ನಾಳೆಯಿಂದ ಸಿಬಿಎಸ್‌ಇ 10,12ನೇ ತರಗತಿ ಬೋರ್ಡ್ ಪರೀಕ್ಷೆ; ಸೋರಿಕೆ ವದಂತಿ ನಂಬಬೇಡಿ ಎಂದ ಮಂಡಳಿ

Date:

2026ನೇ ಸಿಬಿಎಸ್‌ಇ 10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಗಳು ನಾಳೆ(ಫೆಬ್ರವರಿ 17,2026) ಆರಂಭವಾಗಲಿವೆ. ಈ ಹಿನ್ನಲೆಯಲ್ಲಿ ಕೇಂದ್ರ ಪ್ರೌಢಶಿಕ್ಷಣ ಮಂಡಳಿಯು ಮಹತ್ವದ ಸೂಚನೆಯೊಂದನ್ನು ಹೊರಡಿಸಿದ್ದು, ಪರೀಕ್ಷಾ ಅಕ್ರಮಗಳ ಕುರಿತ ಸುಳ್ಳು ಸುದ್ದಿಗಳು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆಯ ವದಂತಿಗಳ ವಿರುದ್ಧ ಕಠಿಣ ಎಚ್ಚರಿಕೆ ನೀಡಿದೆ.

​ವಿಶೇಷವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಪ್ರಶ್ನೆ ಪತ್ರಿಕೆ ಸೋರಿಕೆಯ ಉಹಾಪೋಹಗಳ ಕುರಿತು ಮಂಡಳಿ ಗಂಭೀರವಾಗಿ ಪ್ರತಿಕ್ರಿಯಿಸಿದೆ. ಕಳೆದ ಕೆಲವು ವರ್ಷಗಳಲ್ಲಿ ಪರೀಕ್ಷಾ ಸಮಯದಲ್ಲಿ ಕಿಡಿಗೇಡಿಗಳು ತಪ್ಪು ಮಾಹಿತಿಗಳನ್ನು ಹರಡಲು ಯತ್ನಿಸಿರುವುದನ್ನು ಮಂಡಳಿ ಗುರುತಿಸಿದೆ. 10 ಅಥವಾ 12ನೇ ತರಗತಿಯ ಪ್ರಶ್ನ ಪತ್ರಿಕೆ ಸೋರಿಕೆಯಾಗಿದೆ ಎಂದು ಮಾಹಿತಿಗಳನ್ನು ಹರಿಬಿಡುವುದು, ಹಾಗೂ ನಕಲಿ ಪ್ರಶ್ನಪತ್ರಿಕೆಗಳನ್ನೇ ಅಸಲಿ ಎಂದು ಅಂತರ್ಜಾಲದಲ್ಲಿ ಹಂಚಿಕೊಳ್ಳುವ ಕೃತ್ಯಗಳು ಕಂಡುಬಂದಿದೆ. ಇವೆಲ್ಲವೂ ಕೇವಲ ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಗೊಂದಲಕ್ಕೀಡುಮಾಡುವ ಪ್ರಯತ್ನಗಳಾಗಿವೆ ಎಂದು ಸಿಬಿಎಸ್‌ಸಿ ತಿಳಿಸಿದೆ.

ಪರೀಕ್ಷೆಯ ಅಂತಿಮ ಹಂತದ ತಯಾರಿಯಲ್ಲಿರುವಾಗ ಇಂತಹ ವದಂತಿಗಳು ವಿದ್ಯಾರ್ಥಿಗಳ ಏಕಾಗ್ರತೆಯನ್ನು ಹಾಳುಮಾಡುವ ಸಾಧ್ಯತೆ ಇರುತ್ತದೆ. ಪರಿಶೀಲಿಸಿದ ಇಂತಹ ಸಂದೇಶಗಳನ್ನು ನಂಬುವುದು, ಹಂಚಿಕೊಳ್ಳುವುದು ಅಥವಾ ಫಾರ್ವರ್ಡ್ ಮಾಡುವುದರಿಂದ ಅನಗತ್ಯ ಭೀತಿ ಉಂಟಾಗಬಹುದು. ವಿದ್ಯಾರ್ಥಿಗಳು ಶಾಂತಚಿತ್ತರಾಗಿ ಪರೀಕ್ಷೆಗೆ ಸಿದ್ಧರಾಗಬೇಕಾದ ಸಮಯದಲ್ಲಿ, ಇಂತಹ ವದಂತಿಗಳು ಆತಂಕವನ್ನು ಸೃಷ್ಟಿಸುತ್ತವೆ. ಆದ್ದರಿಂದ ಪೋಷಕರು, ವಿದ್ಯಾರ್ಥಿಗಳು ಮತ್ತು ಶಾಲೆಗಳು ಜವಾಬ್ದಾರಿಯುತವಾಗಿ ವರ್ತಿಸಬೇಕು ಮತ್ತು ಸಾಮಾಜಿಕ ಜಾಲತಾಣಗಳಲ್ಲಿನ ಅನಧಿಕೃತ ಮಾಹಿತಿಗಳನ್ನು ನಂಬಬಾರದು ಎಂದು ಮಂಡಳಿ ಮನವಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಖರ್ಗೆ ಭಾಷಣ ಕಿತ್ತು ಹಾಕಿದ್ದು ಖಂಡನೀಯ; ಅಂದು ದ್ರೋಣಾಚಾರ್ಯ, ಇಂದು ಸಂಘಾಚಾರ್ಯ!

ಪರೀಕ್ಷೆಗಳು ಸುಗಮವಾಗಿ, ಸುರಕ್ಷಿತವಾಗಿ ಮತ್ತು ನ್ಯಾಯಯುತವಾಗಿ ನಡೆಯಲು ಮಂಡಳಿಯು ಎಲ್ಲಾ ರೀತಿಯ ಬಿಗಿ ಭದ್ರತಾ ವ್ಯವಸ್ಥೆಗಳನ್ನು ಕೈಗೊಂಡಿದೆ. ಪರೀಕ್ಷಾ ಪ್ರಕ್ರಿಯೆಯ ಪಾವಿತ್ರ್ಯತೆಯನ್ನು ಕಾಪಾಡಲು ಹಿಂದಿನ ವರ್ಷಗಳಂತೆಯೇ ಬಲವಾದ ಕಾರ್ಯವಿಧಾನಗಳನ್ನು ಅಳವಡಿಸಲಾಗಿದೆ ಎಂದು ಸಿಬಿಎಸ್‌ಇ ಭರವಸೆ ನೀಡಿದೆ. ​ಒಂದು ವೇಳೆ ಯಾರಾದರೂ ತಪ್ಪು ಮಾಹಿತಿ ಹರಡಿದರೆ ಅಥವಾ ಪರೀಕ್ಷಾ ಪ್ರಕ್ರಿಯೆಗೆ ಅಡ್ಡಿಪಡಿಸಿದರೆ, ಸಂಬಂಧಿತ ನಿಯಮಗಳ ಅಡಿಯಲ್ಲಿ ಅಂತಹವರ ವಿರುದ್ಧ ಅತ್ಯಂತ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮಂಡಳಿ ಎಚ್ಚರಿಸಿದೆ.

10 ಮತ್ತು 12ನೇ ತರಗತಿ ಪರೀಕ್ಷೆಗಳ ಕುರಿತು ನೈಜ ಮಾಹಿತಿ ಮತ್ತು ಸ್ಪಷ್ಟೀಕರಣಕ್ಕಾಗಿ ಕೇವಲ ಅಧಿಕೃತ ಮೂಲಗಳನ್ನು ಮಾತ್ರ ಅವಲಂಬಿಸುವಂತೆ ಸಿಬಿಎಸ್‌ಇ ಸೂಚಿಸಿದೆ.
​ಅಧಿಕೃತ ವೆಬ್‌ಸೈಟ್: https://www.cbse.gov.in
​ಸಂಬಂಧಪಟ್ಟ ಸಿಬಿಎಸ್‌ಇ ಪ್ರಾದೇಶಿಕ ಕಚೇರಿಗಳು.
​ನವದೆಹಲಿಯಲ್ಲಿರುವ ಸಿಬಿಎಸ್‌ಇ ಕಚೇರಿಗಳು

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...