ಕೊಲೆ ಆರೋಪಿಯನ್ನು ಅಟ್ಟಾಡಿಸಿ ಹತ್ಯೆ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Date:

ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಯುವಕನೋರ್ವನನ್ನು ಐವರು ದುಷ್ಕರ್ಮಿಗಳ ತಂಡವೊಂದು ಹಾಡಹಗಲೇ ಅಟ್ಟಾಡಿಸಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಭಯಾನಕ ದೃಶ್ಯವು ಸ್ಥಳೀಯ ಅಂಗಡಿಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಶಿವಗಂಗೈ ಜಿಲ್ಲೆಯ ಕಾರೈಕುಡಿ ಎಂಬಲ್ಲಿ ಘಟನೆ ನಡೆದಿದ್ದು ಹತ್ಯೆಯಾದ ವ್ಯಕ್ತಿಯನ್ನು ಮಧುರೈ ಮೂಲದ 29 ವರ್ಷದ ಅರಿವಳಗನ್ ಅಲಿಯಾಸ್‌ ವಿನೀತ್ ಎಂದು ಗುರುತಿಸಲಾಗಿದೆ. ಕೊಲೆ ಪ್ರಕರಣವೊಂದರಲ್ಲಿ ಜೈಲು ಸೇರಿದ್ದ ವಿನೀತ್‌ ಇತ್ತೀಚೆಗಷ್ಟೇ ಜಾಮೀನು ಪಡೆದು ಹೊರಬಂದಿದ್ದರು.

ಸ್ಕಾರ್ಪಿಯೋ ಕಾರಿನಲ್ಲಿ ಬಂದಿದ್ದ ಪಾತಕಿಗಳು ಜನನಿಬಿಡ ಪ್ರದೇಶದಲ್ಲೇ ವಿನೀತ್‌ ಮೇಲೆ ದಾಳಿ ನಡೆಸಲು ಯತ್ನಿಸಿದ್ದು, ಅಪಾಯದ ಮುನ್ಸೂಚನೆ ಅರಿತ ವಿನೀತ್‌ ಓಡಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾನೆ. ಆದರೆ ವಿದ್ಯುತ್‌ ಕಂಬವೊಂದರ ಬಳಿ ಕಾಲೆಡೆವಿ ಬಿದ್ದ ವಿನೀತ್‌ ಮೇಲೆ, ಹಿಂಬಾಲಿಸಿ ಬಂದ ದುಷ್ಕರ್ಮಿಗಳು ತಲ್ವಾರ್‌ನಿಂದ ನಿರ್ದಯವಾಗಿ ಹಲ್ಲೆ ನಡೆಸಿ, ಕಾರಿನಲ್ಲಿ ಪರಾರಿಯಾಗಿದ್ಧಾರೆ. ಇದೇ ವೇಳೆ ವಿನೀತ್‌ ಸ್ನೇಹಿತನೋರ್ವ ನೆರವಿಗೆ ಧಾವಿಸಿದ್ದು, ಅಷ್ಟರಲ್ಲಾಗಲೇ ದುಷ್ಕರ್ಮಿಗಳು ಕಾರಿನಲ್ಲಿ ಪರಾರಿಯಾಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.  

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆ ಕುರಿತು ಪ್ರತಿಕ್ರಿಯಿಸಿರುವ ಪೊಲೀಸರು, ʻಕೊಲೆಯಾದ ವಿನೀತ್ ಸ್ನೇಹಿತನನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. ದುಷ್ಕರ್ಮಿಗಳನ್ನು ಪತ್ತೆ ಹಚ್ಚಲು ತೀವ್ರ ಹುಡುಕಾಡ ನಡೆಸಲಾಗುತ್ತಿದ್ದೆ ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...