ಲೋಕಸಭೆ ಸ್ಪೀಕರ್ ಸ್ಥಾನಕ್ಕೆ ಬೇಡಿಕೆಯಿಟ್ಟ ಚಂದ್ರಬಾಬು ನಾಯ್ಡು; ರಾಜಕೀಯದಲ್ಲಿ ಏರಿಳಿತ ಸಾಮಾನ್ಯ ಎಂದ ಟಿಡಿಪಿ ನಾಯಕ

Date:

ಆಂಧ್ರ ಪ್ರದೇಶದ ವಿಧಾನಸಭೆ ಚುನಾವಣೆಯ ಜೊತೆ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಸಾಧನೆ ಮಾಡಿರುವ ಟಿಡಿಪಿ ಮುಖ್ಯಸ್ಥ ಎನ್‌ ಚಂದ್ರಬಾಬು ನಾಯ್ಡು ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದಲ್ಲೇ ಉಳಿಯುವುದಾಗಿ ಪುನರುಚ್ಚರಿಸಿದ್ದಾರೆ.

ಮೂಲಗಳ ಪ್ರಕಾರ ಚಂದ್ರಬಾಬು ನಾಯ್ಡು ಇಂದು ನಡೆಯುವ ಉನ್ನತ ಮಟ್ಟದ ಎನ್‌ಡಿಎ ಸಭೆಯಲ್ಲಿ ನೂತನ ಸರ್ಕಾರದಲ್ಲಿ ಟಿಡಿಪಿ ಪಕ್ಷಕ್ಕೆ ಸ್ಪೀಕರ್‌ ಹುದ್ದೆ ಕೇಳುವ ಸಾಧ್ಯತೆಯಿದೆ.

ಇಲ್ಲಿಯವರೆಗೂ ಇಂಡಿಯಾ ಒಕ್ಕೂಡದ ಯಾವೊಬ್ಬ ನಾಯಕರು ನಾಯ್ಡು ಅವರೊಂದಿಗೆ ಮಾತುಕತೆ ನಡೆಸಿಲ್ಲ. ಆದಾಗ್ಯೂ ಕೆಲವರನ್ನು ಟಿಡಿಪಿ ಮುಖ್ಯಸ್ಥರ ಬಳಿ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೆಹಲಿಗೆ ಹೋಗುವ ಮುನ್ನ ಚಂದ್ರಬಾಬು ನಾಯ್ಡು ಅವರು ವಿಜಯವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. “ನಾನೊಬ್ಬ ಅನುಭವಿ. ನಾನು ಈ ದೇಶದಲ್ಲಿ ಹಲವು ಬದಲಾವಣೆಗಳನ್ನು ನೋಡಿದ್ದೇನೆ. ನಾನು ಎನ್‌ಡಿಎ ಜೊತೆಗಿರುತ್ತೇನೆ. ದೆಹಲಿಗೆ ಎನ್‌ಡಿಎ ಸಭೆಯಲ್ಲಿ ಪಾಲ್ಗೊಳ್ಳಲು ಹೋಗುತ್ತೇನೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಜಾಪ್ರಭುತ್ವದ ಮೇಲೆ ಸವಾರಿ ಮಾಡುವವರಿಗೆ ಪಾಠ ಕಲಿಸಿದ ಫಲಿತಾಂಶ

“ಚುನಾವಣೆ ಮುಗಿದ ನಂತರ ದೆಹಲಿಗೆ ಹೋಗುವ ಮುನ್ನ ಇದು ನನ್ನ ಮೊದಲ ಪತ್ರಿಕಾಗೋಷ್ಠಿಯಾಗಿದೆ. ನಮ್ಮನ್ನು ಬೆಂಬಲಿಸಿದ್ದಕ್ಕೆ ಮತದಾರರಿಗೆ ಧನ್ಯವಾದ ತಿಳಿಸುತ್ತೇನೆ. ರಾಜಕೀಯದಲ್ಲಿ ಏರಿಳಿತಗಳು ಸಾಮಾನ್ಯ. ಇತಿಹಾಸದಲ್ಲಿ ಹಲವು ರಾಜಕೀಯ ನಾಯಕರು ಹಾಗೂ ಪಕ್ಷಗಳನ್ನು ತಿರಸ್ಕರಿಸಲಾಗಿದೆ. ಇದೊಂದು ಐತಿಹಾಸಿಕ ಚುನಾವಣೆ. ವಿದೇಶದಲ್ಲಿರುವ ಮತದಾರರು ಕೂಡ ತಮ್ಮ ಊರಿಗೆ ಆಗಮಿಸಿ ಮತ ಚಲಾಯಿಸಿದ್ದಾರೆ” ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಪವನ್‌ ಕಲ್ಯಾಣ್‌ ನೇತೃತ್ವದ ಜನಸೇನಾ ಪಕ್ಷಕ್ಕೂ ಟಿಡಿಪಿ ಮುಖ್ಯಸ್ಥರು ಧನ್ಯವಾದ ಸಲ್ಲಿಸಿದರು. ರಾಜ್ಯವನ್ನು ಉಳಿಸಲು ಜನಸೇನಾ ಮುಖ್ಯಸ್ಥರು ಜವಾಬ್ದಾರಿ ತೆಗೆದುಕೊಂಡಿದ್ದರು ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...