ಛತ್ತೀಸ್‌ಘಡ | ಇಬ್ಬರು ಮಹಿಳೆಯರು ಸೇರಿದಂತೆ ಪೊಲೀಸರಿಗೆ ಶರಣಾದ 33 ನಕ್ಸಲರು

Date:

ಕಳೆದ ಕೆಲವು ತಿಂಗಳುಗಳಿಂದ ಛತ್ತೀಸ್‌ಘಡದಲ್ಲಿ ನಕ್ಸಲರು ಹಾಗೂ ಶಸ್ತಾಸ್ರ ಪಡೆಗಳ ನಡುವೆ ಗುಂಡಿನ ಕಾಳಗ ನಡೆಯುತ್ತಿದೆ. ಈ ನಡುವೆ ಮಹತ್ವದ ಬೆಳವಣಿಗೆಯೊಂದರಲ್ಲಿ ಮಹಿಳೆಯರು ಸೇರಿದಂತೆ 33 ಮಂದಿ ನಕ್ಸಲರು ಪೊಲೀಸರಿಗೆ ಶರಣಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

“ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ 33 ನಕ್ಸಲರು, ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಹಿರಿಯ ಅಧಿಕಾರಿಗಳ ಮುಂದೆ ಶನಿವಾರ ಶರಣಾಗತರಾಗಿದ್ದಾರೆ” ಎಂದು ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಯಾದವ್ ತಿಳಿಸಿದರು.

“ಮಾವೋವಾದಿಗಳ ಗಂಗಲೂರು ಪ್ರದೇಶ ಸಮಿತಿಯಡಿ ಸಕ್ರಿಯರಾಗಿದ್ದ ಇಬ್ಬರು ಮಹಿಳೆಯರು ಸೇರಿದಂತೆ ಶರಣಾದ 33 ಮಂದಿಯು, ಪೊಲೀಸರ ಪುನರ್ವಸತಿ ನೀತಿಯಿಂದ ಪ್ರಭಾವಿತರಾಗಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾವೋವಾದಿ ಸಿದ್ಧಾಂತದಿಂದ ಭ್ರಮನಿರಸನಗೊಂಡಿದ್ದಾರೆ ಮತ್ತು ಆದಿವಾಸಿಗಳ ವಿರುದ್ಧ ತಮ್ಮದೇ ಗುಂಪು ನಡೆಸಿದ ದೌರ್ಜನ್ಯವನ್ನು ಖಂಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿಯ (ಪಿಎಲ್‌ಜಿಎ) ಸದಸ್ಯ ರಾಜು ಹೇಮ್ಲ ಅಲಿಯಾಸ್‌ ಠಾಕೂರ್ (35), ಮಾವೋವಾದಿಗಳ ಪ್ಲಟೂನ್ ನಂಬರ್ ಒಂದರ ಸದಸ್ಯ ಸಮೋ ಕರ್ಮ ಪತ್ತೆಗೆ ತಲಾ 2 ಲಕ್ಷ ಹಾಗೂ ಮಾವೋವಾದಿಗಳ ರೆವಲ್ಯೂನಪರಿ ಪಾರ್ಟಿ ಕಮಿಟಿಯ (ಆರ್‌ಪಿಸಿ) ಜನತಾ ಸರ್ಕಾರ್‌ನ ಮುಖ್ಯಸ್ಥ ಸುದ್ರು ಪುನೆಮ್ ಪತ್ತೆಗಾಗಿ 1 ಲಕ್ಷ ಬಹುಮಾನ ಘೋಷಿಸಲಾಗಿತ್ತು. ಈ ಮೂವರು ಭದ್ರತಾ ಸಿಬ್ಬಂದಿ ಮೇಲೆ ದಾಳಿ ನಡೆಸಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಶರಣಾದ ನಕ್ಸಲರಿಗೆ ತಲಾ 25 ಸಾವಿರ ನೀಡಲಾಗಿದ್ದು, ಸರ್ಕಾರದ ನೀತಿಯಂತೆ ಪುನರ್ವಸತಿ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಗುಜರಾತ್ | ರಾಜ್‌ಕೋಟ್‌ನ ಗೇಮಿಂಗ್ ಝೋನ್‌ನಲ್ಲಿ ಭಾರೀ ಬೆಂಕಿ ಅವಘಡ; 20 ಮಂದಿ ಮೃತ್ಯು

ಜಿಲ್ಲೆಯಲ್ಲಿ ಈ ವರ್ಷ ಇದುವರೆಗೆ 109 ನಕ್ಸಲರು ಮುಖ್ಯವಾಹಿನಿಗೆ ಮರಳಿದ್ದು, 189 ಮಂದಿಯನ್ನು ಬಂಧಿಸಲಾಗಿದೆ ಎಂದಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...