ಹಲವು ರಾಜ್ಯಗಳಲ್ಲಿ ಮುಂಗಾರು ಜೋರು; ತಮಿಳುನಾಡಿನ ಹಲವೆಡೆ ಶಾಲೆಗಳಿಗೆ ರಜೆ, ರಾಜಸ್ಥಾನದಲ್ಲಿ 5 ಸಾವು

Date:

ದೇಶದಲ್ಲಿ ಕೆಲವು ರಾಜ್ಯಗಳ ಬಿಸಿ ಗಾಳಿಯ ಆಘಾತದ ನಡುವೆಯೂ ಈ ವರ್ಷದ ಮುಂಗಾರು ನಿಧಾನವಾಗಿ ಆರಂಭವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ ಎರಡು ದಿನಗಳಿಂದ ಮಳೆ ಸುರಿಯುತ್ತಿದೆ. ಚೆನ್ನೈ ಮತ್ತು ತಮಿಳುನಾಡಿನ ಇತರ ಭಾಗಗಳಲ್ಲಿ ಮಳೆ ಸುರಿಯುತ್ತಿದ್ದು, ಹಲವಾರು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ನಿನ್ನೆ ರಾತ್ರಿ ಚೆನ್ನೈನಾದ್ಯಂತ ಭಾರೀ ಮಳೆ ದಾಖಲಾಗಿದೆ. ಮೀನಂಬಾಕ್ಕಂನಲ್ಲಿ ಭಾನುವಾರ ಬೆಳಿಗ್ಗೆ 8.30 ರಿಂದ ಇಂದು (ಜೂನ್‌ 19) ಬೆಳಿಗ್ಗೆ 5.30 ರವರೆಗೆ 137.6 ಮಿ.ಮೀ ಮುಂಗಾರು ಮಳೆ ದಾಖಲಾಗಿದೆ.

ಚೆನ್ನೈನ ಪ್ರಾದೇಶಿಕ ಹವಾಮಾನ ಇಲಾಖೆಯು ತಮಿಳುನಾಡಿನ ತಿರುವಳ್ಳೂರು, ಚೆಂಗಲ್ಪಟ್ಟು ಮತ್ತು ಕಾಂಚೀಪುರಂ ಜಿಲ್ಲೆಗಳೊಂದಿಗೆ ನಗರದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯ ಮುನ್ಸೂಚನೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಮಿಳುನಾಡಿನ ಹಲವು ಜಿಲ್ಲೆಗಳ ಶಾಲೆಗಳಿಗೆ ರಜೆ

ಭಾನುವಾರ (ಜೂನ್‌ 18) ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದಾಗಿ ತಮಿಳುನಾಡಿನ ಚೆನ್ನೈ ಮತ್ತು ರಾಜ್ಯದ ಇತರ ಕೆಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಚೆನ್ನೈ, ರಾಣಿಪೇಟ್, ಕಾಂಚೀಪುರಂ, ತಿರುವಳ್ಳೂರು, ಚೆಂಗಲ್ಪೇಟ್ ಮತ್ತು ವೆಲ್ಲೂರ್‌ನಲ್ಲಿಯೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮಳೆಯಿಂದಾಗಿ ಉಂಟಾದ ಅನಾಹುತದ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಈ ಸುದ್ದಿ ಓದಿದ್ದೀರಾ? ಮಧ್ಯಪ್ರದೇಶ | ಪ್ರೇಮಿಗಳಿಗೆ ಗುಂಡು ಹಾರಿಸಿ ಮೊಸಳೆಯಿರುವ ನದಿಗೆ ಎಸೆದ ಹೆತ್ತವರು

ಈಶಾನ್ಯದಲ್ಲಿ ಹಲವೆಡೆ ತೊಂದರೆ

ಪಶ್ಚಿಮ ಸಿಕ್ಕಿಂ ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದಾಗಿ ಅನೇಕ ಭೂಕುಸಿತಗಳು ಉಂಟಾಗಿದ್ದು, ಸುಮಾರು 100 ಮನೆಗಳಿಗೆ ಹಾನಿಯಾಗಿದೆ ಮತ್ತು ಹಲವು ಸೇತುವೆಗಳು ಉರುಳಿವೆ. ಗಯಾಲ್ಶಿಂಗ್ ಜಿಲ್ಲೆಯ ಡೆಂಟಮ್ ಉಪ ವಿಭಾಗ ವ್ಯಾಪ್ತಿಯಲ್ಲಿ ಮನೆಗಳು ಮತ್ತು ರಸ್ತೆಗಳು ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಸ್ಸಾಂನಲ್ಲಿ, ಭಾರತೀಯ ಹವಾಮಾನ ಇಲಾಖೆ ಭಾನುವಾರ ‘ರೆಡ್’ ಅಲರ್ಟ್ ನೀಡಿದ್ದು, ಮುಂದಿನ ಐದು ದಿನಗಳಲ್ಲಿ ಅಸ್ಸಾಂನ ಹಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದಾದ್ಯಂತ ನಿರಂತರ ಮಳೆಯಿಂದಾಗಿ ಅಸ್ಸಾಂನಲ್ಲಿ ಈ ವರ್ಷ ಪ್ರವಾಹ ಎದುರಾಗುವ ಸಾಧ್ಯತೆಯಿದೆ.

ದೆಹಲಿಯಲ್ಲಿ ಶುರುವಾದ ಮಳೆ

ಸೋಮವಾರ (ಜೂನ್‌ 19) ಬೆಳಿಗ್ಗೆ ದೆಹಲಿ – ಎನ್‌ಸಿಆರ್‌ನ ಕೆಲವು ಭಾಗಗಳಲ್ಲಿ ಮಳೆಯಾಗಿದೆ. ಹಲವು ದಿನದಿಂದ ಶಾಖದಿಂದ ಬಳಲುತ್ತಿದ್ದ ಜನರಿಗೆ ಮುಂಗಾರು ಮಳೆಯು ತಂಪನ್ನು ನೀಡಿದೆ. ಇಂದು ದೆಹಲಿಯಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಳೆ ಸಂಬಂಧಿತ ಘಟನೆಗಳಿಂದಾಗಿ ರಾಜಸ್ಥಾನದಲ್ಲಿ 5 ಸಾವು

ಬಿಪರ್ ಜಾಯ್ ಚಂಡಮಾರುತದಿಂದ ಉಂಟಾದ ಭಾರೀ ಮಳೆಯಿಂದಾಗಿ ಕಳೆದ 24 ಗಂಟೆಗಳಲ್ಲಿ ರಾಜಸ್ಥಾನದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಐವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಐದು ಸಾವುಗಳಲ್ಲಿ ಮೂರು ಬಾರ್ಮರ್ ಜಿಲ್ಲೆಯಲ್ಲಿ ಸಂಭವಿಸಿವೆ.

ರಾಜಸ್ಥಾನದ ಸಲೂಂಬರ್‌ ಜಿಲ್ಲೆಯಲ್ಲಿ ನಡೆದ ಮತ್ತೊಂದು ಘಟನೆಯಲ್ಲಿ, ನೀರು ತುಂಬಿದ ಹಿಟ್ಟಿನ ಗಿರಣಿಯನ್ನು ಸ್ವಿಚ್ ಆಫ್ ಮಾಡಲು ಪ್ರಯತ್ನಿಸುತ್ತಿರುವಾಗ ವ್ಯಕ್ತಿಯೊಬ್ಬರು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದಾರೆ.

ಜೂನ್ 15 ರಂದು ಗುಜರಾತ್ ಕರಾವಳಿಯಲ್ಲಿ ಉಂಟಾದ ಬಿಪರ್ ಜಾಯ್ ಚಂಡಮಾರುತದಿಂದ ಉಂಟಾದ ಭಾರೀ ಮಳೆಯಿಂದಾಗಿ ರಾಜಸ್ಥಾನದ ಹಲವಾರು ಪ್ರದೇಶಗಳು ಪ್ರವಾಹದ ಪರಿಸ್ಥಿತಿಗೆ ಸಾಕ್ಷಿಯಾಗಿವೆ. 1000 ಕ್ಕೂ ಹೆಚ್ಚು ಹಳ್ಳಿಗಳಿಗೆ ವಿದ್ಯುತ್‌ ಸಮಸ್ಯೆಯಿಂದಾಗಿ ಸಂಪರ್ಕ ಸಾಧಿಸಲು ಸಾಧ್ಯವಾಗುತ್ತಿಲ್ಲ. ಆದಾಗ್ಯೂ, ರಕ್ಷಣಾ ಕಾರ್ಯಾಚರಣೆಯು ಜೀವ ಹಾನಿಗಳನ್ನು ಉಳಿಸಲು ಪ್ರಯತ್ನಿಸುತ್ತಿದೆ.

ಬಿಪರ್ ಜಾಯ್ ಚಂಡಮಾರುತದಿಂದ ಉಂಟಾದ ಭಾರೀ ಮಳೆಯಿಂದಾಗಿ ರಾಜಸ್ಥಾನದ ಜಲೋರ್, ಸಿರೋಹಿ ಮತ್ತು ಬಾರ್ಮರ್‌ ಜಿಲ್ಲೆಗಳಲ್ಲಿ ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ಇದುವರೆಗೆ ಯಾವುದೇ ಜೀವಹಾನಿಯ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...