ನೈರ್ಮಲ್ಯ ಕಾರ್ಮಿಕರ ಬಗ್ಗೆ ವಿವಾದಿತ ಮಾತು; ಯೂಟ್ಯೂಬರ್ ಮನೆಗೆ ಮಲ ಸುರಿದು ಆಕ್ರೋಶ

Date:

ನೈರ್ಮಲ್ಯ ಕಾರ್ಮಿಕರ ಸಮವಸ್ತ್ರದಲ್ಲಿ ನಗರದ ಯೂಟ್ಯೂಬರ್ ಸವುಕ್ಕು ಶಂಕರ್ ಎಂಬುವವರ ಮನೆಗೆ ನುಗ್ಗಿದ ಗುಂಪೊಂದು ಅವರ ಮನೆಯ ಕೊಠಡಿ, ಅಡುಗೆಮನೆ ಮತ್ತು ಹಜಾರದಲ್ಲಿ ಬಕೆಟ್‍ಗಟ್ಟಲೆ ಕೆಸರು, ಹೊಲಸು ಮತ್ತು ಮಲ ಸುರಿದು ಆಕ್ರೋಶ ವ್ಯಕ್ತಪಡಿಸಿದ ಪ್ರಕರಣ ಚೆನ್ನೈನ ನಗರವೊಂದರಲ್ಲಿ ಬೆಳಕಿಗೆ ಬಂದಿದೆ.

ನೈರ್ಮಲ್ಯ ಕಾರ್ಮಿಕರ ಬಗ್ಗೆ ವ್ಯಕ್ತಪಡಿಸಿದ ಅಭಿಪ್ರಾಯವನ್ನು ವಿರೋಧಿಸಿ ಈ ದಾಳಿ ನಡೆದಿರಬೇಕು ಎಂದು ಶಂಕಿಸಲಾಗಿದೆ. ಶಂಕರ್ ಅವರ ತಾಯಿ ಕಮಲಾ ಒಬ್ಬರೇ ಮನೆಯಲ್ಲಿದ್ದ ಸಂದರ್ಭದಲ್ಲಿ ಮನೆಯ ಹಿಂಬಾಗಿಲು ಒಡೆದು ಒಳ ಪ್ರವೇಶಿಸಿದ ಗುಂಪು, ಮನೆಯನ್ನು ಲೂಟಿ ಮಾಡಿ, ಇದೇ ಬಗೆಯ ಅಭಿಪ್ರಾಯವನ್ನು ಮಗನ ಮುಂದೆ ವ್ಯಕ್ತಪಡಿಸಿದರೆ, ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿತು.

ಮಹಿಳೆಯ ಫೋನ್ ಕಿತ್ತುಕೊಂಡು, ಶಂಕರ್‌ಗೆ ವಿಡಿಯೋ ಕರೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಪರಾರಿಯಾಯಿತು. ಈ ಸಂದರ್ಭದಲ್ಲಿ “ನನ್ನ ಮಗನ ವಿರುದ್ಧ ಯಾವುದೇ ಸಮಸ್ಯೆ ಇದ್ದಲ್ಲಿ, ಕಾನೂನು ಕ್ರಮಗಳನ್ನು ಕೈಗೊಳ್ಳಬೇಕಿತ್ತು” ಎಂದು ಕಮಲಾ ಪ್ರತಿಕ್ರಿಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಕ್ಷಣವೇ ಪೊಲೀಸರು ಧಾವಿಸಿದರು. ಆದರೆ ಇದುವರೆಗೆ ಯಾರನ್ನೂ ಬಂಧಿಸಿಲ್ಲ. ದಾಳಿಕೋರರನ್ನು ಪತ್ತೆ ಮಾಡಲು ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜಾತಿ ವಿನಾಶ: ಆರ್‌ಎಸ್‌ಎಸ್ ಬೂಟಾಟಿಕೆಗೆ ಮಿತಿ ಇಲ್ಲವೇ?

ನೈರ್ಮಲ್ಯ ಕಾರ್ಮಿಕರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಲಾಗಿದೆ ಎಂಬ ಆರೋಪವನ್ನು ಶಂಕರ್ ಅಲ್ಲಗಳೆದಿದ್ದಾರೆ. “ನಿಜವಾಗಿ ನೈರ್ಮಲ್ಯ ಕಾರ್ಮಿಕರಿಗೆ ಸಲ್ಲಬೇಕಾದ ಹಣವನ್ನು ಶಾಸಕರು ಒಯ್ದಿದ್ದಾರೆ ಎಂದು ನಾನು ಬಿಂಬಿಸಿದ್ದೆ” ಎಂದು ಅವರು ಸ್ಪಷ್ಟನೆ ನೀಡಿದ್ದಾರೆ. ಶಂಕರ್ ಮನೆಯ ಮೇಲಿನ ದಾಳಿಯ ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದೆ.

https://twitter.com/SavukkuOfficial/status/1904054335849591205
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...