತರ ಮೋಟಾ ನವೀನ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅವರು ಕೃತ್ಯದ ಬಗ್ಗೆ ಏನನ್ನೂ ಹೇಳಲಿಲ್ಲ. ಪೊಲೀಸರು ಆತನೊಂದಿಗೆ ಮಾತನಾಡುವ ಮೊದಲು ಅವರು ಡಿಸ್ಚಾರ್ಜ್ ಆಗಿದ್ದಾರೆ. ಆದರೆ ಐದು ದಿನಗಳ ಹಿಂದೆ ಘಟನೆ ನಡೆಸಿದ ಒಬ್ಬಾತನಿಂದ ವಿಡಿಯೋ ವೈರಲ್‌ ಆಗಿ ಪ್ರಕರಣ ಬೆಳಕಿಗೆ ಬಂದಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 307 (ಕೊಲೆಗೆ ಯತ್ನ) ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಗಳಡಿ ಪ್ರಕರಣ ದಾಖಲಿಸಲಾಗಿದೆ.

ಒಂಬತ್ತು ಶಂಕಿತರ ಪೈಕಿ ಆರು ಮಂದಿಯನ್ನು ಬಂಧಿಸಲಾಗಿದ್ದು, ಇಬ್ಬರು ಅಪ್ರಾಪ್ತರನ್ನು ವಶಕ್ಕೆ ಪಡೆಯಲಾಗಿದೆ. ಪ್ರಮುಖ ಆರೋಪಿ ರಾಮಾಂಜನೇಯುಲು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಂಧ್ರಪ್ರದೇಶದ ಘಟನೆ ಬೆಳಕಿಗೂ ಬರುವ ಕೆಲವು ದಿನಗಳ ಹಿಂದೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ಕಾರ್ಮಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ ವಿಡಿಯೋವೊಂದು ಆಕ್ರೋಶಕ್ಕೆ ಕಾರಣವಾದ ಕೆಲವೇ ದಿನಗಳಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಕೂಲಿ ಕೆಲಸ ಮಾಡುತ್ತಿದ್ದ ಬುಡಕಟ್ಟು ಸಮುದಾಯದ ವ್ಯಕ್ತಿಯೊಬ್ಬನ ಮೇಲೆ ಬಿಜೆಪಿ ಶಾಸಕರ ಬೆಂಬಲಿಗನೊಬ್ಬ ಮೂತ್ರ ವಿಸರ್ಜಿಸಿದ್ದ. ಆತನನ್ನು ಬಂಧಿಸಿ ಎನ್‌ಎಸ್‌ಜಿಯಡಿ ಪ್ರಕರಣ ದಾಖಲಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...