ಛತ್ತೀಸ್‌ಗಢ | ನಕ್ಸಲ್-ಭದ್ರತಾ ಪಡೆಗಳ ನಡುವೆ ಗುಂಡಿನ ಕಾಳಗ: ಏಳು ಮಂದಿ ನಕ್ಸಲರು ಬಲಿ

Date:

ಛತ್ತೀಸ್‌ಗಢದ ನಾರಾಯಣಪುರ-ಬಿಜಾಪುರ ಅಂತರ ಜಿಲ್ಲಾ ಗಡಿಯಲ್ಲಿರುವ ಅರಣ್ಯದಲ್ಲಿ ನಕ್ಸಲರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಕಾಳಗ ನಡೆದಿದ್ದು, ಈ ಕಾಳಗದಲ್ಲಿ ಏಳು ಮಂದಿ ನಕ್ಸಲರು ಹತ್ಯೆಯಾಗಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಬೆಳಗ್ಗೆ 11 ಗಂಟೆ ಹೊತ್ತಿಗೆ ಭದ್ರತಾ ಪಡೆಗಳ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸಿತು. ಈ ವೇಳೆ ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆಯಿತು ಎಂದು ನಾರಾಯಣಪುರ ಪೊಲೀಸ್ ಅಧೀಕ್ಷಕ (ಎಸ್‌ಪಿ) ಪ್ರಭಾತ್ ಕುಮಾರ್ ತಿಳಿಸಿದ್ದಾರೆ.

ಈವರೆಗೆ ನಡೆದ ಗುಂಡಿನ ಚಕಮಕಿಯಲ್ಲಿ ಮಾವೋವಾದಿ ಸಮವಸ್ತ್ರದಲ್ಲಿದ್ದ ಏಳು ನಕ್ಸಲರು ಗುಂಡಿಗೆ ಬಲಿಯಾಗಿದ್ದಾರೆ ಎಂದು ಎಸ್‌ಪಿ ಮಾಹಿತಿ ನೀಡಿದ್ದಾರೆ. ದಾಂತೇವಾಡ, ನಾರಾಯಣಪುರ ಮತ್ತು ಬಸ್ತಾರ್ ಜಿಲ್ಲೆಗಳ ಜಿಲ್ಲಾ ಮೀಸಲು ಗಾರ್ಡ್‌ನ ಸದಸ್ಯರು, ಬಸ್ತಾರ್ ಫೈಟರ್ಸ್ ಮತ್ತು ವಿಶೇಷ ಕಾರ್ಯಪಡೆ, ರಾಜ್ಯ ಪೊಲೀಸ್‌ನ ಘಟಕ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎನ್‌ಕೌಂಟರ್ ಸ್ಥಳದಿಂದ ಒಟ್ಟು ಏಳು ಬಂದೂಕುಗಳನ್ನು ವಶಪಡಿಸಿಕೊಳ್ಳಲಾಗಿದೆ. ರಾಜ್ಯದಲ್ಲಿ ಈ ವರ್ಷ ಇಲ್ಲಿಯ ವರೆಗೆ ಭದ್ರತಾ ಪಡೆಗಳು ನಡೆಸಿದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಒಟ್ಟು 112 ನಕ್ಸಲರು ಹತ್ಯೆಯಾಗಿದ್ದಾರೆ.

ಇದನ್ನು ಓದಿದ್ದೀರಾ? ಅನಿಲ ಸೋರಿಕೆಯಿಂದ ಒಂದೇ ಕುಟುಂಬದ ನಾಲ್ವರ ಮೃತ್ಯು: ಮನೆಗೆ ಭೇಟಿ ನೀಡಿ ಪರಿಹಾರ ಘೋಷಿಸಿದ ಸಿಎಂ

ಏ.30 ರಂದು ಭದ್ರತಾ ಪಡೆಗಳು ನಾರಾಯಣಪುರ ಮತ್ತು ಕಂಕೇರ್‌ ಜಿಲ್ಲೆಗಳ ಗಡಿಯುದ್ದಕ್ಕೂ ನಡೆಸಿದ ಎನ್‌ಕೌಂಟರ್‌ಗೆ 10 ನಕ್ಸಲರು ಬಲಿಯಾಗಿದ್ದರು. ಅವರಲ್ಲಿ ಮೂವರು ಮಹಿಳೆಯರು ಸೇರಿದ್ದರು. ಏ.16ರಂದು 29 ನಕ್ಸಲರು ಹತರಾಗಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...