ರಾಜಸ್ಥಾನ | ಮೂರು ದಿನ ಬೋರ್‌ವೆಲ್‌ನಲ್ಲಿ ಸಿಲುಕಿದ್ದ ಮಗು; ರಕ್ಷಣಾ ಕಾರ್ಯಾಚರಣೆಯ ನಂತರ ಸಾವು

Date:

ರಾಜಸ್ಥಾನದ ದೌಸಾದಲ್ಲಿ ಸುಮಾರು 150 ಅಡಿ ಬೋರ್‌ವೆಲ್‌ನಲ್ಲಿ ಸಿಲುಕಿದ್ದ ಐದು ವರ್ಷದ ಬಾಲಕ ಸುಮಾರು ಮೂರು ದಿನಗಳ ಕಾಲ ನಡೆಸಿದ ರಕ್ಷಣಾ ಕಾರ್ಯಾಚರಣೆ ಬಳಿಕ ಸಾವನ್ನಪ್ಪಿದ್ದಾನೆ.

ಅಧಿಕಾರಿಗಳು ಮೂರು ದಿನಗಳಿಗೂ ಹೆಚ್ಚು ಕಾಲ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಬಾಲಕನನ್ನು ಬೋರ್‌ವೆಲ್‌ನಿಂದ ಹೊರತೆಗೆದಿದ್ದರು. ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ರಾಜಸ್ಥಾನ | ಸುರಂಗ ಕುಸಿತ; ಓರ್ವ ಕಾರ್ಮಿಕ ಸಾವು, ಇಬ್ಬರಿಗೆ ಗಾಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಿಸೆಂಬರ್ 9ರಂದು ಮಗು ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಆಳವಾದ ಬೋರ್‌ವೆಲ್‌ಗೆ ಬಿದ್ದಿತ್ತು. ತಕ್ಷಣ ರಕ್ಷಣಾ ಕಾರ್ಯಾಚರಣೆಯು ಆರಂಭಿಸಲಾಗಿತ್ತು. ಬುಧವಾರ ರಾತ್ರಿ ಮಗುವನ್ನು ರಕ್ಷಿಸಲಾಗಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಗುವನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ವೈದ್ಯಕೀಯ ಸಿಬ್ಬಂದಿ ಬಾಲಕ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ದೌಸಾ ಮುಖ್ಯ ವೈದ್ಯಕೀಯ ಅಧಿಕಾರಿ ದೀಪಕ್ ಶರ್ಮಾ, “ಸಾಕಷ್ಟು ಪ್ರಯತ್ನಪಟ್ಟರೂ ಕೂಡಾ ಮಗುವಿನ ಜೀವವನ್ನು ಉಳಿಸಲು ಸಾಧ್ಯವಾಗಲಿಲ್ಲ. ನಾವು ಎರಡು ಬಾರಿ ಇಸಿಜಿ ಮಾಡಿದ್ದೇವೆ. ಆದರೆ ಮಗು ಆಗಾಗಲೇ ಸಾವನ್ನಪ್ಪಿತ್ತು” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...