ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್, ಸಿಸೋಡಿಯಾ ಖುಲಾಸೆ ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಸಿಬಿಐ

Date:

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಮಂದಿಯನ್ನು ಖುಲಾಸೆಗೊಳಿಸಿರುವ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇಂದ್ರ ತನಿಖಾ ದಳ (ಸಿಬಿಐ) ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದೆ.

“ಕೇಜ್ರಿವಾಲ್, ಸಿಸೋಡಿಯಾ ಮತ್ತು ಇತರರ ವಿರುದ್ಧ ಸಾಕಷ್ಟು ಪುರಾವೆಗಳಿವೆ. ಸಾಕ್ಷಿಗಳು ಸಿಬಿಐ ಪ್ರಕರಣವನ್ನು ಬೆಂಬಲವಿದ್ದಾರೆ” ಎಂದು ಸಿಬಿಐ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸೋಮವಾರ ಹೈಕೋರ್ಟ್‌ಗೆ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ದೆಹಲಿ ಅಬಕಾರಿ ನೀತಿ ಪ್ರಕರಣ | ಎಎಪಿಯನ್ನು ಆರೋಪಿಯನ್ನಾಗಿ ಮಾಡುತ್ತೇವೆಂದ ಇಡಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಚಾರಣಾ ನ್ಯಾಯಾಲಯವು ಕೇಜ್ರಿವಾಲ್, ಸಿಸೋಡಿಯಾ ಮತ್ತು ಇತರರ ಪರವಾಗಿ ಖುಲಾಸೆಗೊಳಿಸುವ ಆದೇಶವನ್ನು ವಿಚಾರಣೆ ನಡೆಸದೆಯೇ ಅಂಗೀಕರಿಸಿದೆ ಎಂದೂ ಸಿಬಿಐ ದೂರಿದೆ.

ದೆಹಲಿ ಸರ್ಕಾರವು 2021-22 ಅಬಕಾರಿ (ಮದ್ಯ) ನೀತಿಯನ್ನು ಜಾರಿಗೊಳಿಸಿದೆ. ಇದರ ಅಡಿಯಲ್ಲಿ ಸರ್ಕಾರವು ಮದ್ಯ ಮಾರಾಟದಿಂದ ಸಂಪೂರ್ಣವಾಗಿ ಹೊರಬಂದು, ಖಾಸಗಿ ವ್ಯಕ್ತಿಗಳಿಗೆ ಪರವಾನಗಿ ನೀಡಿತು. ಆದರೆ ಈ ನೀತಿಯನ್ನು ರೂಪಿಸುವಾಗ ಕೆಲವು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡಲು ಉದ್ದೇಶಪೂರ್ವಕವಾಗಿ ಬದಲಾವಣೆ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು.

ಖಾಸಗಿ ಕಂಪನಿಗಳಿಗೆ ಲಾಭವಾಗುವಂತೆ ನೀತಿ ನಿರೂಪಿಸಿ ಸುಮಾರು ₹100 ಕೋಟಿ ಲಂಚ ಪಡೆಯಲಾಗಿದೆ ಎಂದು ದೂರಲಾಗಿತ್ತು. ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ನೀಡಿದ ದೂರಿನ ಮೇರಿಗೆ ಸಿಬಿಐ ಪ್ರಕರಣ ದಾಖಲಿಸಿತ್ತು. ಜಾರಿ ನಿರ್ದೇಶನಾಲಯವೂ (ಇಡಿ) ಈ ಪ್ರಕರಣದ ತನಿಖೆ ಕೈಗೆತ್ತಿಕೊಂಡಿತ್ತು. ಈ ಆರೋಪಗಳ ಬೆನ್ನಲ್ಲೇ 2022ರ ಜುಲೈನಲ್ಲಿ ಈ ನೀತಿಯನ್ನು ಸರ್ಕಾರ ಹಿಂಪಡೆದಿದೆ.

ಈ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಸಂಸದ ಸಂಜಯ್ ಸಿಂಗ್ ಸೇರಿದಂತೆ ಹಲವರನ್ನು ಬಂಧಿಸಲಾಗಿತ್ತು. ಆದರೆ ಇತ್ತೀಚೆಗೆ ಈ ಪ್ರಕರಣದಲ್ಲಿ ಬಲವಾದ ಪುರಾವೆಗಳು ಇಲ್ಲ ಎಂದು ಅಭಿಪ್ರಾಯಿಸಿರುವ ಕೋರ್ಟ್ ಆರೋಪಿಗಳನ್ನು ಖುಲಾಸೆಗೊಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...