ಛತ್ತೀಸ್‌ಗಢ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ನಿವಾಸದ ಮೇಲೆ ಸಿಬಿಐ ದಾಳಿ

Date:

ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಭೂಪೇಶ್ ಬಘೇಲ್ ಅವರ ಭಿಲಾಯಿ ಮತ್ತು ರಾಯಪುರದಲ್ಲಿರುವ ನಿವಾಸದ ಮೇಲೆ ಕೇಂದ್ರೀಯ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಬುಧವಾರ ಬೆಳಿಗ್ಗೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

ಮಹಾದೇವ್ ಆನ್‌ಲೈನ್ ಆ್ಯಪ್ ಬೆಟ್ಟಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಬಘೇಲ್ ನಿವಾಸದ ಮೇಲೆ ದಾಳಿ ನಡೆದಿದೆ. ಇನ್ನು ಸಿಬಿಐ ತಂಡವು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳಾದ ಆನಂದ್ ಛಾಬ್ರಾ, ಅಭಿಷೇಕ್ ಪಲ್ಲವ ಮತ್ತು ಆರಿಫ್ ಶೇಖ್, ಕಾಂಗ್ರೆಸ್ ಭಿಲಾಯಿ ಶಾಸಕ ದೇವೇಂದ್ರ ಯಾದವ್, ಮಾಜಿ ಐಎಎಸ್ ಅಧಿಕಾರಿ ಅನಿಲ್ ತುತೇಜಾ ಮತ್ತು ಇತರ ಅಧಿಕಾರಿಗಳ ನಿವಾಸಗಳ ಮೇಲೂ ದಾಳಿ ಮಾಡಿದ್ದು, ಶೋಧ ನಡೆಸುತ್ತಿದ್ದಾರೆ.

ಇದನ್ನು ಓದಿದ್ದೀರಾ? ಗೋಡ್ಸೆ ಭಾರತದ ಸುಪುತ್ರ ಎನ್ನಲು ಬಿಜೆಪಿಯವರಿಗೆ ನಾಚಿಕೆಯಾಗಬೇಕು: ಭೂಪೇಶ್ ಬಘೇಲ್ ಟೀಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾರ್ಚ್ 10ರಂದು ಅಬಕಾರಿ ಹಗರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ (ಇಡಿ) ಭಿಲಾಯಿಯಲ್ಲಿರುವ ಬಘೇಲ್ ನಿವಾಸದಲ್ಲಿ ಶೋಧ ನಡೆಸಿತ್ತು.

2023ರ ಡಿಸೆಂಬರ್‌ನಲ್ಲಿ ಛತ್ತೀಸ್‌ಗಢದಲ್ಲಿ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದಿದೆ. ಕಳೆದ ವರ್ಷ ಆಗಸ್ಟ್‌ನಲ್ಲಿ ಮಹಾದೇವ್ ಆ್ಯಪ್ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲು ಶಿಫಾರಸು ಮಾಡಿದ್ದು, ಪೊಲೀಸರು ಈ ವರ್ಷದ ಜನವರಿಯಲ್ಲಿ ಸಿಬಿಐಗೆ ವರ್ಗಾಯಿಸಿದ್ದಾರೆ.

ಇನ್ನು ತನ್ನ ನಿವಾಸದ ಮೇಲೆ ದಾಳಿ ನಡೆಯುತ್ತಿದ್ದಂತೆ ಭೂಪೇಶ್ ಬಘೇಲ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಲಾಗಿದೆ. “ಈಗ ಸಿಬಿಐ ಬಂದಿದೆ. ಅಹಮದಾಬಾದ್‌ನಲ್ಲಿ ಏಪ್ರಿಲ್‌ 8-9ರಂದು ನಡೆಯಲಿರುವ ಎಐಸಿಸಿ ಸಭೆಗೆ ಹಾಜರಾಗಲು ಇಂದು ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ದೆಹಲಿಗೆ ತೆರಳಬೇಕಾಗಿತ್ತು. ಅದಕ್ಕೂ ಮುನ್ನವೇ ಸಿಬಿಐ ರಾಯಪುರ ಮತ್ತು ಭಿಲಾಯಿ ನಿವಾಸಕ್ಕೆ ತಲುಪಿದ್ದಾರೆ” ಎಂದು ಉಲ್ಲೇಖಿಸಲಾಗಿದೆ.

ಇನ್ನು ದಾಳಿಯನ್ನು ಮಾಜಿ ಉಪ ಮುಖ್ಯ ಕಾರ್ಯದರ್ಶಿ ಟಿ ಎಸ್‌ ಸಿಂಗ್‌ದಿಯೊ ಖಂಡಿಸಿದ್ದಾರೆ. “ಈ ದಾಳಿಯು ರಾಜಕೀಯ ವಿರೋಧಿಗಳಿಗೆ ಕಿರುಕುಳ ನೀಡುವ ಪ್ರಯತ್ನ” ಎಂದಿದ್ದಾರೆ.

ಮಹಾದೇವ ಆನ್‌ಲೈನ್ ಬೆಟ್ಟಿಂಗ್ ಅಪ್ಲಿಕೇಶನ್ ಬೇನಾಮಿ ಬ್ಯಾಂಕ್‌ ಖಾತೆಗಳಿಗೆ ವೆಬ್ ಮೂಲಕ ಹಣ ವರ್ಗಾವಣೆ ಮಾಡಿಕೊಳ್ಳುತ್ತದೆ. ಆ್ಯಪ್ ಬೆಟ್ಟಿಂಗ್ ಹಗರಣವು 6000 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ್ದಾಗಿದೆ ಎಂದು ಅಂದಾಜಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...