ಛತ್ತೀಸ್‌ಗಢ | ಹಿಂಸಾಚಾರಕ್ಕೆ ತಿರುಗಿದ ತಮ್ನಾರ್‌ ಕಲ್ಲಿದ್ದಲು ಗಣಿಗಾರಿಕೆ ವಿರೋಧಿ ಹೋರಾಟ; ವಾಹನಗಳಿಗೆ ಬೆಂಕಿ

Date:

ಛತ್ತೀಸ್‌ಗಢದ ರಾಯ್‌ಗಢ ಜಿಲ್ಲೆಯ ತಮ್ನಾರ್ ಪ್ರದೇಶದಲ್ಲಿ ಕಲ್ಲಿದ್ದಲು ಗಣಿಗಾರಿಕೆ ಯೋಜನೆ ವಿರುದ್ಧ ಶನಿವಾರ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯನ್ನು ಹತ್ತಿಕ್ಕಲು ಯತ್ನಿಸಿದ ಭದ್ರತಾ ಪಡೆಗಳೊಂದಿಗೆ ಪ್ರತಿಭಟನಾಕಾರರು ಘರ್ಷಣೆ ನಡೆಸಿದ್ದಾರೆ. ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಪ್ರತಿಭಟನಾಕಾರರು ಮತ್ತು ಕೆಲವು ಪೊಲೀಸರಿಗೆ ಗಾಯಗಳಾಗಿವೆ.

ಕಲ್ಲಿದ್ದಲು ಸಾಗಿಸುತ್ತಿದ್ದ ಭಾರೀ ವಾಹನವೊಂದು ಸೈಕಲ್ ಸವಾರಿ ಮಾಡುತ್ತಿದ್ದ ಸ್ಥಳೀಯ ಗ್ರಾಮಸ್ಥನಿಗೆ ಡಿಕ್ಕಿ ಹೊಡೆದಿದ್ದು, ಆತ ಲಾರಿಯ ಕೆಳಗೆ ನಿಲುಕಿ ಸಾವನ್ನಪ್ಪಿದ್ದಾರೆ. ಘಟನೆಯ ಬಳಿಕ, ಕಲ್ಲಿದ್ದಲು ಗಣಿಗಾರಿಕೆ ವಿರುದ್ಧ ಶನಿವಾರ ಪ್ರತಿಭಟನೆಗಳು ಭುಗಿಲೆದ್ದಿವೆ.

ಶನಿವಾರ ಬೆಳಗ್ಗೆ ಆರಂಭಗೊಂಡ ಪ್ರತಿಭಟನೆ ಮಧ್ನಾಹ್ನದ ವೇಳೆಗೆ ಹಿಂಸಾಚಾರಕ್ಕೆ ತಿರುಗಿತು. ಸಂಜೆಯವರೆಗೂ ಉದ್ವಿಗ್ನ ಪರಿಸ್ಥಿತಿ ಮುಂದುವರೆದಿತ್ತು. ವಾಹನಗಳಿಗೆ ಬೆಂಕಿ ಹಚ್ಚುವಿಕೆ, ಕಲ್ಲು ತೂರಾಟ ಹಾಗೂ ದಾಳಿಗಳು ನಡೆದಿವೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆಯ ನೇತೃತ್ವ ವಹಿಸಿದ್ದವರಲ್ಲಿ ಒಬ್ಬರಾದ ರಾಧೇಶ್ಯಾಮ್ ಶರ್ಮಾ ಸೇರಿದಂತೆ ಸುಮಾರು 35–40 ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ.

ತಮ್ನಾರ್ ಪ್ರದೇಶದ 14 ಹಳ್ಳಿಗಳ ನಿವಾಸಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ ಗೇರ್ ಪೆಲ್ಮಾದಲ್ಲಿ ಖಾಸಗಿ ಕಂಪನಿಯ ಕಲ್ಲಿದ್ದಲು ಗಣಿಗಾರಿಕೆಗಾಗಿ ‘ಪರಿಸರ ಸಾರ್ವಜನಿಕ ವಿಚಾರಣೆ’ಯ ನಕಲಿ ವರದಿಯನ್ನು ಸಿದ್ದಪಡಿಸಿ, ಗಣಿಗಾರಿಕೆ ನಡೆಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಗಣಿಗಾರಿಕೆ ವಿರುದ್ಧ ಕಳೆದ 15 ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದು, ಸ್ಥಳೀಯ ಗ್ರಾಮಸ್ಥನ ಸವಿನ ಬಳಿಕ, ಪ್ರತಿಭಟನೆ ಉದ್ವಿಗ್ನಗೊಂಡಿದೆ.

ಈ ಲೇಖನ ಓದಿದ್ದೀರಾ?: ವಿಜಯ್ ಕೊನೆಯ ಚಿತ್ರ ‘ಜನ ನಾಯಗನ್’ ಮತ್ತು ತಮಿಳುನಾಡಿನ ರಾಜಕಾರಣ

“ಗ್ರಾಮಸ್ಥರು ಭದ್ರತಾ ಪಡೆಗಳ ಮೇಲೆ ಕಲ್ಲು ಮತ್ತು ಇಟ್ಟಿಗೆಗಳನ್ನು ತೂರಿದ್ದಾರೆ. ಪರಿಸ್ಥಿತಿ ಇನ್ನೂ ಉದ್ವಿಗ್ನವಾಗಿದೆ. ಪ್ರದೇಶದಲ್ಲಿ ಬಿಗಿಬಂದೋಬಸ್ತ್‌ಗಾಗಿ 200ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದ್ದು, ಗ್ರಾಮವನ್ನು ನಿರ್ಬಂಧಿಸಲಾಗಿದೆ” ಎಂದು ಬಿಲಾಸ್ಪುರ್ ವಲಯ ಐಜಿಪಿ ಸಂಜೀವ್ ಶುಕ್ಲಾ ಹೇಳಿರುವುದಾಗಿ ‘ಟೈಮ್ಸ್‌ ಆಫ್‌ ಇಂಡಿಯಾ’ ವರದಿ ಮಾಡಿದೆ.

ಘಟನೆಯನ್ನು ‘ಛತ್ತೀಸ್‌ಗಢ ಬಚಾವೋ ಆಂದೋಲನ’ವು ದುರದೃಷ್ಟಕರವೆಂದು ಕರೆದಿದೆ. ಘಟನೆಗೆ ರಾಜ್ಯ ಸರ್ಕಾರವನ್ನು ದೂಷಿಸಿದೆ. “ಹಸ್ದಿಯೊದಿಂದ ಅಮೇರಾವರೆಗೆ ಅರಣ್ಯ ಪ್ರದೇಶಗಳಲ್ಲಿ ರಾಜ್ಯಾದ್ಯಂತ ಗಣಿಗಾರಿಕೆಗಳು ನಡೆಯುತ್ತಿವೆ. ಅವುಗಳ ವಿರುದ್ಧ ನಡೆಯುತ್ತಿರುವ ಶಾಂತಿಯುತ, ಪ್ರಜಾಸತ್ತಾತ್ಮಕ ಪ್ರತಿಭಟನೆಗಳನ್ನು ಹತ್ತಿಕ್ಕಲು ಸರ್ಕಾರಗಳು ಪೊಲೀಸ್ ಬಲವನ್ನು ಪ್ರಯೋಗಿಸುತ್ತಿವೆ. ಆದಿವಾಸಿ ಮತ್ತು ರೈತರ ಜೀವನೋಪಾಯವನ್ನು ಬಲಿಕೊಟ್ಟು ಛತ್ತೀಸ್‌ಗಢವನ್ನು ‘ಕಾರ್ಪೊರೇಟ್ ಲೂಟಿ’ಗೆ ಒಡ್ಡುತ್ತಿವೆ” ಎಂದು ಆರೋಪಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...