ಮುಂಬೈ ಸೆನ್ಸಾರ್ ಮಂಡಳಿ ವಿರುದ್ಧ ನಟ ವಿಶಾಲ್ ಭ್ರಷ್ಟಾಚಾರ ಆರೋಪ: ಸಿಬಿಐ ತನಿಖೆ

Date:

ತಮಿಳು ನಟ ವಿಶಾಲ್ ಅಭಿನಯದ ಮಾರ್ಕ್‌ ಆಂಟನಿ ಚಿತ್ರಕ್ಕೆ ಪ್ರಮಾಣಪತ್ರ ಪಡೆಯಲು ಲಂಚ ಪಾವತಿಸಿದ್ದಾರೆ ಎಂಬ ಆರೋಪದ ಮೇಲೆ ಕೇಂದ್ರಿಯ ತನಿಖಾ ದಳ (ಸಿಬಿಐ) ಮುಂಬೈನ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ(ಸಿಬಿಎಫ್‌ಸಿ) ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿದೆ.

ನಟ ವಿಶಾಲ್ ಅವರು ತಮ್ಮ ಇತ್ತೀಚಿಗೆ ಬಿಡುಗಡೆಯಾದ ‘ಮಾರ್ಕ್ ಆಂಟನಿ’ ಚಿತ್ರದ ಹಿಂದಿ ಸೆನ್ಸಾರ್ ಹಕ್ಕುಗಳಿಗಾಗಿ 6.5 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದಕ್ಕಾಗಿ ಸಿಬಿಎಫ್‌ಸಿ ಮುಂಬೈ ಕಚೇರಿಯ ವಿರುದ್ಧ ಆರೋಪಿಸಿದ್ದರು.

ಈ ಆರೋಪದ ನಂತರ ಮೆರ್ಲಿನ್ ಮೆನಗಾ, ಜೀಜಾ ರಾಮದಾಸ್, ರಾಜನ್ ಎಂ ಮತ್ತು ಇಬ್ಬರು ಅಪರಿಚಿತ ವ್ಯಕ್ತಿಗಳ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿವುದರ ಜೊತೆ ಆರೋಪಿಗಳ ಮನೆ ಸೇರಿದಂತೆ ಮುಂಬೈನ ನಾಲ್ಕು ಸ್ಥಳಗಳಲ್ಲಿ ಶೋಧ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸೆಪ್ಟೆಂಬರ್ 2023 ರಲ್ಲಿ, ಖಾಸಗಿ ವ್ಯಕ್ತಿಯೊಬ್ಬರು 7 ಲಕ್ಷ ರೂಪಾಯಿ ಲಂಚವನ್ನು ಪಡೆಯಲು ಇತರರೊಂದಿಗೆ ಸಂಚು ರೂಪಿಸಿದರು ಮತ್ತು ಹಿಂದಿಗೆ ಡಬ್ ಆಗಿರುವ ಚಲನಚಿತ್ರಕ್ಕೆ ಮುಂಬೈನ ಸಿಬಿಎಸ್‌ಸಿಯಿಂದ ಅಗತ್ಯ ಸೆನ್ಸಾರ್ ಪ್ರಮಾಣಪತ್ರವನ್ನು ಪಡೆದರು” ಎಂದು ಸಿಬಿಐ ವಕ್ತಾರರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? 14ನೇ ಏಕದಿನ ವಿಶ್ವಕಪ್‌ ಕ್ರಿಕೆಟ್ ಇಂದಿನಿಂದ ಆರಂಭ: ತಂಡಗಳು, ಪಂದ್ಯಗಳು, ಕ್ರೀಡಾಂಗಣ ಇತ್ಯಾದಿ ಫುಲ್‌ ಡೀಟೇಲ್ಸ್

ಆರೋಪಿಗಳು ಆರಂಭದಲ್ಲಿ ಸಿಬಿಎಫ್‌ಸಿ ಮುಂಬೈ ಅಧಿಕಾರಿಗಳ ಪರವಾಗಿ ಲಂಚಕ್ಕೆ ಬೇಡಿಕೆಯಿಟ್ಟಿದ್ದು, ಮಾತುಕತೆಯ ನಂತರ ಮೊತ್ತವನ್ನು 6.54 ಲಕ್ಷಕ್ಕೆ ಇಳಿಸಲಾಯಿತು ಎಂದು ಅವರು ಹೇಳಿದರು.

ಇತರ ಇಬ್ಬರು ಆರೋಪಿಗಳ ಎರಡು ಬ್ಯಾಂಕ್ ಖಾತೆಗಳಲ್ಲಿ ಸಿಬಿಎಫ್‌ಸಿ, ಮುಂಬೈ ಅಧಿಕಾರಿಗಳ ಪರವಾಗಿ 6,54,000 ರೂಪಾಯಿಗಳನ್ನು ಲಂಚವಾಗಿ ಸ್ವೀಕರಿಸಿದ್ದಾರೆ. ತದನಂತರ, 26/09/2023 ರಂದು, ಹಿಂದಿಗೆ ಡಬ್ ಮಾಡಲಾದ ಚಲನಚಿತ್ರಕ್ಕೆ ಅಗತ್ಯವಿರುವ ಪ್ರಮಾಣಪತ್ರವನ್ನು ಮುಂಬೈನ ಸಿಬಿಎಫ್‌ಸಿಯಿಂದ ನೀಡಲಾಯಿತು.

ಇತ್ತೀಚೆಗೆ ಬಿಡುಗಡೆಯಾದ ತಮಿಳು ಚಿತ್ರ ‘ಮಾರ್ಕ್ ಆಂಟನಿ’, ವಿಶಾಲ್ ಮತ್ತು ಎಸ್‌ಜೆ ಸೂರ್ಯ ನಟಿಸಿದ್ದು , ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಸಕಾರಾತ್ಮಕ ವಿಮರ್ಶೆಗಳನ್ನು ಪಡೆಯಿತು. ಚಿತ್ರದ ಯಶಸ್ಸಿನಲ್ಲಿ, ನಿರ್ಮಾಪಕರು ಹಿಂದಿ ಡಬ್ ಆವೃತ್ತಿಯನ್ನು ಬಿಡುಗಡೆ ಮಾಡಲು ಯೋಚಿಸುತ್ತಿದ್ದರು.

ಹೀಗಿರುವಾಗಲೇ ನಟ-ನಿರ್ಮಾಪಕ ವಿಶಾಲ್ ವಿಡಿಯೋ ಬಿಡುಗಡೆ ಮಾಡಿದ್ದು, ಚಿತ್ರದ ಹಿಂದಿ ಅವತರಣಿಕೆಗಾಗಿ ಮುಂಬೈನ ಸಿಬಿಎಫ್‌ಸಿ ಕಚೇರಿ 6.5 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದೆ ಎಂದು ಆರೋಪಿಸಿದ್ದಾರೆ.

“ಭ್ರಷ್ಟಾಚಾರವನ್ನು ಬೆಳ್ಳಿ ಪರದೆಯ ಮೇಲೆ ತೋರಿಸುವುದು ಒಳ್ಳೆಯದು. ಆದರೆ ನಿಜ ಜೀವನದಲ್ಲಿ ಅಲ್ಲ. ನಾನು ಇದನ್ನು ಜೀರ್ಣಿಸಿಕೊಳ್ಳಲು ಸಾಧ್ಯವಿಲ್ಲ. ವಿಶೇಷವಾಗಿ ಸರ್ಕಾರಿ ಕಚೇರಿಗಳಲ್ಲಿ. ಸಿಬಿಎಫ್‌ಸಿ ಮುಂಬೈ ಕಚೇರಿಯಲ್ಲಿ ಇನ್ನೂ ಕೆಟ್ಟದಾಗಿ ನಡೆಯುತ್ತಿದೆ. ನನ್ನ ಚಿತ್ರ ಮಾರ್ಕ್ ಆಂಟನಿ ಹಿಂದಿ ಆವೃತ್ತಿಗೆ  6.5 ಲಕ್ಷ ರೂ. ಪಾವತಿಸಬೇಕಾಗಿತ್ತು. 2 ವಹಿವಾಟುಗಳು ನಡೆದವು. ಪ್ರದರ್ಶನಕ್ಕೆ 3 ಲಕ್ಷಗಳು ಮತ್ತು ಪ್ರಮಾಣಪತ್ರಕ್ಕಾಗಿ 3.5 ಲಕ್ಷಗಳು. ನನ್ನ ವೃತ್ತಿಜೀವನದಲ್ಲಿ ಎಂದಿಗೂ ಈ ಪರಿಸ್ಥಿತಿಯನ್ನು ಎದುರಿಸಲಿಲ್ಲ” ಎಂದು ಟ್ವಿಟರ್‌ನಲ್ಲಿ ಆರೋಪಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...