ಎರಡನೇ ಅತಿ ದೊಡ್ಡ ಚುನಾವಣಾ ಬಾಂಡ್ ಖರೀದಿದಾರ ಸಂಸ್ಥೆ ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಎಫ್‌ಐಆರ್

Date:

ಸುಮಾರು 966 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದ, ಎರಡನೇ ಅತಿ ದೊಡ್ಡ ಬಾಂಡ್ ಖರೀದಿದಾರ ಸಂಸ್ಥೆಯಾದ ಹೈದರಾಬಾದ್ ಮೂಲದ ಮೇಘಾ ಎಂಜಿನಿಯರಿಂಗ್ ಮತ್ತು ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿದೆ.

ಜಗದಲ್‌ಪುರ ಸಂಯೋಜಿತ ಸ್ಟೀಲ್ ಪ್ಲಾಂಟ್‌ಗೆ ಸಂಬಂಧಿಸಿದ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮೇಘಾ ಇಂಜಿನಿಯರಿಂಗ್‌ನ 174 ಕೋಟಿ ರೂಪಾಯಿಗಳ ಬಿಲ್‌ಗಳನ್ನು ತೆರವುಗೊಳಿಸಲು ಸುಮಾರು 78 ಲಕ್ಷ ರೂಪಾಯಿ ಲಂಚ ಪಡೆದ ಆರೋಪದ ಮೇಲೆ ಈ ಎಫ್‌ಐಆರ್ ದಾಖಲಿಸಲಾಗಿದ್ದು, ಎನ್‌ಐಎಸ್‌ಪಿ, ಎನ್‌ಎಂಡಿಸಿಯ ಎಂಟು ಅಧಿಕಾರಿಗಳು ಮತ್ತು ಎಂಇಸಿಒಎನ್‌ನ ಇಬ್ಬರು ಅಧಿಕಾರಿಗಳ ಹೆಸರನ್ನು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು.

ಇದನ್ನು ಓದಿದ್ದೀರಾ?   ಚುನಾವಣಾ ಬಾಂಡ್ | ಮೇಘಾ, ರಿಲಯನ್ಸ್, ಬಿರ್ಲಾ- ಬಿಜೆಪಿಗೆ ಹೆಚ್ಚು ದೇಣಿಗೆ ಕೊಟ್ಟ ಕಂಪನಿಗಳ ಪಟ್ಟಿ ಇಲ್ಲಿದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾರ್ಚ್ 21 ರಂದು ಚುನಾವಣಾ ಆಯೋಗ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ ಮೇಘಾ ಇಂಜಿನಿಯರಿಂಗ್ ಚುನಾವಣಾ ಬಾಂಡ್‌ಗಳ ಎರಡನೇ ಅತಿ ದೊಡ್ಡ ಖರೀದಿದಾರ ಸಂಸ್ಥೆಯಾಗಿದೆ. ಈ ಪೈಕಿ ಬಿಜೆಪಿಗೆ 586 ಕೋಟಿ ರೂಪಾಯಿ ದೇಣಿಗೆಯನ್ನು ನೀಡಿದೆ.

ಕಂಪನಿಯು ಬಿಆರ್‌ಎಸ್‌ಗೆ 195 ಕೋಟಿ ರೂಪಾಯಿ, ಡಿಎಂಕೆಗೆ 85 ಕೋಟಿ ರೂಪಾಯಿ, ವೈಎಸ್‌ಆರ್‌ಸಿಪಿಗೆ 37 ಕೋಟಿ ರೂಪಾಯಿ, ಟಿಡಿಪಿಗೆ 25 ಕೋಟಿ ರೂಪಾಯಿ, ಕಾಂಗ್ರೆಸ್‌ಗೆ 17 ಕೋಟಿ ರೂಪಾಯಿ, ಜೆಡಿ-ಎಸ್, ಜನಸೇನಾ, ಜೆಡಿಯು ಪಕ್ಷಗಳಿಗೆ 5 ಕೋಟಿಯಿಂದ 10 ಕೋಟಿ ರೂಪಾಯಿವರೆಗೆ ದೇಣಿಗೆಯನ್ನು ನೀಡಿದೆ.

ಶನಿವಾರ ಪ್ರಕಟವಾದ ಎಫ್‌ಐಆರ್‌ನ ಪ್ರಕಾರ, ಇಂಟೆಕ್‌ವೆಲ್, ಪಂಪ್‌ಹೌಸ್ ಮತ್ತು ಕ್ರಾಸ್ ಕಂಟ್ರಿ ಪೈಪ್‌ಲೈನ್ ಕಾಮಗಾರಿಗೆ ಸಂಬಂಧಿಸಿದ 315 ಕೋಟಿ ರೂಪಾಯಿಗಳ ಯೋಜನೆಯಲ್ಲಿ ಲಂಚದ ಆರೋಪದ ಬಗ್ಗೆ ಸಿಬಿಐ 2023 ಆಗಸ್ಟ್ 10 ರಂದು ಪ್ರಾಥಮಿಕ ವಿಚಾರಣೆಯನ್ನು ದಾಖಲಿಸಿದೆ. ಅದಾದ ಬಳಿಕ ಪ್ರಾಥಮಿಕ ವಿಚಾರಣೆ ನಂತರ ಪ್ರಕರಣ ದಾಖಲಿಸಲು ಶಿಫಾರಸು ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...