ತಿರುಪತಿ ಲಡ್ಡು ವಿವಾದ | ಆರೋಪಪಟ್ಟಿ ಸಲ್ಲಿಸಿದ ಸಿಬಿಐ ನೇತೃತ್ವದ ಎಸ್‌ಐಟಿ, 36 ಆರೋಪಿಗಳ ಹೆಸರು ಉಲ್ಲೇಖ

Date:

ಸಿಬಿಐ ನೇತೃತ್ವದ ಸುಪ್ರೀಂ ಕೋರ್ಟ್ ನೇಮಿಸಿದ ವಿಶೇಷ ತನಿಖಾ ತಂಡ (ಎಸ್‌ಐಟಿ), ತಿರುಪತಿ ಲಡ್ಡು ತಯಾರಿಕೆಗೆ ಪ್ರಾಣಿಗಳ ಕೊಬ್ಬು ಬಳಸಲಾಗಿದೆ ಎಂಬ ಪ್ರಕರಣದ ತನಿಖೆಯನ್ನು ಮುಕ್ತಾಯಗೊಳಿಸಿದೆ. 12 ರಾಜ್ಯಗಳಲ್ಲಿ 15 ತಿಂಗಳ ಕಾಲ ನಡೆಸಿದ ತನಿಖೆಯ ನಂತರ ತಂಡವು ಶುಕ್ರವಾರ ನೆಲ್ಲೂರು ಎಸಿಬಿ ನ್ಯಾಯಾಲಯದಲ್ಲಿ ತನ್ನ ಅಂತಿಮ ಆರೋಪಪಟ್ಟಿಯನ್ನು ಸಲ್ಲಿಸಿದೆ.

ಉತ್ತರ ಪ್ರದೇಶ ಮೂಲದ ಭೋಲೆ ಬಾಬಾ ಆರ್ಗಾನಿಕ್ ಡೈರಿಯ ನಿರ್ದೇಶಕ ಪೋಮಿಲ್ ಜೈನ್ ಮತ್ತು ವಿಪಿನ್ ಜೈನ್ ಈ ಪ್ರಕರಣದ ಪ್ರಮುಖ ಆರೋಪಿಗಳೆಂದು ಉಲ್ಲೇಖಿಸಲಾಗಿದೆ. ಹಾಗೆಯೇ ಈ ಪ್ರಕರಣದಲ್ಲಿ ದೇವಾಲಯದ ಮೂಲಗಳಿಂದ ಅನುಮಾನಾಸ್ಪದವಾಗಿ ಹಣ ವಹಿವಾಟು ನಡೆದಿರುವುದೂ ಬಹಿರಂಗವಾಗಿದೆ. ತುಪ್ಪದ ಗುಣಮಟ್ಟದ ಪರಿಶೀಲನೆಯಲ್ಲಿ ಪ್ರಮುಖ ವೈಫಲ್ಯಗಳು ಕಂಡುಬಂದಿವೆ, ಖಾಸಗಿ ಡೈರಿಗಳು ಟಿಟಿಡಿ ಮಾನದಂಡಗಳನ್ನು ಮೀರಿವೆ ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನು ಓದಿದ್ದೀರಾ? ತಿರುಪತಿ ಲಡ್ಡು ಪ್ರಸಾದದಲ್ಲಿ 5 ವರ್ಷ ಕಾಲ ಪ್ರಾಣಿಗಳ ಕೊಬ್ಬಿನ ಕಲಬೆರಕೆ, ಸಿಬಿಐ ತನಿಖೆಯಿಂದ ಬಹಿರಂಗ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಾರ್ಜ್‌ಶೀಟ್‌ನಲ್ಲಿ 36 ಆರೋಪಿಗಳ ಹೆಸರಿದೆ. ಆರಂಭದಲ್ಲಿ 24 ಮಂದಿ ಹೆಸರನ್ನು ಉಲ್ಲೇಖಿಸಲಾಗಿತ್ತು, ಬಳಿಕ ಮತ್ತೆ 12 ಮಂದಿ ಹೆಸರನ್ನು ಸೇರಿಸಲಾಗಿದೆ. ಸದ್ಯ ಎಲ್ಲರನ್ನೂ ಬಂಧಿಸಲಾಗಿದ್ದು, ಇನ್ನೂ ಮೂವರು ಜಾಮೀನು ಇಲ್ಲದೆ ನ್ಯಾಯಾಂಗ ಬಂಧನದಲ್ಲಿದ್ದಾರೆ. ಟಿಟಿಡಿ ಅಧ್ಯಕ್ಷರ ಮಾಜಿ ಸಹಾಯಕ ಚಿನ್ನ ಅಪ್ಪಣ್ಣ ಮತ್ತು ಅಜಯ್ ಕುಮಾರ್ ಸುಗಂಧ್ ಇನ್ನೂ ಜೈಲಿನಲ್ಲಿದ್ದಾರೆ. ಬಂಧಿತ ಹಲವಾರು ಡೈರಿ ಮಾಲೀಕರು ಷರತ್ತುಬದ್ಧ ಜಾಮೀನು ಪಡೆದಿದ್ದು, ವಿಚಾರಣೆಗಳಿಗೆ ಹಾಜರಾಗಲೇಬೇಕಾಗಿದೆ.

2019 ಮತ್ತು 2024ರ ನಡುವೆ, ಪೂರೈಕೆದಾರರು ಯಾವುದೇ ಹಾಲು ಸಂಗ್ರಹಿಸದೆ ತುಪ್ಪವನ್ನು ತಯಾರಿಸಿದ್ದಾರೆ ಎಂಬ ಆಘಾತಕಾರಿ ವಿಚಾರ ಎಸ್‌ಐಟಿ ತನಿಖೆಯಲ್ಲಿ ಬಹಿರಂಗವಾಗಿದೆ.

ಏನಿದು ತಿರುಪತಿ ಲಡ್ಡು ವಿವಾದ?

ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಈ ಹಿಂದಿನ YSRCP ಸರ್ಕಾರದ ಅವಧಿಯಲ್ಲಿ ಲಡ್ಡು ತಯಾರಿಸಲು ಕಳಪೆ ಗುಣಮಟ್ಟದ, ಪ್ರಾಣಿಗಳ ಕೊಬ್ಬು ಮಿಶ್ರಿತ ಕಲಬೆರಕೆ ತುಪ್ಪವನ್ನು ಬಳಸಲಾಗಿದೆ ಎಂದು 2024ರ ಸೆಪ್ಟೆಂಬರ್‌ನಲ್ಲಿ ಆರೋಪಿಸಿದ್ದಾರೆ. ಪ್ರಯೋಗಾಲಯ ವರದಿಯೂ ಇದನ್ನು ಸಾಬೀತುಪಡಿಸಿದೆ ಎಂದು ಹೇಳಲಾಗಿದೆ.

ಈ ವಿವಾದವು ಆಂಧ್ರಪ್ರದೇಶದಲ್ಲಿ ರಾಜಕೀಯ ಮೇಲಾಟಕ್ಕೂ ಕಾರಣವಾಗಿತ್ತು. ಈಗಾಗಲೇ ಸುಪ್ರೀಂ ಕೋರ್ಟ್ ಈ ವಿಷಯದಲ್ಲಿ ಮಧ್ಯಪ್ರವೇಶಿಸಿ, ರಾಜಕೀಯಕ್ಕಾಗಿ ದೇವಸ್ಥಾನದ ಹೆಸರನ್ನು ಬಳಸದಂತೆ ಸೂಚಿಸಿದೆ. ಸದ್ಯ, ಈ ಪ್ರಕರಣದ ಬಗ್ಗೆ ಸಿಬಿಐ ಒಳಗೊಂಡ ಎಸ್‌ಐಟಿ ತಂಡ ತನಿಖೆ ನಡೆಸಿ ಆರೋಪಪಟ್ಟಿ ಸಲ್ಲಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...