ಉತ್ತರ ಪ್ರದೇಶ | ಸಿಎಂಒ ಕಚೇರಿ ಆವರಣದಲ್ಲಿ ಅನಿಲ ಸೋರಿಕೆ; 10 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

Date:

ಉತ್ತರ ಪ್ರದೇಶ ಮಥುರಾದ ಮುಖ್ಯ ವೈದ್ಯಕೀಯ ಅಧಿಕಾರಿ ಕಚೇರಿಯ ಆವರಣದಲ್ಲಿ ಇಂದು ಬೆಳಗ್ಗೆ ಕ್ಲೋರಿನ್ ಅನಿಲ ಸೋರಿಕೆಯುಂಟಾದ ಕಾರಣ ಕನಿಷ್ಠ 10 ನರ್ಸಿಂಗ್‌ ವಿದ್ಯಾರ್ಥಿಗಳನ್ನು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಸಿಎಂಒ ಕಚೇರಿಯ ಎಎನ್ಎಂ ತರಬೇತಿ ಕೇಂದ್ರದ ಪಕ್ಕದಲ್ಲಿರುವ ಪಂಪ್ ಹೌಸ್‌ನಿಂದ ಇಂದು ಬೆಳಗ್ಗೆ 11 ಗಂಟೆಗೆ ಕ್ಲೋರಿನ್ ಗ್ಯಾಸ್ ಸೋರಿಕೆಯಾಗಿದೆ. ಕೆಲವೇ ಸೆಕೆಂಡುಗಳಲ್ಲಿ ಅನಿಲ ಕಟ್ಟಡದಾದ್ಯಂತ ಹರಡಿತು. ಅನಿಲ ಸೋರಿಕೆ ನೋಡಿದ ತಕ್ಷಣ ಕಚೇರಿಯಲ್ಲಿ ಗೊಂದಲ ಉಂಟಾಯಿತು. ಸ್ಥಳದಲ್ಲಿದ್ದ ಕಣ್ಣುಗಳು ಉರಿಯುಂಟಾಗಿ ನೌಕರರು ಉಸಿರುಗಟ್ಟಿಸಲು ಪ್ರಾರಂಭಿಸಿದರು. ನೌಕರರು ಮತ್ತು ಅಧಿಕಾರಿಗಳು ಕೊಠಡಿ ಬಿಟ್ಟು ಹೊರಗೆ ಓಡಿದರು.

ಎಎನ್‌ಎಂ ತರಬೇತಿ ಕೇಂದ್ರದಲ್ಲಿ ವ್ಯಾಸಂಗ ಮಾಡುತ್ತಿದ್ದ ಕೆಲ ವಿದ್ಯಾರ್ಥಿನಿಯರು ಮೈದಾನಕ್ಕೆ ತೆರಳಿದ್ದ ಕಾರಣ ಅನಿಲ ಸೋರಿಕೆಯಿಂದ ಅಸ್ವಸ್ಥಗೊಂಡರು. ಅಗ್ನಿಶಾಮಕ ದಳ ಹಾಗೂ ಆಂಬುಲೆನ್ಸ್ ಸ್ಥಳಕ್ಕೆ ಆಗಮಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಭಾರತದಲ್ಲಿ ಭಯವಿದೆ ಎಂದು ಅಮೆರಿಕಕ್ಕೆ ಅಕ್ರಮವಾಗಿ ಪ್ರವೇಶಿಸುತ್ತಿದ್ದ 97 ಸಾವಿರ ಭಾರತೀಯರ ಬಂಧನ

ಸಿಎಂಒ ಕಚೇರಿ ಆವರಣದಲ್ಲಿರುವ ಎಎನ್‌ಎಂ ತರಬೇತಿ ಕೇಂದ್ರದ ಪಕ್ಕದಲ್ಲಿರುವ ಪಂಪ್ ಹೌಸ್‌ನಲ್ಲಿ ಎರಡು ಕ್ಲೋರಿನ್ ಸಿಲಿಂಡರ್ ಗಳನ್ನು ತುಂಬಿ ಇಡಲಾಗಿತ್ತು. ಎರಡೂ ಸಿಲಿಂಡರ್ ಗಳಲ್ಲಿ 100-100 ಕೆಜಿ ಕ್ಲೋರಿನ್ ಗ್ಯಾಸ್ ತುಂಬಿಸಲಾಗಿತ್ತು. ಸಿಲಿಂಡರ್‌ನಲ್ಲಿ ತುಕ್ಕು ಹಿಡಿದಿದ್ದರಿಂದ ಕ್ಲೋರಿನ್ ಅನಿಲ ಸೋರಿಕೆಯಾಗಿದೆ. ಅತಿಯಾದ ಗ್ಯಾಸ್ ಸೋರಿಕೆಯಿಂದಾಗಿ ಸಿಎಂಒ ಕಚೇರಿ ಸುತ್ತಮುತ್ತ ಗ್ಯಾಸ್ ವ್ಯಾಪಿಸಿದೆ ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ದುರ್ಗಾಪ್ರಸಾದ್ ತಿಳಿಸಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿ ಸಿಲಿಂಡರ್‌ನಿಂದ ಕ್ಲೋರಿನ್ ಅನಿಲ ಸೋರಿಕೆಯನ್ನು ತಡೆಯಲು ಪ್ರಯತ್ನಗಳನ್ನು ಪ್ರಾರಂಭಿಸಿದ್ದಾರೆ. ಸದ್ಯ ಪರಿಸ್ಥಿತಿ ಹತೋಟಿಗೆ ಬಂದಿದೆ ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...