ಚಿತ್ರದುರ್ಗ | ನಿಸ್ವಾರ್ಥ, ಸರ್ವಸಂಗಪರಿತ್ಯಾಗಿ ಸೈನಿಕರಿಂದ ಪ್ರಜೆಗಳಿಗೆ ನೆಮ್ಮದಿ; ಕಾರ್ಗಿಲ್ ವಿಜಯೋತ್ಸವದಲ್ಲಿ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು

Date:

“ನಿಜವಾದ ನಿಸ್ವಾರ್ಥಿ ಮಾತ್ರ ಸೈನಿಕನಾಗಲು ಸಾಧ್ಯ. ಸೈನಿಕ ನಿಜವಾದ ಸರ್ವಸಂಗಪರಿತ್ಯಾಗಿ. ಯುದ್ದ ಭೂಮಿ, ಗಡಿ ರಕ್ಷಣೆಯಲ್ಲಿ ಪ್ರಾಣಪಕ್ಷಿ ಹಾರಿಹೋಗುತ್ತದೆ ಎಂಬ ಸತ್ಯ ಅರಿವಿದ್ದರೂ ಇದೇ ವೃತ್ತಿ ಆಯ್ಕೆ ಮಾಡಿಕೊಳ್ಳುವ ಜವಾಬ್ದಾರಿಯೇ ಯೋಧ. ದೇಶಪ್ರೇಮದ ಪರಮೋಚ್ಚ ಸ್ಥಾನವೇ ಸೈನಿಕ. “ಇಂದು ದೇಶದ ಪ್ರತಿಯೊಬ್ಬ ಪ್ರಜೆ ನೆಮ್ಮದಿಯ ಬದುಕು ಸಾಗಿಸುತ್ತಿದ್ದಾನೆ ಎಂದರೆ ಅದಕ್ಕೆ ದೇಶವನ್ನು ಹಗಲಿರುಳು ಕಾಯುತ್ತಿರುವ ಸೈನಿಕರೇ ಕಾರಣ. ಸೈನಿಕರನ್ನು ಯಾರೂ ಕಡೆಗಣಿಸದೆ ಗೌರವದಿಂದ ಕಾಣಬೇಕು” ಎಂದು ಚಿತ್ರದುರ್ಗ ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಶ್ರೀಗಳು ಕಾರ್ಗಿಲ್ ವಿಜಯೋತ್ಸವ ಆಚರಣೆಯಲ್ಲಿ ಹೆಮ್ಮೆ ವ್ಯಕ್ತಪಡಿಸಿದರು.

1002390582

ಚಿತ್ರದುರ್ಗ ಹೊರವಲಯದ ಎಸ್ ಜೆ ಎಸ್ ಸಮೂಹ ವಿದ್ಯಾಸಂಸ್ಥೆಗಳು, ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನದಲ್ಲಿ ಹಮ್ಮಿಕೊಂಡ ಕಾರ್ಗಿಲ್ ವಿಜಯೋತ್ಸವ ದಿನಾಚರಣೆಯ ಸಾನ್ನಿಧ್ಯವಹಿಸಿ ಮಾತನಾಡಿದ ಶ್ರೀಗಳು “ಕಾರ್ಗಿಲ್ ವಿಜಯ್ ದಿನವು ಭಾರತ ಮಾತೆಯ ವೀರ ಪುತ್ರರ ಧೈರ್ಯವನ್ನು ನೆನಪಿಸಿಕೊಳ್ಳಬೇಕು. ಅವರು ದೇಶದ ಗೌರವ ಕಾಪಾಡಲು ತಮ್ಮ ಪ್ರಾಣವನ್ನೇ ಅರ್ಪಿಸಿದರು. ತಮ್ಮ ಪ್ರಾಣವನ್ನೇ ತ್ಯಾಗ ಮಾಡಲು ಸಿದ್ಧರಿದ್ದ ಆ ವೀರರ ತ್ಯಾಗವು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ. ಅವರ ದೇಶಭಕ್ತಿ ಎಲ್ಲರಿಗೂ ಮಾದರಿಯಾಗಿದೆ” ಎಂದು ಸ್ಮರಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಚಿತ್ರದುರ್ಗದ ಭೋವಿ ಗುರುಪೀಠದಲ್ಲಿ ಶ್ರೀಗಳ ಪಟ್ಟಾಭಿಷೇಕ ಮಹೋತ್ಸವ ಹಾಗೂ ಭೋವಿ ಜನೋತ್ಸವ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವ್ಯಕ್ತಿ, ವಸ್ತು ಹಾಗೂ ಮನೆಗಿಂತಲೂ ಮಿಗಿಲು ದೇಶ ಎನ್ನುವ ಅಚಲ ವಿಶ್ವಾಸಾರ್ಹತೆಯ ಬದ್ದತೆ ತೋರಿಸುವವರೇ ಯೋಧರು. ದೇಶ ರಕ್ಷಣೆ ಹಾಗೂ ದೇಶಕ್ಕಾಗಿ ಪ್ರಾಣಾರ್ಪಣೆ ಮಾಡುವ ಸ್ಪಷ್ಟ ನಿಲುವು ಹೊಂದಿಯೇ ಸೈನ್ಯಕ್ಕೆ ಸೇರ್ಪಡೆಗೊಳ್ಳುವ ಯೋಧರೇ ನಮ್ಮ ಪಾಲಿನ ದೇವರು” ಎಂದು ಹೇಳಿದರು.‌

1002390580
ಭೋವಿ ಗುರುಪೀಠದ ಕಾರ್ಗಿಲ್ ವಿಜಯೋತ್ಸದಲ್ಲಿ ಮಕ್ಕಳೊಂದಿಗೆ ಶ್ರೀಗಳು

“ಸೈನಿಕನ ಜೀವನವು ಸಾಹಸ ಮತ್ತು ಅಪಾಯಗಳಿಂದ ತುಂಬಿರುತ್ತದೆ. ಸೈನಿಕರು ಯಾವುದೇ ಪರಿಸ್ಥಿತಿಯಲ್ಲಿಯೂ ತಮ್ಮ ತಾಯ್ನಾಡನ್ನು ರಕ್ಷಿಸಲು ಪ್ರತಿಜ್ಞೆ ಮಾಡುತ್ತಾರೆ. ಅವರು ಎಂದಿಗೂ ಕರ್ತವ್ಯದಿಂದ ಹೊರಗುಳಿಯುವುದಿಲ್ಲ, ದೇಶಕ್ಕಾಗಿ ಅವರು ಎರಡನೇ ಆಲೋಚನೆಯಿಲ್ಲದೆ ತಮ್ಮ ಪ್ರಾಣವನ್ನೇ ಅರ್ಪಿಸಬಹುದು. ಇದು ಅವರ ಧೈರ್ಯ ಮತ್ತು ಇಚ್ಛಾಶಕ್ತಿಯ ಬಗ್ಗೆ ಬಹಳಷ್ಟು ಹೇಳುತ್ತದೆ. ನಾವು ನಮ್ಮ ಕುಟುಂಬಗಳೊಂದಿಗೆ ಪ್ರತಿ ಸಂದರ್ಭವನ್ನು ಶಾಂತಿಯುತವಾಗಿ ಆಚರಿಸಲು ಅವರು ವರ್ಷಪೂರ್ತಿ ತಮ್ಮ ಕುಟುಂಬಗಳಿಂದ ದೂರವಿರುತ್ತಾರೆ. ಯಾವುದೇ ತುರ್ತು ಪರಿಸ್ಥಿತಿ ಅಥವಾ ವಿಪತ್ತಿನಿಂದ ಬದುಕುಳಿಯುವ ತ್ರಾಣ ಮತ್ತು ದೃಢಸಂಕಲ್ಪವನ್ನು ಅವರು ಹೊಂದಿದ್ದಾರೆ” ಎಂದು ಶ್ಲಾಘಿಸಿದರು.‌

ಈ ಸುದ್ದಿ ಓದಿದ್ದೀರಾ ? ದಾವಣಗೆರೆ ಚಿತ್ರದುರ್ಗ | ಮಡಿವಾಳ ಮಾಚಿದೇವ ಸೇನಾ ಪಡೆಯಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಶಾಲಾ ವಿದ್ಯಾರ್ಥಿಗಳು ಸೈನಿಕರ ಸಮವಸ್ತ್ರ ಧರಿಸಿ ಆಶುಭಾಷಣ, ಕಿರು ನಾಟಕ, ದೇಶ ಭಕ್ತಿ ಪ್ರಸ್ತುತ ಪಡಿಸಿದರು. ಈ ಸಂದರ್ಭದಲ್ಲಿ ಶಿಕ್ಷಕರು ಪೋಷಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...