370ನೇ ವಿಧಿ ರದ್ದತಿಯನ್ನು ಕರಾಳ ದಿನ ಎಂದು ಕರೆದದ್ದು ಅಪರಾಧವಲ್ಲ: ಸುಪ್ರೀಂ ಕೋರ್ಟ್

Date:

ಭಿನ್ನಾಭಿಪ್ರಾಯವನ್ನು ಕಾನೂನುಬದ್ಧವಾಗಿ ಅಭಿವ್ಯಕ್ತಪಡಿಸುವುದು ಜೀವನದ ಹಕ್ಕಿನ ಒಂದು ಭಾಗ ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂ ಕೋರ್ಟ್, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿ ರದ್ದತಿಯನ್ನು ಕರಾಳ ದಿನವೆಂದು ಕರೆದದ್ದು ಅಪರಾಧವಲ್ಲ ಎಂದು ಹೇಳಿದೆ.

ಅಂತೆಯೇ ಪಾಕಿಸ್ತಾನಕ್ಕೆ ಸ್ವಾತಂತ್ರ್ಯ ದಿನಾಚರಣೆಯ ಶುಭ ಹಾರೈಸುವುದು ಕೂಡಾ ಭಾರತೀಯ ದಂಡಸಂಹಿತೆ ಸೆಕ್ಷನ್ 153ಎ ಅಡಿಯಲ್ಲಿ ಉಭಯ ದೇಶಗಳ ಗುಂಪುಗಳ ನಡುವೆ ಅಥವಾ ಧಾರ್ಮಿಕ ನೆಲೆಯಲ್ಲಿ ದ್ವೇಷಕ್ಕೆ ಕಾರಣವಾಗುವ ಅಪರಾಧವಲ್ಲ ಎಂದು ಸ್ಪಷ್ಟಪಡಿಸಿದೆ.

370ನೇ ವಿಧಿ ರದ್ದತಿಯನ್ನು ಮತ್ತು ಜಮ್ಮು ಮತ್ತು ಕಾಶ್ಮೀರದ ಸ್ಥಿತಿಯನ್ನು ಬದಲಾಯಿಸಿದ ನಿರ್ಧಾರವನ್ನು ಟೀಕಿಸುವ ಹಕ್ಕು ದೇಶದ ಪ್ರತಿಯೊಬ್ಬ ಪ್ರಜೆಗೂ ಇದೆ. ಈ ರದ್ದತಿ ದಿನವನ್ನು ಕರಾಳದಿನ ಎಂದು ಕರೆದಿರುವುದು ಪ್ರತಿಭಟನೆ ಮತ್ತು ಸಿಟ್ಟನ್ನು ಅಭಿವ್ಯಕ್ತಪಡಿಸುವ ಕ್ರಮ. ಸರ್ಕಾರದ ಪ್ರತಿಯೊಂದು ಕ್ರಮದ ಬಗ್ಗೆ ಟೀಕಿಸುವುದು ಅಥವಾ ಪ್ರತಿಭಟಿಸುವುದು ಐಪಿಸಿ ಸೆಕ್ಷನ್ 153ಎ ಅಡಿಯಲ್ಲಿ ಅಪರಾಧವಾದರೆ, ಸಂವಿಧಾನದ ಅಗತ್ಯ ವಿಶೇಷತೆ ಎನಿಸಿರುವ ಪ್ರಜಾಪ್ರಭುತ್ವ ಉಳಿಯುವುದಿಲ್ಲ ಎಂದು ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಉಜ್ಜಲ್ ಭೂಯಾನ್ ಅವರನ್ನೊಳಗೊಂಡ ನ್ಯಾಯಪೀಠ ಹೇಳಿದೆ. ಜತೆಗೆ 370ನೇ ವಿಧಿ ರದ್ದತಿಯನ್ನು ಟೀಕಿಸಿದ್ದ ಬಾರಮುಲ್ಲಾ ನಿವಾಸಿ ಜಾವೇದ್ ಅಹ್ಮದ್ ಹಜಾಮ ವಿರುದ್ಧದ ಎಫ್‍ಐಆರ್ ರದ್ದುಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೋರ್ಡ್ ಪರೀಕ್ಷೆ ರದ್ದು ಸ್ವಾಗತಾರ್ಹ; ಮೇಲ್ಮನವಿಗೆ ಹೋಗದಿರಲಿ ಸರ್ಕಾರ

“ಕಾನೂನುಬದ್ಧವಾಗಿ ಭಿನ್ನಾಭಿಪ್ರಾಯವನ್ನು ಅಭಿವ್ಯಕ್ತಪಡಿಸುವುದನ್ನು ಸಂವಿಧಾನದ 21ನೇ ವಿಧಿಯಡಿ ನೀಡಿರುವ ಘನತೆಯಿಂದ ಮತ್ತು ಅರ್ಥಪೂರ್ಣವಾಗಿ ಬಾಳ್ವೆ ನಡೆಸುವ ಹಕ್ಕಿನ ಭಾಗ ಎಂದು ಪರಿಗಣಿಸಬೇಕಾಗುತ್ತದೆ ಎಂದು ಪೀಠ ಸ್ಪಷ್ಟಪಡಿಸಿದೆ.

ನ್ಯಾಯಮೂರ್ತಿಗಳನ್ನು ಟೀಕಿಸುವ ಕ್ರಮದ ವಿರುದ್ಧ ಈ ಹಿಂದೆ ನ್ಯಾಯಾಂಗ ನಿಂದನೆ ವಿಚಾರಣೆ ನಡೆಸುತ್ತಿದ್ದ ಸುಪ್ರೀಂಕೋರ್ಟ್, 370ನೇ ವಿಧಿ ರದ್ದತಿಯನ್ನು ಟೀಕಿಸಿದ ಹಜಾಮ್ ಅವರ ವಿಚಾರದಲ್ಲಿ ವಿಸ್ತೃತವಾದ ದೃಷ್ಟಿಕೋನವನ್ನು ಹೊಂದಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಸರ್ಕಾರದ ಪ್ರತಿಯೊಂದು ಕ್ರಮವನ್ನು ಟೀಕಿಸುವ ನಾಗರಿಕರ ಹಕ್ಕಿನ ಬಗ್ಗೆ ಪೊಲೀಸರಿಗೆ ತಿಳಿಹೇಳತಿಳಿಹೇಳುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...