ಛತ್ತೀಸ್‌ಗಢ| ಮದುವೆಗೆ ನಕಾರ; ಯುವತಿ ಕುಟುಂಬದ ಐವರನ್ನು ಕೊಂದು, ಆತ್ಮಹತ್ಯೆ ಮಾಡಿಕೊಂಡ ಪ್ರೇಮಿ

Date:

ಛತ್ತೀಸ್‌ಗಢದ ಸಾರಂಗಢ-ಬಿಲೈಗಢ ಜಿಲ್ಲೆಯಲ್ಲಿ ಯುವತಿಯೊಬ್ಬಳು ತನ್ನ ಮದುವೆಯ ಪ್ರಸ್ತಾಪವನ್ನು ನಿರಾಕರಿಸಿದ ಕಾರಣಕ್ಕೆ 30 ವರ್ಷದ ವ್ಯಕ್ತಿಯೊಬ್ಬ ಯುವತಿಯ ಕುಟುಂಬದ ಐದು ವರ್ಷದ ಬಾಲಕ ಸೇರಿದಂತೆ ಐವರನ್ನು ಕೊಂದು ತಾನೂ ಕೂಡಾ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಥರಗಾಂವ್ ಗ್ರಾಮದಲ್ಲಿ ನಡೆದಿದೆ.

ಆರೋಪಿಯನ್ನು ಮನೋಜ್ ಸಾಹು ಎಂದು ಗುರುತಿಸಲಾಗಿದೆ. ಹೇಮಲಾಲ್ ಸಾಹು (55), ಅವರ ಪತ್ನಿ ಜಗಮೋತಿ ಸಾಹು (50), ಅವರ ಪುತ್ರಿಯರಾದ ಮೀರಾ ಸಾಹು (30) ಮತ್ತು ಮಮತಾ ಸಾಹು (35) ಮತ್ತು ಮೀರಾ ಅವರ ಮಗ ಆಯುಷ್‌ನನ್ನು (5) ಮನೋಜ್ ಸಾಹು ಕೊಲೆ ಮಾಡಿದ್ದಾನೆ.

ಇದನ್ನು ಓದಿದ್ದೀರಾ?  ಬೆಂಗಳೂರು | ಹೆಣ್ಣು ಮಕ್ಕಳಿಬ್ಬರನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ದಂಪತಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟೈಲರ್ ಆಗಿದ್ದ ಮನೋಜ್ ರಾತ್ರಿ ವೇಳೆ ಮೀರಾ ಸಾಹು ಮನೆಯ ಗೋಡೆಯನ್ನು ಹಾರಿ ಬಂದಿದ್ದಾನೆ. ಒಳಗೆ ಬಂದವನು ಮೊದಲು ಹಾಲ್‌ನಲ್ಲಿ ಮಲಗಿದ್ದ ಹೇಮಲಾಲ್, ಜಗಮೋತಿ ಅವರನ್ನು ಕೊಂದಿದ್ದಾನೆ. ಬಳಿಕ ಕೋಣೆಯಲ್ಲಿ ಮಲಗಿದ್ದ ಮಮತಾ ಮತ್ತು ಆಕೆಯ ಮಗ ಆಯುಷ್, ಮೀರಾ ಅವರನ್ನು ಕೊಂದಿದ್ದಾನೆ ಎನ್ನಲಾಗಿದೆ. ಅದಾದ ನಂತರ ಮತ್ತೊಂದು ಕೋಣೆಯಲ್ಲಿ ನೇಣು ಬಿಗಿದುಕೊಂಡಿದ್ದಾನೆ.

ಶನಿವಾರ ಬೆಳಿಗ್ಗೆ ಸಂಬಂಧಿಕರು ಮೀರಾ ಕುಟುಂಬಕ್ಕೆ ಕರೆ ಮಾಡಿದ್ದು ಯಾರೂ ಕೂಡಾ ಉತ್ತರಿಸದೆ ಇದ್ದಾಗ ಸಂಬಂಧಿಕರು ನೆರೆ ಮನೆಯವರಿಗೆ ಕರೆ ಮಾಡಿದ್ದಾರೆ. ನೆರೆ ಮನೆಯವರು ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ.

ಇದನ್ನು ಓದಿದ್ದೀರಾ?  ಮಂಡ್ಯ | ಕೌಟುಂಬಿಕ ಕಲಹದಿಂದ ಮಹಿಳೆ ಆತ್ಮಹತ್ಯೆ; ಪತಿಯ ವಿರುದ್ಧ ಕೊಲೆ ಆರೋಪ

ಇದಕ್ಕೂ ಮೊದಲು, ಮೀರಾ ತನ್ನ ಮದುವೆ ಪ್ರಸ್ತಾಪವನ್ನು ನಿರಾಕರಿಸಿದ್ದರಿಂದ, ಕೋಪಗೊಂಡ ಮನೋಜ್, ಮೀರಾ ಮತ್ತು ಅವಳ ಸಹೋದರಿಯ ಮೇಲೆ ಹಲ್ಲೆ ನಡೆಸಿದ್ದನು ಎಂದು ವರದಿಯಾಗಿದೆ.

“2017ರಲ್ಲಿ, ಮೀರಾ ಮನೋಜ್ ವಿರುದ್ಧ ಅತಿಕ್ರಮಣ ಮತ್ತು ಹಲ್ಲೆ ದೂರು ದಾಖಲಿಸಿದ್ದಾರೆ, ಎಫ್ಐಆರ್ ದಾಖಲಿಸಲಾಗಿದೆ. ಪ್ರಕರಣದ ವಿಚಾರಣೆ ನಡೆಯುತ್ತಿದೆ” ಎಂದು ಪೊಲೀಸ್ ವರಿಷ್ಠಾಧಿಕಾರಿ ಪುಷ್ಕರ್ ಶರ್ಮಾ ತಿಳಿಸಿರುವುದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...