ಕೋಲ್ಕತ್ತಾ | ಸಿಇಸಿ ಜ್ಞಾನೇಶ್ ಕುಮಾರ್‌ ‘ಗೋ ಬ್ಯಾಕ್’ ಘೋಷಣೆ; ಕಪ್ಪು ಬಾವುಟ ಪ್ರದರ್ಶನ

Date:

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು ಸೋಮವಾರ ಪಶ್ಚಿಮ ಬಂಗಾಳದ ಕೋಲ್ಕತ್ತಾದ ಪೂಜ್ಯ ಕಾಲಿಘಾಟ್ ದೇವಾಲಯಕ್ಕೆ ಭೇಟಿ ನೀಡಿದ್ದು ಅಲ್ಲಿನ ಸ್ಥಳೀಯರು ಸಿಇಸಿ ವಿರುದ್ದ ಪ್ರತಿಭಟಿಸಿದ್ದಾರೆ. ಹಾಗೆಯೇ ಕಪ್ಪು ಬಾವುಟವನ್ನೂ ಪ್ರದರ್ಶಿಸಿದ್ದಾರೆ. ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದು, ಸಿಇಸಿ ದೇವಾಲಯಕ್ಕೆ ಭೇಟಿ ನೀಡಲು ಅವಕಾಶ ಮಾಡಿಕೊಟ್ಟಿದ್ದಾರೆ.

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿಚಾರದಲ್ಲಿ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ಟಿಎಂಸಿ ಮತ್ತು ಎಡಪಕ್ಷಗಳು ಎಸ್‌ಐಆರ್ ಪ್ರಕ್ರಿಯೆಯನ್ನು ನಿರಂತರವಾಗಿ ವಿರೋಧಿಸುತ್ತಲೇ ಬಂದಿದ್ದಾರೆ. ಎಸ್‌ಐಆರ್ ಪ್ರಕ್ರಿಯೆ ಮೂಲಕ ಲಕ್ಷಾಂತರ ಅರ್ಹ ಮತದಾರರ ಮತದಾನದ ಹಕ್ಕನ್ನು ಕಸಿಯಲಾಗುತ್ತಿದೆ ಎಂಬುದು ಈ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನು ಓದಿದ್ದೀರಾ? ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾನುವಾರ ಕುಮಾರ್ ಕೋಲ್ಕತ್ತಾಕ್ಕೆ ಭೇಟಿ ನೀಡಿದ ವೇಳೆಯೂ ವಿಮಾನ ನಿಲ್ದಾಣದ ಬಳಿ ಪ್ರತಿಭಟನೆ ಕಂಡುಬಂದಿದೆ. ಸಿಇಸಿ ಬೆಂಗಾವಲು ವಿಮಾನ ನಿಲ್ದಾಣದಿಂದ ಹೊರಡುವಾಗ, ಟಿಎಂಸಿ ಕಾರ್ಯಕರ್ತರು ‘ಗೋ ಬ್ಯಾಕ್’ ಘೋಷಣೆಗಳನ್ನು ಕೂಗಿದ್ದಾರೆ. ಹಾಗೆಯೇ ಸಿಇಸಿ ಅವರ ಬೆಂಗಾವಲು ವಿಐಪಿ ರಸ್ತೆಯಲ್ಲಿ ಹಾದು ಹೋಗುತ್ತಿದ್ದಾಗಲೂ ಕಪ್ಪು ಬಾವುಟಗಳನ್ನು ಪ್ರದರ್ಶಿಸಲಾಗಿದೆ. ಎಡಪಕ್ಷಗಳ ಕಾರ್ಯಕರ್ತರು ವಿಮಾನ ನಿಲ್ದಾಣದ ಹೊರಗೆ ಪ್ರತಿಭಟನೆ ನಡೆಸಿದ್ದಾರೆ. ಇದು ಉದ್ವಿಗ್ನತೆಯನ್ನು ಇನ್ನಷ್ಟೂ ಹೆಚ್ಚಿಸಿದೆ.

ಪ್ರತಿಭಟನೆಗಳು ಉಲ್ಬಣಗೊಳ್ಳದಂತೆ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ವಿಧಾನಸಭೆ ಚುನಾವಣೆ ಮುನ್ನ ಕುಮಾರ್ ಅವರ ಮೂರು ದಿನಗಳ ಭೇಟಿಗಾಗಿ ಸಾಕಷ್ಟು ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಕುಮಾರ್ ಅವರು ರಾಜಕೀಯ ಪಕ್ಷಗಳು, ಇತರೆ ಸಂಸ್ಥೆಗಳು ಮತ್ತು ಹಿರಿಯ ಆಡಳಿತ ಅಧಿಕಾರಿಗಳೊಂದಿಗೆ ಸಭೆಗಳನ್ನು ನಡೆಸಿ ವಿಧಾನಸಭಾ ಚುನಾವಣೆಯ ಸಿದ್ಧತೆಗಳನ್ನು ಪರಿಶೀಲಿಸಲಿದ್ದಾರೆ ಎಂದೂ ಪೊಲೀಸರು ಮಾಹಿತಿ ನೀಡಿದ್ದಾರೆ.

ಕುಮಾರ್ ಅವರು ಚುನಾವಣಾ ಆಯುಕ್ತರಾದ ಎಸ್.ಎಸ್. ಸಂಧು ಮತ್ತು ವಿವೇಕ್ ಜೋಶಿ ಅವರೊಂದಿಗೆ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡುತ್ತಿದ್ದು, ಚುನಾವಣಾ ವ್ಯವಸ್ಥೆಗಳನ್ನು ಪರಿಶೀಲಿಸುತ್ತಿದ್ದಾರೆ. ಮಂಗಳವಾರ ಚುನಾವಣಾ ಆಯೋಗ ತಂಡವು ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಮನೋಜ್ ಕುಮಾರ್ ಅಗರ್ವಾಲ್ ಮತ್ತು ಸಿಎಪಿಎಫ್ ನೋಡಲ್ ಅಧಿಕಾರಿಯೊಂದಿಗೆ ಸಭೆ ನಡೆಸಲಿದೆ. ಹಾಗೆಯೇ ಕುಮಾರ್ ಮತ್ತು ಅವರ ತಂಡವು ಕೋಲ್ಕತ್ತಾದಿಂದ ಹೊರಡುವ ಮುನ್ನ ಬೂತ್ ಮಟ್ಟದ ಅಧಿಕಾರಿಗಳೊಂದಿಗೆ ಸಂವಹನ ನಡೆಸಲಿದೆ. ಬಳಿಕ ಅಧಿಕಾರಿಗಳು ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...