ವಿದ್ಯಾರ್ಥಿನಿಯರ ಹಾಸ್ಟೆಲ್‌ಗೆ ಅಕ್ರಮವಾಗಿ ನುಗ್ಗಿದ ಕಾನೂನು ವಿವಿ ಕುಲಪತಿ: ವಿದ್ಯಾರ್ಥಿಗಳಿಂದ ಧರಣಿ

Date:

ಪಂಜಾಬ್‌ನ ಪಟಿಯಾಲದಲ್ಲಿರುವ ರಾಜೀವ್ ಗಾಂಧಿ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ ಕುಲಪತಿ ಜೈಶಂಕರ್ ಅವರು ಯಾವುದೇ ಮಾಹಿತಿ ನೀಡದೆ ವಿದ್ಯಾರ್ಥಿನಿಯರ ಹಾಸ್ಟೆಲ್‌ಗೆ ನುಗ್ಗಿ, ಅವರ ಖಾಸಗಿತನಕ್ಕೆ ಧಕ್ಕೆಯುಂಟು ಮಾಡಿರುವ ಆರೋಪ ಕೇಳಿಬಂದಿದೆ.

ಕ್ಯಾಂಪಸ್‌ನಲ್ಲಿರುವ ವಿಸಿ ನಿವಾಸದ ಹೊರಗೆ ನೂರಾರು ವಿದ್ಯಾರ್ಥಿಗಳು ಧರಣಿ ನಡೆಸುತ್ತಿದ್ದು, ಕುಲಪತಿಯಾಗಿರುವ ಪ್ರೊಫೆಸರ್ ಜೈಶಂಕರ್ ಅವರು ಯಾವುದೇ ಪೂರ್ವ ಸೂಚನೆ ಅಥವಾ ಒಪ್ಪಿಗೆ ಇಲ್ಲದೆ ಭಾನುವಾರ ಮಧ್ಯಾಹ್ನ ವಿದ್ಯಾರ್ಥಿನಿಯರ ಹಾಸ್ಟೆಲ್‌ನಲ್ಲಿರುವ ಕೊಠಡಿಗೆ ಅಕ್ರಮವಾಗಿ ಪ್ರವೇಶಿಸಿದ್ದಾರೆ. ಅಲ್ಲದೇ, ವಿದ್ಯಾರ್ಥಿನಿಯರ ಬಟ್ಟೆಗಳನ್ನು ನೋಡಿ ಅವಾಚ್ಯವಾಗಿ ನಿಂದಿಸಿರುವುದಾಗಿ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ತಮ್ಮ ಹಾಸ್ಟೆಲ್‌ನ ಒಳಗೆ ಪ್ರವೇಶಿಸುವ ಮೂಲಕ ಖಾಸಗಿತನವನ್ನು ಉಲ್ಲಂಘಿಸಿದ್ದಾರೆ. ಹಾಗಾಗಿ, ಕೂಡಲೇ ಅವರನ್ನು ಕುಲಪತಿ ಸ್ಥಾನದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ಭಾನುವಾರ ಸಂಜೆಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕುಲಪತಿ ಜೈಶಂಕರ್ ಅವರು ಹಾಸ್ಟೆಲ್‌ಗೆ ಭೇಟಿ ನೀಡುವ ಬಗ್ಗೆ ಯಾವುದೇ ಮಾಹಿತಿ ನಮಗೆ ಇರಲಿಲ್ಲ. ಅಕ್ರಮವಾಗಿ ಪ್ರವೇಶಿಸಿದ್ದೂ ಅಲ್ಲದೇ, ಅವರು ನಮ್ಮ ಡ್ರೆಸ್ಸಿಂಗ್ ಸೆನ್ಸ್ ಅನ್ನು ಪ್ರಶ್ನಿಸಿದ್ದಾರೆ. ಗೌಪ್ಯತೆಯನ್ನು ಉಲ್ಲಂಘಿಸಿದ್ದಾರೆ” ಎಂದು ವಿದ್ಯಾರ್ಥಿನಿಯರು ತಿಳಿಸಿದ್ದಾರೆ.

ಕುಲಪತಿಯ ನಡೆಯ ವಿವರ ತಿಳಿದ ಕಾನೂನು ವಿವಿಯ ವಿದ್ಯಾರ್ಥಿಗಳೂ ಕೂಡ ಪ್ರತಿಭಟನೆಗೆ ಕೈ ಜೋಡಿಸಿದ್ದು, ನಿವಾಸದ ಹೊರಗೆ ಧರಣಿ ಕುಳಿತಿದ್ದಾರೆ. ಅಲ್ಲದೇ, ‘NOT YOUR DAUGHTER, JAI SHANKAR JAO ಎಂಬಿತ್ಯಾದಿ ಪ್ಲೆಕಾರ್ಡ್‌ಗಳನ್ನು ಕೂಡ ಇಟ್ಟುಕೊಂಡು, ಪ್ರತಿಭಟನೆ ನಡೆಸುತ್ತಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...