ಛಟ್ ಪೂಜೆ | ನೀರಿನಲ್ಲಿ ಮುಳುಗಿ 15 ಮಂದಿ ಸಾವು

Date:

ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯಲ್ಲಿ ಸಂಭವಿಸಿದ ಪ್ರತ್ಯೇಕ ಘಟನೆಗಳಲ್ಲಿ ಛಟ್ ಪೂಜೆ ವೇಳೆ ನೀರಿನಲ್ಲಿ ಮುಳುಗಿ ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ. ಮೃತರು ಕೊಳ ಮತ್ತು ನದಿಯಲ್ಲಿ ಪೂಜಾ ಕಾರ್ಯಗಳನ್ನು ನಡೆಸುವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಹಜಾರಿಬಾಗ್‌ನ ಶಹಪುರ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಝಾರ್ದಗ್ ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರು ಬಾಲಕಿಯರು ಕೊಳದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರನ್ನು ರಿಂಕಿ ಕುಮಾರಿ (16), ಪೂಜಾ ಕುಮಾರಿ (20), ಸಾಕ್ಷಿ ಕುಮಾರ್ (16), ಮತ್ತು ರಿಯಾ ಕುಮಾರಿ (14) ಎಂದು ಗುರುತಿಸಲಾಗಿದೆ.

ಈ ನಾಲ್ವರೂ ಛಟ್ ಪೂಜೆಯ ನಂತರ ಬಟ್ಟೆ ತೊಳೆಯಲು ಕೊಳಕ್ಕೆ ಹೋಗಿದ್ದರು. ಈ ವೇಳೆ, ಓರ್ವ ಬಾಲಕಿ ಆಕಸ್ಮಿಕವಾಗಿ ಕೊಳಕ್ಕೆ ಬಿದ್ದಿದ್ದಾರೆ. ಆಕೆಯನ್ನು ರಕ್ಷಿಸಲು ಮುಂದಾದ ಇತರ ಮೂವರು ಬಾಲಕಿಯರೂ ಕೊಳಕ್ಕೆ ಬಿದ್ದು, ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮತ್ತೊಂದು ಘಟನೆಯಲ್ಲಿ ಬೇಲಾದ ಗ್ರಾಮದ ಇಬ್ಬರು ಅಪ್ರಾಪ್ತ ಬಾಲಕಿಯರು ಸಾವನ್ನಪ್ಪಿದ್ದಾರೆ. ಛಟ್ ಪೂಜೆ ವೇಳೆ ಕೊಳಕ್ಕೆ ಇಳಿದಿದ್ದ ಗುಂಗುನ್ ಕುಮಾರಿ (11) ಮತ್ತು ರೂಪಾ ತಿವಾರಿ (12) ಮೃತಪಟ್ಟ ಬಾಲಕರು ಎಂದು ಗುರುತಿಸಲಾಗಿದೆ.

ಇನ್ನು, ಇತರ ಪ್ರಕರಣಗಳಲ್ಲಿ ಐವರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಹಜಾರಿಬಾಗ್‌ ಜಿಲ್ಲೆಯಲ್ಲಿ ಛಟ್ ಆಚರಣೆ ವೇಳೆ ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...