ಮೋದಿ ಚಿತ್ರವುಳ್ಳ ‘ಚೀಲ’ಗಳ ಖರೀದಿಗೆ 15 ಕೋಟಿ ರೂ. ತೆತ್ತ ಕೇಂದ್ರ!

Date:

ಕೆಲವೇ ವಾರಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಕೇಂದ್ರ ಸರ್ಕಾರವು ಚುನಾವಣಾ ಪ್ರಚಾರಕ್ಕಾಗಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡುತ್ತಿದೆ. ಮೋದಿ ಚಿತ್ರವಿರುವ ಆಹಾರ ಧಾನ್ಯ ಚೀಲಕ್ಕಾಗಿಯೇ ಕೇಂದ್ರ 15 ಕೋಟಿ ರೂ. ವೆಚ್ಚ ಮಾಡಿದೆ.

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ (ಪಿಎಂಜಿಕೆಎವೈ) ಅಡಿಯಲ್ಲಿ ನೀಡಲಾಗುವ ಆಹಾರ ಧಾನ್ಯಗಳ ಚೀಲದಲ್ಲಿ ಪ್ರಧಾನಿ ಮೋದಿಯ ಚಿತ್ರ ಹಾಕಲೆಂದು ಕೇಂದ್ರ ಸರ್ಕಾರವು 15 ಕೋಟಿ ರೂಪಾಯಿ ವೆಚ್ಚ ಮಾಡಿದೆ. ಅದು ಕೂಡಾ ಬರೀ ಐದು ರಾಜ್ಯಗಳಿಗಾಗಿ ಇಷ್ಟೊಂದು ಮೊತ್ತ ವ್ಯಯಿಸಲಾಗಿದೆ ಎಂದು ‘ದಿ ಹಿಂದೂ’ ವರದಿ ಮಾಡಿದೆ.

modi photo
ಆಹಾರ ಧಾನ್ಯ ಚೀಲ

ಆರ್‌ಟಿಐ ಕಾರ್ಯಕರ್ತ ಅಜಯ್ ಬೋಸ್ ಅರ್ಜಿಗೆ ದೊರೆತ ಉತ್ತರದಲ್ಲಿ ಈ ಮಾಹಿತಿ ಬಹಿರಂಗವಾಗಿದೆ. ಆರ್‌ಟಿಐ ಮಾಹಿತಿ ಪ್ರಕಾರ, ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್‌ಸಿಐ) ರಾಜಸ್ಥಾನ, ಮಿಜೋರಾಂ, ಸಿಕ್ಕಿಂ, ತ್ರಿಪುರಾ, ಮೇಘಾಲಯದಲ್ಲಿ ಆಹಾರ ಧಾನ್ಯವನ್ನು ವಿತರಿಸಲು ‘ಪ್ರಧಾನಿ ಮೋದಿ ಚಿತ್ರವಿರುವ ಲೋಗೋ ಇರುವ ನೇಯ್ದ ಚೀಲಗಳನ್ನು’ ಖರೀದಿ ಮಾಡಲು ಟೆಂಡರ್ ಅಂತಿಮಗೊಳಿಸಿದೆ. ಪಶ್ಚಿಮ ಬಂಗಾಳ ರಾಜ್ಯಕ್ಕೆ ಟೆಂಡರ್ ಪ್ರಕ್ರಿಯೆ ಇನ್ನೂ ಅಂತಿಮಗೊಂಡಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯಸ್ಥಾನ ಎಫ್‌ಸಿಐ ಕಚೇರಿ ಮೋದಿ ಚಿತ್ರವಿರುವ 1.07 ಕೋಟಿ ಸಿಂಥೆಟಿಕ್ ಬ್ಯಾಗ್‌ಗಳಿಗೆ 13.29 ಕೋಟಿ ರೂಪಾಯಿ ವೆಚ್ಚ ಮಾಡಿದರೆ, ತ್ರಿಪುರಾ 5.98 ಲಕ್ಷ ಕೋಟಿ ಬ್ಯಾಗ್‌ಗಳಿಗೆ 85.51 ಲಕ್ಷ ರೂಪಾಯಿ ವ್ಯಯಿಸುತ್ತಿದೆ. ಇನ್ನು ಮೇಘಾಲಯದ ಎಫ್‌ಸಿಐ ಸ್ಥಳೀಯ ಕಚೇರಿ 4.22 ಲಕ್ಷ ಬ್ಯಾಗ್‌ಗಳಿಗೆ 52.75 ಲಕ್ಷ ರೂಪಾಯಿ ವೆಚ್ಚ ಮಾಡುತ್ತಿದೆ. 1.75 ಲಕ್ಷ ಬ್ಯಾಗ್‌ಗಳಿಗೆ ಮಿಜೋರಾಂ 25 ಲಕ್ಷ ರೂಪಾಯಿ ಖರ್ಚು ಮಾಡುತ್ತಿದೆ ಎಂದು ಆರ್‌ಟಿಐ ಮಾಹಿತಿಯಿಂದ ತಿಳಿದುಬಂದಿದೆ.

ಸಿಕ್ಕಿಂನಲ್ಲಿ ವಿತರಣೆಗೆ ಖಾಸಗಿ ಸಂಸ್ಥೆಯನ್ನು ಆಯ್ಕೆ ಮಾಡಲಾಗಿದ್ದು ಈ ಪ್ರಕ್ರಿಯೆ ಇನ್ನೂ ಪೂರ್ಣವಾಗಿಲ್ಲ. ದಿ ಹಿಂದೂ ವರದಿಯ ಪ್ರಕಾರ ಈಶಾನ್ಯ ರಾಜ್ಯಗಳಲ್ಲಿ ಕೇಂದ್ರ ಸರ್ಕಾರವು 98,000 ಬ್ಯಾಗ್‌ಗಳನ್ನು ತಲಾ 14.65 ರೂಪಾಯಿಯಂತೆ ಉತ್ಪಾದಿಸುವ ಮಾತುಕತೆ ನಡೆಸುತ್ತಿದೆ.

ಪ್ರತಿ ರಾಜ್ಯದಲ್ಲಿ ಈ ಲೋಗೋ ಕೊಂಚ ಬದಲಾವಣೆ ಹೊಂದಿದೆ. ಮಿಜೋರಾಂನಲ್ಲಿ ಪ್ರತಿ ಬ್ಯಾಗ್‌ 14.65 ರೂಪಾಯಿ, ತ್ರಿಪುರಾದಲ್ಲಿ 14.30 ರೂಪಾಯಿ, ಮೇಘಾಲಯದಲ್ಲಿ 12.5 ರೂಪಾಯಿ, ರಾಜಸ್ಥಾನದಲ್ಲಿ 12.375 ರೂ. ಗೆ ಟೆಂಡರ್ ನೀಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...