ಆರು ಜನರ ಹತ್ಯೆಯಾದ ಎರಡು ವರ್ಷಗಳ ನಂತರ 2 ಎಫ್‌ಐಆರ್‌ ದಾಖಲಿಸಿದ ಸಿಬಿಐ!

Date:

ಅಸ್ಸಾಂ ಪೊಲೀಸರು ಮತ್ತು ಜನಸಮೂಹದ ನಡುವಿನ ಘರ್ಷಣೆಯಲ್ಲಿ ಅಸ್ಸಾಂ ಫಾರೆಸ್ಟ್ ಗಾರ್ಡ್ ಸೇರಿದಂತೆ ಆರು ಮಂದಿ ಸಾವನ್ನಪ್ಪಿ ಹಲವಾರು ಮಂದಿ ಗಾಯಗೊಂಡ ಘಟನೆ ನಡೆದು ಎರಡು ವರ್ಷಗಳ ನಂತರ ಮಂಗಳವಾರ ಸಿಬಿಐ ಕೊಲೆ ಮತ್ತು ಕ್ರಿಮಿನಲ್ ಪಿತೂರಿಯ ಎಫ್‌ಐಆರ್ ದಾಖಲಿಸಿದೆ.

ಮೇಘಾಲಯದ ಹಳ್ಳಿಯೊಂದರ ಬಳಿ ಮರ ಕಳ್ಳಸಾಗಣೆ ಯತ್ನದ ಆರೋಪದಲ್ಲಿ ಈ ಘರ್ಷಣೆ ನಡೆದಿತ್ತು. ಅಸ್ಸಾಂ ಪೊಲೀಸರ ದೂರಿನ ಮೇರೆಗೆ ಪೊಲೀಸ್ ತಂಡದ ಮೇಲಿನ ದಾಳಿ, ಗಲಭೆ, ಸುಲಿಗೆ, ಕೊಲೆಗೆ ಸಂಬಂಧಿಸಿದಂತೆ ಸಿಬಿಐ ಮತ್ತೊಂದು ಪ್ರಕರಣವನ್ನು ದಾಖಲಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ?  ಲೋಕಸಭೆ ಚುನಾವಣೆ| ನೀತಿ ಸಂಹಿತೆ ಉಲ್ಲಂಘನೆ; ಮೆಹಬೂಬಾ ಮುಫ್ತಿ ವಿರುದ್ಧ ಎಫ್‌ಐಆರ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಸ್ಸಾಂ ಮತ್ತು ಮೇಘಾಲಯ ಸರ್ಕಾರಗಳು ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ ಹಸ್ತಾಂತರಿಸಲು ನಿರ್ಧರಿಸಿದ ಬೆನ್ನಲ್ಲೇ ಮೇಘಾಲಯದ ಪಶ್ಚಿಮ ಜೈನ್ತಿಯಾ ಹಿಲ್ಸ್ ಜಿಲ್ಲೆಯ ನಾರ್ಟಿಯಾಂಗ್ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸ್ಟೀವನ್ಸನ್ ದಖರ್ ಅವರು ನೀಡಿದ ದೂರಿನ ಮೇ ಮಂಗಳರೆಗೆವಾರ ಮೊದಲ ಪ್ರಕರಣ ದಾಖಲಿಸಲಾಗಿದೆ.

2022ರ ನವೆಂಬರ್ 22ರಂದು ಮುಂಜಾನೆ 3 ಗಂಟೆಯ ಸುಮಾರಿಗೆ ಅಸ್ಸಾಂನ ಪಶ್ಚಿಮ ಕರ್ಬಿ ಆಂಗ್ಲಾಂಗ್ ಜಿಲ್ಲೆ ಮತ್ತು ಮೇಘಾಲಯದ ಪಶ್ಚಿಮ ಜೈನ್ತಿಯಾ ಹಿಲ್ಸ್‌ನ ಮುಖೋಹ್ ಗ್ರಾಮದ ಗಡಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಘಟನೆಯ ನಂತರ, ಅಸ್ಸಾಂ ಪೊಲೀಸರು ಘರ್ಷಣೆಯ ಸಮಯದಲ್ಲಿ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿರುವುದಾಗಿ ಹೇಳಿಕೊಂಡಿದ್ದಾರೆ. ಈ ಘಟನೆಯಲ್ಲಿ ಅರಣ್ಯ ಸಿಬ್ಬಂದಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ.

ಇದನ್ನು ಓದಿದ್ದೀರಾ? ಮುರುಘಾಶ್ರೀ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿದ್ದ ಸಂತ್ರಸ್ತೆಗೆ ಕಿರುಕುಳ; ಚಿಕ್ಕಪ್ಪನ ವಿರುದ್ಧ ಎಫ್‌ಐಆರ್

ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರು ಗಾಯಗೊಂಡು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ಮೃತರಲ್ಲಿ ಐವರು ಮೇಘಾಲಯದವರಾಗಿದ್ದಾರೆ. “ಅಸ್ಸಾಂ ಪೊಲೀಸರಿಂದ ಅಪ್ರಚೋದಿತ ಗುಂಡಿನ ದಾಳಿ ನಡೆದಿದೆ, ಇದು ಅಮಾನವೀಯ” ಎಂದು ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಹೇಳಿದ್ದರು.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...