ಕಾವೇರಿ ನದಿ ವಿವಾದ : ವಾಸ್ತವ ಸ್ಥಿತಿ ಕುರಿತು ವರದಿಗೆ ಸೂಚಿಸಿ ಸೆ 1ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ

Date:

ನಿತ್ಯ 24,000 ಕ್ಯೂಸೆಕ್ ಕಾವೇರಿ ನೀರು ಬಿಡುವಂತೆ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮನವಿಗೆ ಸಂಬಂಧಿಸಿದಂತೆ ಯಾವುದೇ ಆದೇಶ ಹೊರಡಿಸದ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಶುಕ್ರವಾರಕ್ಕೆ(ಸೆ.1) ಮುಂದೂಡಿದೆ.

ಅಷ್ಟರೊಳಗೆ ಎರಡು ರಾಜ್ಯಗಳ ಜಲಾಶಯಗಳ ವಾಸ್ತವ ಸ್ಥಿತಿ ಕುರಿತು ವರದಿ ಸಲ್ಲಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ.

ಪ್ರಾಧಿಕಾರದಲ್ಲಿ ತಜ್ಞರಿದ್ದಾರೆ, ನಾವು ತಜ್ಞರಲ್ಲ ಹಾಗಾಗಿ ಯಾವುದನ್ನೂ ತನಿಖೆ ಮಾಡದೆ ತಕ್ಷಣ ಆದೇಶ ಹೊರಡಿಸುವುದು ಕಷ್ಟ ಎಂದು ನ್ಯಾಯಾದೀಶರಾದ​​ ಬಿ ಆರ್ ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನದಿ ನೀರು ಹಂಚಿಕೆ ವಿವಾದದಲ್ಲಿ ಮುಂದಿನ ಹದಿನೈದು ದಿನಗಳ ಕಾಲ ನೀರು ಬಿಡುವ ಕುರಿತು ತೀರ್ಮಾನಿಸುವಂತೆ ಆಗಸ್ಟ್ 28 ರಂದು ಸಭೆ ಸೇರುವ ಕಾವೇರಿ ನಿರ್ವಹಣಾ ಪ್ರಾಧಿಕಾರಕ್ಕೆ ನ್ಯಾಯಾಲಯ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಚಂದ್ರಯಾನ–3ರ ವಿಜ್ಞಾನಿಗಳಿಗೆ 17 ತಿಂಗಳಿನಿಂದ ವೇತನ ಪಾವತಿಸಿಲ್ಲ: ಕೆ ಸಿ ವೇಣುಗೋಪಾಲ್ ಆರೋಪ

ಕರ್ನಾಟಕದ ಪರ ವಾದ ಮಂಡಿಸಿದ ಶ್ಯಾಮ್‌ ದಿವಾನ್‌, ಕಾವೇರಿ ನಿರ್ವಹಣಾ ಪ್ರಾಧಿಕಾರದಲ್ಲಿ ನಾವು ನಮ್ಮ ಸಮಸ್ಯೆಗಳನ್ನು ಹೇಳಲು ಪ್ರಯತ್ನಿಸಿದಾಗ ತಮಿಳುನಾಡು ಸರ್ಕಾರದ ಅಧಿಕಾರಿಗಳು ಕೇಳದೆ ಸಭೆಯಿಂದ ಹೊರನಡೆದಿದ್ದಾರೆ. ರಾಜ್ಯದಲ್ಲಿ ಕಡಿಮೆ ಮಳೆಯಾಗಿದೆ. ಹೀಗಾಗಿ ನೀರಿನ ಪ್ರಮಾಣ ತುಂಬಾ ಕಡಿಮೆ ಇದೆ ಎಂದರು.

ನೀರು ಬಿಡಲು ಕಾವೇರಿ ನಿರ್ವಹಣಾ ಪ್ರಾಧಿಕಾರ ನೀಡಿದ್ದ ಗಡುವು ಇಂದಿಗೆ ಮುಕ್ತಾಯವಾಗುತ್ತಿದೆ. ಈ ನಡುವೆ ಆದೇಶ ಸರಿಯಾಗಿ ಪಾಲನೆಯಾಗಿಲ್ಲ. ಪ್ರಸ್ತುತ ನಾವು ಅತ್ಯಂತ ಭೀಕರ ಬರವನ್ನು ಅನುಭವಿಸುತ್ತಿದ್ದೇವೆ. ನೀರು ಬಿಡದಿದ್ದರೆ ಭಾರಿ ಅನಾಹುತವಾಗಲಿದೆ ಎಂದು ತಮಿಳುನಾಡು ಪರ ವಾದ ಮಂಡಿಸಿದ ಮುಕುಲ್ ರೋಹಟಗಿ ನ್ಯಾಯಾಲಯಕ್ಕೆ ತಿಳಿಸಿದರು.

ದಿನಕ್ಕೆ 24,000 ಕ್ಯೂಸೆಕ್ ಬಿಡುಗಡೆ ಮಾಡುವಂತೆ ತಮಿಳುನಾಡು ಮಾಡಿದ ಮನವಿಯನ್ನು ಕರ್ನಾಟಕವು ನ್ಯಾಯಾಲಯದ ಮುಂದೆ ವಿರೋಧಿಸಿದೆ.

ಆಗಸ್ಟ್ 12 ರಿಂದ ಮುಂದಿನ 15 ದಿನಗಳವರೆಗೆ ದಿನಕ್ಕೆ 10,000 ಕ್ಯೂಸೆಕ್ ನೀರನ್ನು ಬಿಡಲು ರಾಜ್ಯದ ಸದಸ್ಯರು ತೆಗೆದುಕೊಂಡ ನಿರ್ಧಾರವನ್ನು ಪರಿಶೀಲಿಸಲು ನಿರ್ವಹಣಾ ಪ್ರಾಧಿಕಾರಕ್ಕೆ ಮನವಿ ಮಾಡಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...