ಬೆಲೆ ಹೆಚ್ಚಳ: ಗೋಧಿ ದಾಸ್ತಾನಿಗೆ ಮಿತಿ ಹೇರಿದ ಕೇಂದ್ರ ಸರ್ಕಾರ

Date:

ಕಳೆದ ಒಂದು ತಿಂಗಳಲ್ಲಿ ಗೋಧಿ ದರ ಶೇ.8ರಷ್ಟು ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಸೋಮವಾರ ಗೋಧಿ ದಾಸ್ತಾನಿಗೆ ಮಿತಿಯನ್ನು ನಿಗದಿಪಡಿಸಿದೆ.

ದಾಸ್ತಾನು ಮಿತಿಯಿಂದಾಗಿ ಮುಕ್ತ ಮಾರುಕಟ್ಟೆಯಲ್ಲಿ ಸುಮಾರು 1.5 ಮಿಲಿಯನ್ ಮೆಟ್ರಿಕ್ ಟನ್ ಗೋಧಿಯನ್ನು ದಾಸ್ತಾನು ಇಡಬಹುದು ಮತ್ತು ಬೆಲೆಗಳನ್ನು ಮತ್ತಷ್ಟು ತಗ್ಗಿಸಲಾಗುತ್ತದೆ.

ದೇಶದಲ್ಲಿ ಸಾಕಷ್ಟು ದಾಸ್ತಾನು ಲಭ್ಯವಿರುವುದರಿಂದ ಗೋಧಿ ಆಮದು ನೀತಿಯನ್ನು ತಿರುಚುವ ಯಾವುದೇ ಯೋಜನೆ ಇಲ್ಲ. ಗೋಧಿ ರಫ್ತಿನ ಮೇಲಿನ ನಿಷೇಧ ಮುಂದುವರಿಯುತ್ತದೆ ಎಂದು ಆಹಾರ ಕಾರ್ಯದರ್ಶಿ ಸಂಜೀವ್‌ ಚೋಪ್ರಾ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಗೋಡ್ಸೆ ಭಾರತದ ಸುಪುತ್ರ ಎನ್ನಲು ಬಿಜೆಪಿಯವರಿಗೆ ನಾಚಿಕೆಯಾಗಬೇಕು: ಭೂಪೇಶ್ ಬಘೇಲ್ ಟೀಕೆ

ಅಧಿಸೂಚನೆಯ ಪ್ರಕಾರ, ಸಗಟು ವ್ಯಾಪಾರಿಗಳು ಮತ್ತು ವ್ಯಾಪಾರಿಗಳು ಯಾವುದೇ ಸಮಯದಲ್ಲಿ 3,000 ಮೆಟ್ರಿಕ್‌ ಟನ್‌ ಗೋಧಿಯನ್ನು ದಾಸ್ತಾನು ಇಟ್ಟುಕೊಳ್ಳಬಹುದು. ಚಿಲ್ಲರೆ ವ್ಯಾಪಾರಿಗಳು 10 ಮೆಟ್ರಿಕ್ ಟನ್‌ ದಾಸ್ತಾನು ಇಟ್ಟುಕೊಳ್ಳಬಹುದು.

ದಾಸ್ತಾನು ಮಿತಿಯು ಮಾರ್ಚ್ 2024 ರವರೆಗೆ ಜಾರಿಯಲ್ಲಿರುತ್ತದೆ. ಕೊನೆಯ ಬಾರಿಗೆ 2008ರಲ್ಲಿ ಗೋಧಿಯ ಮೇಲೆ ದಾಸ್ತಾನು ಮಿತಿಯನ್ನು ಜಾರಿಗೆ ತರಲಾಗಿತ್ತು. ಈ ವರ್ಷ ಜೂನ್ 2ರಂದು ಸರ್ಕಾರವು ತೊಗರಿ ಮತ್ತು ಉದ್ದಿನ ಬೇಳೆಗಳ ಬೆಲೆಗಳನ್ನು ನಿಯಂತ್ರಿಸಲು ಇದೇ ರೀತಿಯ ಕ್ರಮವನ್ನು ಘೋಷಿಸಿತ್ತು. ತೊಗರಿ ಮತ್ತು ಉದ್ದಿನ ಬೇಳೆಗಳ ದಾಸ್ತಾನು ಮಿತಿ 2023ರ ಅಕ್ಟೋಬರ್ 31ರ ತನಕ ಅನುಷ್ಠಾನದಲ್ಲಿರಲಿದೆ.

ಏಪ್ರಿಲ್‌ನಲ್ಲಿ ಬೇಳೆ ಕಾಳುಗಳ ಚಿಲ್ಲರೆ ದರ ಶೇ 5.28ರಷ್ಟು ಏರಿಕೆಯಾಗಿದೆ. ಇದು ಮಾರ್ಚ್ ನಲ್ಲಿ ಶೇ.4.33ರಷ್ಟಿತ್ತು. ಗ್ರಾಹಕ ಬೆಲೆ ಸೂಚ್ಯಂಕ ಆಧಾರಿತ ಹಣದುಬ್ಬರ ದರ ಏಪ್ರಿಲ್ ನಲ್ಲಿ ಶೇ.4.7ರಷ್ಟಿತ್ತು. ಇದು 18 ತಿಂಗಳಲ್ಲೇ ಕಡಿಮೆ ಮಟ್ಟದಲ್ಲಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...