ಚಲಿಸುತ್ತಿದ್ದ ಬಸ್‌ನಲ್ಲಿ ಹೆರಿಗೆ; ಶಿಶುವನ್ನು ಹೊರಗೆಸೆದ ತಂದೆ-ತಾಯಿ

Date:

ಚಲಿಸುತ್ತಿದ್ದ ಬಸ್‌ನಲ್ಲಿಯೇ ಗರ್ಭಿಣಿಯೊಬ್ಬರಿಗೆ ಹೆರಿಯಾಗಿದ್ದು, ಮಗು ಜನಿಸಿದ ಕೂಡಲೇ ಮಗುವನ್ನು ತಾಯಿ ಮತ್ತು ಆಕೆಯ ಪತಿ ಕಿಟಕಿಯಿಂದ ಹೊರಗೆಸೆದಿರುವ ಹೃದಯವಿದ್ರಾವಕ, ಅಮಾನವೀಯ ಘಟನೆ ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯಲ್ಲಿ ನಡೆದಿದೆ.

ಪರ್ಭಾನಿ ಜಿಲ್ಲೆಯಲ್ಲಿ ಪತ್ರಿ-ಸೇಲು ರಸ್ತೆಯಲ್ಲಿ ಘಟನೆ ನಡೆದಿದೆ. ಆರೋಪಿ ತಂದೆ-ತಾಯಿಯನ್ನು ಅಲ್ತಾಫ್ ಶೇಖ್ ಮತ್ತು ರಿತಿಕಾ ಧೇರೆ ಎಂದು ಹೆಸರಿಸಲಾಗಿದ್ದು, ಇಬ್ಬರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದಂಪತಿಗಳು ಸ್ಲೀಪರ್ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ, ಗರ್ಭಿಣಿ ರಿತಿಕಾ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಬಸ್‌ನಲ್ಲಿಯೇ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಆದರೆ, ಮಗು ಜನಿಸಿದ ಕೂಡಲೇ ಮಗುವನ್ನು ಬಟ್ಟೆಯಲ್ಲಿ ಸುತ್ತಿ, ಕಿಟಕಿಯಿಂದ ಹೊರಗೆಸಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಸ್‌ನ ಕಿಟಕಿಯಿಂದ ಬಟ್ಟೆಯಲ್ಲಿ ಸುತ್ತಿದ್ದ ರೀತಿಯಲ್ಲಿ ಹೊರಬಿದ್ದುದ್ದನ್ನು ಗಮನಿಸಿದ ಬಸ್‌ ಸಿಬ್ಬಂದಿ, ದಂಪತಿಗಳನ್ನು ಪ್ರಶ್ನಿಸಿದ್ದಾರೆ. ಆದರೆ, ಪತ್ನಿ ವಾಂತಿ ಮಾಡಿಕೊಂಡರು. ವಾಂತಿಯ ಕವರ್‌ಅನ್ನು ಎಸೆದಿದ್ದಾಗಿ ಅಲ್ತಾಫ್ ಹೇಳಿದ್ದಾರೆ. ಆದಾಗ್ಯೂ, ರಸ್ತೆ ಬದಿಯಲ್ಲಿ ಬಟ್ಟೆಯಲ್ಲಿ ಸುತ್ತಿದ ರೀತಿಯಲ್ಲಿ ಬಿದ್ದಿದ್ದ ಶಿಶುವನ್ನು ದಾರಿಹೋಕರು ಗಮನಿಸಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ಲೇಖನ ಓದಿದ್ದೀರಾ?: ಶಿಕ್ಷಣ ಸ್ಪೆಷಲ್ | ಸಮಾನ ಶಿಕ್ಷಣ, ಭಾಷಾ ನೀತಿ ಮತ್ತು ಪ್ರಭುತ್ವದ ಮುಸುಕಿನ ಆಟ

ಗಸ್ತು ತಿರುಗುತ್ತಿದ್ದ ಪೊಲೀಸರು ಬಸ್‌ಅನ್ನು ಅಡ್ಡಗಟ್ಟಿ, ವಿಚಾರಣೆ ನಡೆಸಿದ್ದಾರೆ. ಈ ವೇಳೆ, ಮಗುವನ್ನು ಬೆಳೆಸಲು ತಮ್ಮ ಆರ್ಥಿಕ ಪರಿಸ್ಥಿತಿ ಕಷ್ಟಕರವಾಗಿದೆ ಎಂಬ ಕಾರಣಕ್ಕಾಗಿ ತಾವೇ ಮಗುವನ್ನು ಎಸೆದಿದ್ದಾಗಿ ದಂಪತಿಗಳು ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ದಂಪತಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ದಂಪತಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್‌) ಸೆಕ್ಷನ್ 94(3), 94(5) ಅಡಿಯಲ್ಲಿ ಪತ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ನಡೆಯುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...