ಪೂಂಚ್ ವಲಯದಲ್ಲಿ ಪಾಕ್‌ನಿಂದ ಕದನ ವಿರಾಮ ಉಲ್ಲಂಘನೆ; ಗಡಿಯಲ್ಲಿ ಬಂಕರ್‌ಗಳ ನಿಯೋಜನೆ

Date:

ಕಾಶ್ಮೀರದ ಪಹಲ್ಗಾಮ್‌ ಉಗ್ರರ ದಾಳಿಯ ನಂತರ ಭಾರತ – ಪಾಕ್‌ ಗಡಿಗಳಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆ (ಎಲ್‌ಒಸಿ) ಉದ್ದಕ್ಕೂ ಪಾಕಿಸ್ತಾನಿ ಪಡೆಗಳು ಸತತ ನಾಲ್ಕನೇ ರಾತ್ರಿಯೂ ಅಪ್ರಚೋದಿತ ಗುಂಡಿನ ದಾಳಿ ನಡೆಸಿವೆ ಎಂದು ಅಧಿಕಾರಿಗಳು ಸೋಮವಾರ ಬೆಳಿಗ್ಗೆ ತಿಳಿಸಿದ್ದಾರೆ.

ಈ ನಡುವೆ ಪಾಕಿಸ್ತಾನವು ಗಡಿಯಲ್ಲಿ ಬಂಕರ್‌ಗಳನ್ನು ನಿಯೋಜಿಸುತ್ತಿದ್ದು, ಯುದ್ಧೋಪಕರಣಗಳೊಂದಿಗೆ ಟರ್ಕಿಶ್‌ ಯುದ್ಧ ವಿಮಾನಗಳು ಆಗಮಿಸುತ್ತಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.

“ಕುಪ್ವಾರಾ ಮತ್ತು ಪೂಂಚ್ ಜಿಲ್ಲೆಗಳ ಎದುರಿನ ಪ್ರದೇಶಗಳಲ್ಲಿ ಪಾಕಿಸ್ತಾನಿ ಸೇನಾ ನೆಲೆಗಳು ನಿಯಂತ್ರಣ ರೇಖೆಯುದ್ದಕ್ಕೂ ಅಪ್ರಚೋದಿತ ಗುಂಡಿನ ದಾಳಿ ನಡೆಸಿವೆ. ಭಾರತೀಯ ಸೇನೆಯು ಅದಕ್ಕೆ ತಕ್ಷಣವೇ ಪರಿಣಾಮಕಾರಿಯಾಗಿ ಪ್ರತಿಕ್ರಿಯೆ ನೀಡಿದೆ,” ಎಂದು ಭಾರತೀಯ ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೂಂಚ್ ವಲಯದಲ್ಲಿ ಪಾಕಿಸ್ತಾನ ಸೇನೆಯು ಕದನ ವಿರಾಮವನ್ನು ಉಲ್ಲಂಘಿಸಿದ್ದು ಇದೇ ಮೊದಲು. ಕಳೆದ ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ ನಂತರ ಭಾರತ ಮತ್ತು ಪಾಕಿಸ್ತಾನಿ ಪಡೆಗಳ ನಡುವೆ ಗುಂಡಿನ ಚಕಮಕಿ ಪ್ರಾರಂಭವಾಯಿತು.

ಈ ಸುದ್ದಿ ಓದಿದ್ದೀರಾ? ಕ್ರಿಕೆಟಿಗ ಶೋಯೆಬ್‌ ಅಖ್ತರ್ ಒಳಗೊಂಡು ಪಾಕಿಸ್ತಾನದ ಯೂಟ್ಯೂಬ್‌ ಚಾನೆಲ್‌ಗಳನ್ನು ನಿಷೇಧಿಸಿದ ಕೇಂದ್ರ

ಏ.22 ರಂದು 26 ಜನರ ಸಾವಿಗೆ ಕಾರಣವಾದ ಪಹಲ್ಗಾಮ್‌ ಭಯೋತ್ಪಾದಕ ದಾಳಿಯ ನಂತರ ಭದ್ರತಾ ಪಡೆಗಳು ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವುದರ ನಡುವೆ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಉದ್ವಿಗ್ನತೆ ಹೆಚ್ಚಾಗಿದೆ.

ಕುಲ್ಗಾಮ್ ಪೊಲೀಸರು, ಸೇನೆ ಮತ್ತು ಸಿಆರ್‌ಪಿಎಫ್ ಜೊತೆ ಜಂಟಿ ಕಾರ್ಯಾಚರಣೆ ನಡೆಸಿ, ದಕ್ಷಿಣ ಕಾಶ್ಮೀರದ ಕುಲ್ಗಾಮ್​ ಜಿಲ್ಲೆಯಲ್ಲಿ ಇಬ್ಬರು ಭಯೋತ್ಪಾದಕ ಸಹಚರರನ್ನು ಬಂಧಿಸಿ, ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.

ಅಧಿಕೃತ ಪ್ರಕಟಣೆಯ ಪ್ರಕಾರ, ಖೈಮೋಹ್‌ನ ಮಟಲ್‌ಹಾಮಾ ಚೌಕ್ ಥೋಕರ್‌ಪೋರಾದಲ್ಲಿ ಸ್ಥಾಪಿಸಲಾದ ಚೆಕ್‌ಪಾಯಿಂಟ್‌ನಲ್ಲಿ ಇಬ್ಬರು ವ್ಯಕ್ತಿಗಳನ್ನು ತಡೆದು ನಂತರ ಬಂಧಿಸಲಾಯಿತು. ಬಂಧಿತರಿಂದ ಎರಡು ಪಿಸ್ತೂಲ್, ಎರಡು ಪಿಸ್ತೂಲ್ ಮ್ಯಾಗಜೀನ್‌ಗಳು ಮತ್ತು 25 ಸುತ್ತು ಪಿಸ್ತೂಲ್ ಮದ್ದುಗುಂಡುಗಳನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿವೆ. ಈ ಸಂಬಂಧ ಖೈಮೋಹ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...