ಸಂಚಾರಕ್ಕೆ ಅಡ್ಡಿಯಾದ ಪತ್ನಿಯ ರೀಲ್ಸ್; ಚಂಡೀಗಢ ಪೊಲೀಸ್ ಕಾನ್‌ಸ್ಟೆಬಲ್ ಅಮಾನತು

Date:

ಸೆಕ್ಟರ್ -20 ಗುರುದ್ವಾರ ಚೌಕ್‌ನಲ್ಲಿ ಜೀಬ್ರಾ ಕ್ರಾಸಿಂಗ್‌ನಲ್ಲಿ ಚಂಡೀಗಢ ಪೊಲೀಸ್ ಕಾನ್‌ಸ್ಟೆಬಲ್ ಪತ್ನಿ ರೀಲ್ಸ್‌ ಮಾಡಿದ್ದು, ಈ ವಿಡಿಯೋ ವೈರಲ್ ಆದ ನಂತರ ಚಂಡೀಗಢ ಪೊಲೀಸರು ಹಿರಿಯ ಕಾನ್ಸ್‌ಟೇಬಲ್ ಅಜಯ್ ಕುಂಡು ಅವರನ್ನು ಅಮಾನತುಗೊಳಿಸಿದ್ದಾರೆ.

ಮಾರ್ಚ್‌ 20ರಂದು ಸಂಜೆ 4:30ರ ಸುಮಾರಿಗೆ ಈ ಘಟನೆ ಉಂಟಾಗಿದ್ದು, ಈ ರೀಲ್ಸ್ ಮಾಡುವ ವೇಳೆ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಇದು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ ಜ್ಯೋತಿ ತನ್ನ ಅತ್ತಿಗೆ ಪೂಜಾ ಸಹಾಯದಿಂದ ರೀಲ್ಸ್ ವಿಡಿಯೋ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? ಕೈಗೆ ಕೋಳ ಹಾಕಿದ್ದರೂ ಪೊಲೀಸರ ಮುಂದೆ ಸಿಗರೇಟ್ ಸೇದಿ ರೀಲ್ಸ್ ಮಾಡಿದ ರೌಡಿಶೀಟರ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜ್ಯೋತಿ ಜನಪ್ರಿಯ ಹರ್ಯಾನ್ವಿ ಹಾಡಿಗೆ ನೃತ್ಯ ಮಾಡಿದ್ದು, ಈ ವೇಳೆ ವಾಹನ ಸಂಚಾರಕ್ಕೆ ತೊಂದರೆಯಾಗಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಹೆಡ್ ಕಾನ್‌ಸ್ಟೆಬಲ್ ಜಸ್ಬೀರ್ ಚಂಡೀಗಢದ ಸೆಕ್ಟರ್ 34 ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದಾದ ಬಳಿಕ ಚಂಡೀಗಢ ಪೊಲೀಸರು ತನಿಖೆ ಆರಂಭಿಸಿದ್ದು, ಎಎಸ್ಐ ಬಲ್ಜಿತ್ ಸಿಂಗ್ ನೇತೃತ್ವದ ತಂಡವು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದೆ. ಇದಾದ ಬಳಿಕ ಸಂಚಾರಕ್ಕೆ ಅಡ್ಡಿಪಡಿಸಿದ ಮತ್ತು ಸಾರ್ವಜನಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡಿದ ಆರೋಪದ ಮೇಲೆ ಎನ್‌ಎಸ್‌ನ ಸೆಕ್ಷನ್ 125, 292 ಮತ್ತು 3(5) ರ ಅಡಿಯಲ್ಲಿ ಜ್ಯೋತಿ ಮತ್ತು ಪೂಜಾ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಇನ್ನು ಈ ವಿಡಿಯೋವನ್ನು ಕಾನ್‌ಸ್ಟೆಬಲ್ ಅಜಯ್ ಕುಂಡು ಅವರ ಇನ್‌ಸ್ಟಾಗ್ರಾಮ್ ಖಾತೆಯಿಂದಲೇ ಅಪ್‌ಲೋಡ್ ಮಾಡಲಾಗಿದೆ. ಈ ಕಾರಣದಿಂದಾಗಿ ಅಜಯ್ ಕುಂಡು ಅವರನ್ನು ಸೆಕ್ಟರ್ 19 ಪೊಲೀಸ್ ಠಾಣೆಯಲ್ಲಿನ ಹುದ್ದೆಯಿಂದ ಅಮಾನತುಗೊಳಿಸಲಾಗಿದೆ. ಸದ್ಯ ಮಹಿಳೆಯರಿಬ್ಬರು ಜಾಮೀನು ಪಡೆದಿದ್ದಾರೆ.

ಇದನ್ನು ಓದಿದ್ದೀರಾ? ಗದಗ | ಆಸ್ಪತ್ರೆಯೊಳಗೆ ‘ರೀಲ್ಸ್‌’ ಮಾಡಿದ ವೈದ್ಯಕೀಯ ವಿದ್ಯಾರ್ಥಿಗಳು; 38 ಮಂದಿ ಅಮಾನತು

ಕಾನ್‌ಸ್ಟೆಬಲ್ ಅಜಯ್ ಕುಂಡು ಅವರ ಅಮಾನತು ಸಂಬಂಧ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅನೇಕರು ಪತ್ನಿ ಕಾರ್ಯಕ್ಕೆ ಪತಿಯನ್ನು ಹೊಣೆಗಾರರನ್ನಾಗಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. ಸಂಚಾರಕ್ಕೆ ಅಡಿಪಡಿಸಿದ್ದು ಪತ್ನಿ, ಆದರೆ ಶಿಕ್ಷೆ ಪತಿಗೆ, ಇದು ನ್ಯಾಯಯುತವಲ್ಲ ಎಂದು ನೆಟ್ಟಿಗರು ವಾದಿಸಿದ್ದಾರೆ.

ಇನ್ನೂ ಕೆಲವರು, “ವಿಐಪಿ ಸಂಸ್ಕೃತಿಯನ್ನು ನಾನೆಂದಿಗೂ ಬೆಂಬಲಿಸಲ್ಲ. ಆದರೆ ಇಲ್ಲಿ ಯಾವ ತಪ್ಪೂ ನನಗೆ ಕಾಣಿಸುತ್ತಿಲ್ಲ. ರೆಡ್‌ ಲೈಟ್ ಇದ್ದ ಕಾರಣ ವಾಹನಗಳು ನಿಂತಿದೆ. ವಿರುದ್ಧ ದಿಕ್ಕಿನಲ್ಲಿ ಗ್ರೀನ್ ಸಿಗ್ನಲ್ ಇರುವುದನ್ನು ವಿಡಿಯೋದಲ್ಲೇ ನೋಡಬಹುದು. ಇದು ಅತಿಶಯ” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...