ಚೀನಾ-ಜಪಾನ್ ನಮ್ಮ ಸ್ಪರ್ಧಿಗಳು, ಆಂಧ್ರ-ತಮಿಳುನಾಡಲ್ಲ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ

Date:

ತೆಲಂಗಾಣದ ಅಭಿವೃದ್ಧಿಯನ್ನು ಈಗ ನೆರೆರಾಜ್ಯಗಳ ಮಟ್ಟಕ್ಕೆ ಸೀಮಿತಗೊಳಿಸದೆ, ಜಾಗತಿಕ ಆರ್ಥಿಕ ಶಕ್ತಿಗಳ ಮಟ್ಟದಲ್ಲಿ ಅಳೆಯುವ ಹಂತಕ್ಕೆ ರಾಜ್ಯ ಬಂದಿದೆ ಎಂದು ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಹೇಳಿದ್ದಾರೆ.

ಹೈದರಾಬಾದ್‌ನ ಸಚಿವಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ʼತೆಲಂಗಾಣ ರೈಸಿಂಗ್ 2047ʼ ಎಂಬ ದೂರದೃಷ್ಟಿ ದಸ್ತಾವೇಜನ್ನು ಬಿಡುಗಡೆ ಮಾಡಿ ಮಾತನಾಡಿದರು. 2047ರ ವೇಳೆಗೆ ರಾಜ್ಯವನ್ನು 3 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ಪರಿವರ್ತಿಸುವ ನೀಲನಕ್ಷೆ ಇದಾಗಿದೆ ಎಂದು ತಿಳಿಸಿದರು.

“ನಮ್ಮ ಸ್ಪರ್ಧೆ ಈಗ ಚೀನಾ, ಜಪಾನ್, ದಕ್ಷಿಣ ಕೊರಿಯಾ ಮತ್ತು ಸಿಂಗಾಪುರ್ ಜೊತೆಗೆ, ತೆಲಂಗಾಣಕ್ಕೆ ದೊಡ್ಡ ಮಟ್ಟದ ವಿದೇಶಿ ಹೂಡಿಕೆಗಳನ್ನು ತರುತ್ತೇವೆ; ಆಂಧ್ರಪ್ರದೇಶ ಮತ್ತು ತಮಿಳುನಾಡು ನಮ್ಮ ಅಭಿವೃದ್ಧಿಗೆ ಮಾನದಂಡಗಳಲ್ಲ” ಎಂದು ರೇವಂತ್ ರೆಡ್ಡಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ದೂರದೃಷ್ಟಿ ಮತ್ತು ತಂತ್ರ’ ಕೇಂದ್ರಿತವಾದ ಈ ದಸ್ತಾವೇಜು ದೇಶದ ಅಭಿವೃದ್ಧಿಯಲ್ಲಿ ತೆಲಂಗಾಣದ ಪಾಲನ್ನು ಶೇ.10ರಷ್ಟು ಗಂಭೀರವಾದ ಗುರಿಯೊಂದಿಗೆ ಹೆಚ್ಚಿಸುವ ಉದ್ದೇಶ ಹೊಂದಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ‘ಕೊಟ್ಟ ಮಾತು’ ಗದ್ದಲ ಸೃಷ್ಟಿಸಿದ ಬಳಿಕ ಎಚ್ಚೆತ್ತ ಕಾಂಗ್ರೆಸ್

ಡಿಸೆಂಬರ್ 8 ಮತ್ತು 9ರಂದು ಹೈದರಾಬಾದ್‌ನ ಫ್ಯೂಚರ್ ಸಿಟಿಯಲ್ಲಿ ನಡೆಯಲಿರುವ ಜಾಗತಿಕ ಶೃಂಗಸಭೆಯಲ್ಲಿ ಈ ಯೋಜನೆಯನ್ನು ಉದ್ಘಾಟಿಸಲಾಗುವುದು. ವಿಶ್ವದಾದ್ಯಂತ ನಾಯಕರನ್ನು ಆಹ್ವಾನಿಸಲಾಗುತ್ತಿದೆ. ನೀತಿ ಆಯೋಗ ಮತ್ತು ಐಎಸ್‌ಬಿ ಸಂಸ್ಥೆಗಳ ಸಹಕಾರದೊಂದಿಗೆ ತಯಾರಾದ ಈ ಸಮಗ್ರ ದಸ್ತಾವೇಜು ಜನರನ್ನು ಪಾಲುದಾರರನ್ನಾಗಿ ಮಾಡಿಕೊಂಡಿದೆ ಮತ್ತು ರಾಜ್ಯವನ್ನು ಪರಸ್ಪರ ಬೆಂಬಲಿತ ಮೂರು ಆರ್ಥಿಕ ವಲಯಗಳಾಗಿ ವಿಂಗಡಿಸಲಾಗಿದೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರತಿನಿಧಿಗಳನ್ನು ಶೃಂಗಸಭೆಗೆ ಆಹ್ವಾನಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ರೇವಂತ್ ರೆಡ್ಡಿ ಭೇಟಿಯಾಗಿ ವೈಯಕ್ತಿಕವಾಗಿ ಆಹ್ವಾನ ನೀಡಲಿದ್ದಾರೆ.

ಕೇಂದ್ರ ಸಚಿವರು, ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು, ಪ್ರಮುಖ ಕೈಗಾರಿಕಾ ಉದ್ಯಮಿಗಳು, ಖ್ಯಾತ ಅರ್ಥಶಾಸ್ತ್ರಜ್ಞರು, ಕ್ರೀಡಾಪಟುಗಳು, ಮಾಧ್ಯಮ ವ್ಯಕ್ತಿಗಳು ಮತ್ತು ರಾಯಭಾರಿಗಳು ಸೇರಿದಂತೆ ವಿವಿಧ ಕ್ಷೇತ್ರಗಳ 4,500 ಪ್ರಮುಖ ಪ್ರತಿನಿಧಿಗಳಿಗೆ ಆಹ್ವಾನ ನೀಡಲಾಗಿದೆ ಎಂದು ರೇವಂತ್‌ ರೆಡ್ಡಿ ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...