ಗಣರಾಜ್ಯೋತ್ಸವ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ಕೇಂದ್ರದಿಂದ ತಾರತಮ್ಯ: ಎಎಪಿ ಆಕ್ರೋಶ

Date:

ಜನವರಿ 26ರ ಗಣರಾಜ್ಯೋತ್ಸವ ದಿನದಂದು ನಡೆಯುವ ಮೆರವಣಿಗೆಯ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ಕೇಂದ್ರ ಸರ್ಕಾರ ಬಿಜೆಪಿಯೇತರ ರಾಜ್ಯಗಳಿಗೆ ತಾರತಮ್ಯ ಮಾಡುತ್ತಿದೆ ಎಂದು ಎಎಪಿ ಆರೋಪಿಸಿದೆ.

ದೆಹಲಿ ಸರ್ಕಾರದ ಆರೋಗ್ಯ ಮತ್ತು ಶಿಕ್ಷಣ ಇಲಾಖೆಯ ಮಾದರಿ ಸ್ತಬ್ಧಚಿತ್ರಗಳನ್ನು ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಪಾಲ್ಗೊಳ್ಳುವುದಕ್ಕೆ ಕೇಂದ್ರ ಸರ್ಕಾರವು ಯಾವುದೇ ಕಾರಣ ನೀಡದೆ ನಿರಾಕರಿಸಿದೆ ಎನ್ನುವುದು ಎಎಪಿ ಆರೋಪವಾಗಿದೆ.

ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಎಪಿ ರಾಷ್ಟ್ರೀಯ ವಕ್ತಾರರಾದ ಪ್ರಿಯಾಂಕ ಕಕ್ಕರ್, ಕೇಂದ್ರದ ನಿರ್ಧಾರವು ರಾಜಕೀಯ ನಿರ್ಧಾರವಾಗಿದೆ. ದೆಹಲಿ ಸರ್ಕಾರವು ಆರೋಗ್ಯ ಮತ್ತು ಶಿಕ್ಷಣ ಇಲಾಖೆಯ ಮಾದರಿಗಳನ್ನು ಪ್ರದರ್ಶಿಸಲು ಬಯಸಿತ್ತು. ಆದರೆ ಪಂಜಾಬ್‌ ಮತ್ತು ದೆಹಲಿ ಸರ್ಕಾರಗಳ ಸ್ತಬ್ಥಚಿತ್ರಗಳನ್ನು ಆಯ್ಕೆಯಿಂದ ಹೊರಗಿಡಲಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ₹40 ಸಾವಿರ ಕೋಟಿ ಲೂಟಿ ಆರೋಪ; ಪ್ರಧಾನಿ ಮೋದಿ ಏನು ಹೇಳುತ್ತಾರೆ?

“ಬಿಜೆಪಿ ನೇತೃತ್ವದ ಸರ್ಕಾರಗಳಾದ ಅಸ್ಸಾಂ, ಗುಜರಾತ್ ಮತ್ತು ಉತ್ತರ ಪ್ರದೇಶದ ಸ್ತಬ್ಧಚಿತ್ರಗಳನ್ನು ಕಳೆದ 5 ವರ್ಷಗಳಿಂದ ಸತತವಾಗಿ ಪ್ರದರ್ಶಿಸಲು ಅನುಮತಿಸಲಾಗುತ್ತಿದೆ” ಎಂದು ಕಕ್ಕರ್ ಆಕ್ರೋಶ ವ್ಯಕ್ತಪಡಿಸಿದರು.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕೂಡ ಕೇಂದ್ರದ ರಾಜಕೀಯ ತಾರತಮ್ಯದ ಬಗ್ಗೆ ವಾಗ್ದಾಳಿ ನಡೆಸಿದರು. ಬಿಜೆಪಿ ಸರ್ಕಾರದ ಈ ನಿರ್ಧಾರವು ಪಂಜಾಬ್‌ ಪದವನ್ನು ರಾಷ್ಟ್ರಗೀತೆಯಿಂದ ತೆಗೆದು ಹಾಕುವ ನಡೆಯಾಗಿದೆ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...