ಚಿತ್ರದುರ್ಗ | ಮಾನವ ಕಳ್ಳ ಸಾಗಣೆ ತಡೆಗಟ್ಟಿ, ಬಡತನ, ನಿರುದ್ಯೋಗ, ಅನಕ್ಷರತೆಯೇ ಮೂಲ; ಆಶ್ರಿತ ಸಂಸ್ಥೆಯ ನಾಗರಾಜ್

Date:

“ಬಡತನ, ನಿರುದ್ಯೋಗ ಮತ್ತು ಅನಕ್ಷರತೆಗಳು ಮಾನವ ಕಳ್ಳ ಸಾಗಣೆಯ ಪ್ರಮುಖ ಅಂಶವಾಗಿದ್ದು , ಮಾನವ ಕಳ್ಳ ಸಾಗಣೆಯಂತಹ ಅಪರಾಧಗಳಿಂದ ದುರ್ಬಲ ವರ್ಗದ ಜನರನ್ನು ರಕ್ಷಿಸಲು. ಅನಾಮದೇಯರು ನೀಡುವ ಆಸೆ ಆಮಿಷಗಳಿಗೆ ಬಲಿಯಾಗದಂತೆ ಜಾಗೃತಿ ಮೂಡಿಸಬೇಕಿದೆ” ಎಂದು ಚಿತ್ರದುರ್ಗದ ಕಾರ್ಯಕ್ರಮದಲ್ಲಿ ಆಶ್ರಿತ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಎಸ್. ನಾಗರಾಜ್ ತಿಳಿಸಿದರು.

1002420669

ಆಶ್ರಿತ ಸಂಸ್ಥೆ ಚಿತ್ರದುರ್ಗ, ಭಾರತೀಯ ರೈಲ್ವೆ ಇಲಾಖೆ. ರೈಲ್ವೆ ಪೊಲೀಸ್ ಇಲಾಖೆ. ಜಸ್ಟ್ ರೈಟ್ಸ್ ಫಾರ್ ಚಿಲ್ಡ್ರನ್ ಇವರ ಸಂಯುಕ್ತಾಶ್ರಯದಲ್ಲಿ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ರೈಲು ನಿಲ್ದಾಣದಲ್ಲಿ ನಡೆದ ವಿಶ್ವಮಾನವ ಕಳ್ಳ ಸಾಗಣಿಕೆ ವಿರೋಧಿ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಇತ್ತೀಚೆಗೆ ಸಾಮಾಜಿಕ ಜಾಲತಾಣಗಳ ಮೂಲಕ ಪರಿಚಯವಾಗಿ ಅಪರಿಚಿತರು ನೀಡುವ ಉದ್ಯೋಗ ಮತ್ತು ಹಣದ ಆಮಿಷಕ್ಕೆ ಬಲಿಯಾಗಿ, ಹೆಣ್ಣು ಮಕ್ಕಳು ಮತ್ತು ಮಕ್ಕಳು ದೇಶ ವಿದೇಶಗಳಲ್ಲಿ ಮಾರಾಟವಾಗುತ್ತಿದ್ದಾರೆ. ಇದರ ನಿರ್ಬಂಧನೆಗಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಕರೆ ನೀಡಿದರು.‌

1002420668

ಚಿತ್ರದುರ್ಗ ಜಿಲ್ಲಾ ಸಮನ್ವಯಾಧಿಕಾರಿ ಡಿ.ಓ.ಮುರಾರ್ಜಿ ಮಾತನಾಡಿ “ಮಾನವ ಕಳ್ಳ ಸಾಗಣೆಯಲ್ಲಿ ವ್ಯಕ್ತಿಯನ್ನು ಮಾನಸಿಕ ಖಿನ್ನತೆಗೆ ಒಳಪಡಿಸಿ. ಲೈಂಗಿಕ ಶೋಷಣೆ ಅಥವಾ ಬಲವಂತದ ಮೂಲಕ ವ್ಯಕ್ತಿಗಳನ್ನು ನೇಮಕ ಮಾಡಿಕೊಳ್ಳುವುದು ನಡೆಯುತ್ತಿದೆ. ಇದರಲ್ಲಿ ಪ್ರಜ್ಞಾವಂತರ ಜಾಲದ ಕೈವಾಡವು ಇದೆ. ಅದನ್ನು ಕಾನೂನು ರೀತಿಯಲ್ಲಿ ನಿರ್ಬಂಧಿಸಬೇಕಿದೆ” ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002420673

“ಈ ಶೋಷಣೆಯಲ್ಲಿ ಬಲವಂತದ ಕಾರ್ಮಿಕ, ಲೈಂಗಿಕ ಗುಲಾಮಗಿರಿ ಅಥವಾ ಇತರ ರೀತಿಯ ವಾಣಿಜ್ಯ ಲೈಂಗಿಕ ಶೋಷಣೆ ಒಳಗೊಂಡಿರಬಹುದು. ಇದನ್ನು ಮಾನವ ಹಕ್ಕುಗಳ ಗಂಭೀರ ಉಲ್ಲಂಘನೆ ಮತ್ತು ಆಧುನಿಕ ಗುಲಾಮಗಿರಿಯ ಒಂದು ರೂಪವೆಂದು ಪರಿಗಣಿಸಲಾಗುತ್ತದೆ. ಮಾನವ ಕಳ್ಳಸಾಗಣೆ ವಿರುದ್ಧ ಹೋರಾಡುವ ಪ್ರಯತ್ನಗಳು ಅಂತರರಾಷ್ಟ್ರೀಯ ಕಾನೂನುಗಳು, ರಾಷ್ಟ್ರೀಯ ನೀತಿಗಳು ಮತ್ತು ಸರ್ಕಾರೇತರ ಸಂಸ್ಥೆಗಳನ್ನು ಒಳಗೊಂಡಿದ್ದು ಇದಕ್ಕೆ ಸಾರ್ವಜನಿಕರ ಸಹಕಾರದ ಅಗತ್ಯವಿದೆ” ಎಂದು ಅಭಿಪ್ರಾಯಪಟ್ಟರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಜಾತಿ ಗಣತಿ ಸಮೀಕ್ಷೆ ಮಂಡಿಸಿ, ಅಧಿವೇಶನದಲ್ಲಿ ಒಳಮೀಸಲಾತಿ ಜಾರಿಗೊಳಿಸಿ; ದಲಿತ ಸಂಘರ್ಷ ಸಮಿತಿ

ಕಾರ್ಯಕ್ರಮದಲ್ಲಿ ರೈಲ್ವೆ ಇಲಾಖೆಯ ನಿಲ್ದಾಣ ವ್ಯವಸ್ಥಾಪಕ ವಿ ನಾಗಪ್ರತಾಪು, ರೈಲ್ವೆ ಪೊಲೀಸ್ ಇಲಾಖೆಯ ಪಿಎಸ್ಐ ಚಂದ್ರಶೇಖರ, ಹೆಡ್ ಕಾನ್ಸ್ಟೇಬಲ್ ಎಂಎಸ್ ಮಂಜುನಾಥ್, ಆಶ್ರಿತ ಸಂಸ್ಥೆಯ ತಿಪ್ಪೇಸ್ವಾಮಿ, ದೇವಿರಮ್ಮ, ಎಸ್ ಚಂದ್ರಣ್ಣ, ಮತ್ತು ರೈಲ್ವೆ ಇಲಾಖೆಯ ಸಿಬ್ಬಂದಿ ಹಾಗೂ ಪ್ರಯಾಣಿಕರು ಹಾಜರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...