ಅಬಕಾರಿ ನೀತಿ ಪ್ರಕರಣ | ತಿಹಾರ್ ಜೈಲಿನಿಂದಲೇ ಅರವಿಂದ್ ಕೇಜ್ರಿವಾಲ್‌ರನ್ನು ಬಂಧಿಸಿದ ಸಿಬಿಐ!

Date:

ರದ್ದಾಗಿರುವ ದೆಹಲಿಯ ಮದ್ಯ ನೀತಿಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಮಂಗಳವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರನ್ನು ತಿಹಾರ್ ಜೈಲಿನಿಂದಲೇ ಬಂಧಿಸಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ ಅವರ ಜಾಮೀನು ಅರ್ಜಿಯ ಬಗ್ಗೆ ಸುಪ್ರೀಂ ಕೋರ್ಟ್ ವಿಚಾರಣೆಗೆ ಬುಧವಾರ ವಿಚಾರಣೆ ನಡೆಸುವುದಕ್ಕೆ ಕೆಲವೇ ಗಂಟೆಗಳಿಗೆ ಮೊದಲು ಈ ಬೆಳವಣಿಗೆ ನಡೆದಿದೆ.

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಕೇಂದ್ರ ತನಿಖಾ ಸಂಸ್ಥೆಯು ತಿಹಾರ್ ಜೈಲಿನಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಹೇಳಿಕೆಯನ್ನು ದಾಖಲಿಸಿತ್ತು. ಮಂಗಳವಾರ ತಡರಾತ್ರಿ ಜೈಲಿನಿಂದಲೇ ಬಂಧಿಸಿದ್ದು, ಬುಧವಾರ ಅವರನ್ನು ವಿಚಾರಣಾ ನ್ಯಾಯಾಲಯಕ್ಕೆ ಹಾಜರುಪಡಿಸಲಿರುವುದಾಗಿ ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ ಅವರಿಗೆ ಜಾಮೀನು ನೀಡುವ ವಿಚಾರಣಾ ನ್ಯಾಯಾಲಯದ ಆದೇಶವನ್ನು ದೆಹಲಿ ಹೈಕೋರ್ಟ್ ಮಂಗಳವಾರ ತಡೆದಿತ್ತು. ತಡೆ ಆದೇಶ ನೀಡುವ ವೇಳೆ, “ಅಬಕಾರಿ ನೀತಿ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಿದ ವಿಚಾರಣಾ ನ್ಯಾಯಾಲಯ ಸರಿಯಾಗಿ ಗಮನಕೊಟ್ಟಿಲ್ಲ” ಎಂದು ಹೈಕೋರ್ಟ್ ಹೇಳಿತ್ತು.

ಇದನ್ನು ಓದಿದ್ದೀರಾ? ಗೌರಿ ಲಂಕೇಶ್ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ದೆಹಲಿ ಅಕ್ರಮ ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ ಅವರನ್ನು ಕಳೆದ ಮಾರ್ಚ್ 21ರಂದು ಇಡಿ (ಜಾರಿ ನಿರ್ದೇಶನಾಲಯ) ಬಂಧಿಸಿತ್ತು. ಲೋಕಸಭೆ ಚುನಾವಣೆಯ ಪ್ರಚಾರಕ್ಕಾಗಿ ಸುಪ್ರೀಂ ಕೋರ್ಟ್ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿತ್ತು. ಜೂನ್ 2ರಂದು ಅವರು ಮತ್ತೆ ನ್ಯಾಯಾಲಯದ ಮುಂದೆ ಶರಣಾಗಿ, ಜೈಲಿಗೆ ತೆರಳಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...