ಛತ್ತೀಸ್‌ಘಢ: ಶಿಕ್ಷಣ ಸಚಿವ ಪ್ರೇಮಸಾಯಿ ಸಿಂಗ್ ಟೇಕಮ್ ರಾಜೀನಾಮೆ

Date:

ಛತ್ತೀಸ್‌ಘಢದ ಶಿಕ್ಷಣ ಸಚಿವ ಪ್ರೇಮಸಾಯಿ ಸಿಂಗ್ ಟೇಕಮ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ನಿರ್ದೇಶನದಂತೆ ತಾವು ರಾಜೀನಾಮೆ ಸಲ್ಲಿಸಿರುವುದಾಗಿ ಅವರು ತಿಳಿಸಿದ್ದಾರೆ.

ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಸಂಪುಟ ಪುನರ್ ರಚನೆ ಮಾಡಲಿದ್ದಾರೆ ಎಂದು ಕಳೆದ ಕೆಲವು ದಿನಗಳಿಂದ ಸುದ್ದಿ ಹಬ್ಬಿದೆ. ಇದರ ನಡುವೆಯೇ ಪ್ರೇಮಸಾಯಿ ಸಿಂಗ್ ಟೇಕಮ್ ಅವರ ರಾಜೀನಾಮೆ ನೀಡಿದ್ದಾರೆ. ಪ್ರತಾಪ್‌ಪುರ್‌ನ ಶಾಸಕರಾಗಿದ್ದ ಪ್ರೇಮಸಾಯಿ ಸಿಂಗ್, ಶಿಕ್ಷಣದ ಜೊತೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಲ್ಪಸಂಖ್ಯಾತರ ಅಭಿವೃದ್ಧಿ ಹಾಗೂ ಸಹಕಾರ ಖಾತೆಗಳನ್ನೂ ಹೊಂದಿದ್ದರು.

‘ಸಂಪುಟದಲ್ಲಿ ಯಾರನ್ನು ಇಟ್ಟುಕೊಳ್ಳಬೇಕು, ಯಾರನ್ನು ತೆಗೆಯಬೇಕು ಎನ್ನುವುದು ಮುಖ್ಯಮಂತ್ರಿಯ ವಿವೇಚನೆಗೆ ಬಿಟ್ಟ ವಿಚಾರ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ನನ್ನ ಪದವಿಗೆ ರಾಜೀನಾಮೆ ನೀಡಿದ್ದೇನೆ’ ಎಂದು ಪ್ರೇಮಸಾಯಿ ಸಿಂಗ್ ಪ್ರತಿಕ್ರಿಯಿಸಿದ್ದಾರೆ. ಸಂಪುಟ ಪುನರ್ ರಚನೆ ಎಂಬುದು ಒಂದು ಸಹಜ ಪ್ರಕ್ರಿಯೆ ಎಂದೂ ಅವರು ಹೇಳಿದ್ದಾರೆ. ತಾವು ಇದೇ ವರ್ಷದ ಕೊನೆಗೆ ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಯ ಕೆಲಸವನ್ನು ನಿರ್ವಹಿಸುವುದಾಗಿ ಅವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ: ಅಧಿವೇಶನ | ಮೋದಿ ಮಾತು ಕೇಳಿದ್ದರೆ ಐದು ವರ್ಷ ಸಿಎಂ ಆಗಿರುತ್ತಿದ್ದೆ: ಎಚ್‌ ಡಿ ಕುಮಾರಸ್ವಾಮಿ

ಈ ಬಗ್ಗೆ ಪ್ರಕಟಣೆ ನೀಡಿರುವ ಮುಖ್ಯಮಂತ್ರಿ ಭೂಪೇಶ್ ಬಘೇಲ್, ತಾವು ಪ್ರೇಮಸಾಯಿ ಸಿಂಗ್ ಟೇಕಮ್ ಅವರ ರಾಜೀನಾಮೆಯನ್ನು ರಾಜ್ಯಪಾಲರಿಗೆ ರವಾನಿಸಿರುವುದಾಗಿ ತಿಳಿಸಿದ್ದಾರೆ.

ನಿನ್ನೆಯಷ್ಟೇ ಛತ್ತೀಸ್‌ಘಢ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿದ್ದ ಮೋಹನ್ ಮಾರ್ಕಮ್ ಅವರನ್ನು ತೆಗೆದು ಅವರ ಜಾಗದಲ್ಲಿ ಸಂಸದ ದೀಪಕ್ ಬೈಜ್ ಅವರನ್ನು ಕೂರಿಸಲಾಗಿತ್ತು. ಮೋಹನ್ ಮಾರ್ಕಮ್ ಅವರಿಗೆ ಸಚಿವ ಪದವಿ ನೀಡಲಾಗುತ್ತದೆ ಎನ್ನುವ ಸುದ್ದಿಗಳಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...