ಜನನ ಪ್ರಮಾಣಪತ್ರದಲ್ಲಿ ಧರ್ಮ ಅಥವಾ ಜಾತಿ ನಮೂದಿಸದಿರುವ ಹಕ್ಕು ನಾಗರಿಕರಿಗಿದೆ: ತೆಲಂಗಾಣ ಹೈಕೋರ್ಟ್

Date:

ತೆಲಂಗಾಣ ಹೈಕೋರ್ಟ್ ಇತ್ತೀಚೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಜನನ ಪ್ರಮಾಣ ಪತ್ರಕ್ಕಾಗಿ ಆನ್‌ಲೈನ್ ಅರ್ಜಿ ನಮೂನೆಗಳಲ್ಲಿ ‘ಯಾವುದೇ ಧರ್ಮವಿಲ್ಲ’ ಮತ್ತು ‘ಯಾವುದೇ ಜಾತಿಯಿಲ್ಲ’ ಎಂಬ ಆಯ್ಕೆಗಳನ್ನು ಒದಗಿಸುವಂತೆ ನಿರ್ದೇಶಿಸಿದೆ.

ಪ್ರಕರಣವೊಂದರ ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿ ಲಲಿತಾ ಕನ್ನೆಗಂಟಿ ಅವರು, ಭಾರತೀಯ ಸಂವಿಧಾನದ 25ನೇ ಪರಿಚ್ಛೇದದಡಿಯಲ್ಲಿ ಯಾವುದೇ ಧರ್ಮವನ್ನು ಅನುಸರಿಸದಿರುವ ಅಥವಾ ಪ್ರತಿಪಾದಿಸದಿರುವ ಎಲ್ಲ ಹಕ್ಕು ನಾಗರಿಕರಿಗೆ ಇದೆ ಎಂದು ತಿಳಿಸಿದ್ದಾರೆ.

ಭಾರತದ ಸಂವಿಧಾನದ ನಾಗರಿಕರಿಗೆ ಖಾತರಿಪಡಿಸಿದ ಹಕ್ಕುಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸುವುದು ಪ್ರತಿವಾದಿಗಳ ಬದ್ಧ ಕರ್ತವ್ಯವಾಗಿದೆ. ಕಾಲಕ್ಕೆ ತಕ್ಕಂತೆ ನಾಗರಿಕರ ಬದಲಾಗುತ್ತಿರುವ ಅವಶ್ಯಕತೆಗಳಿಗೆ ಅನುಗುಣವಾಗಿ ಆಡಳಿತ ವ್ಯವಸ್ಥೆಯು ವಿಕಸನಗೊಳ್ಳಬೇಕು. ಸಾಂವಿಧಾನಿಕ ನ್ಯಾಯಾಲಯವು ನಾಗರಿಕರ ನ್ಯಾಯಸಮ್ಮತ ಅಗತ್ಯಗಳಿಗೆ ಮೂಕ ಪ್ರೇಕ್ಷಕರಾಗಿ ಉಳಿಯಲು ಸಾಧ್ಯವಿಲ್ಲ” ಎಂದು ನ್ಯಾಯಾಧೀಶರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೇಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ಜನನ ಪ್ರಮಾಣಪತ್ರದಲ್ಲಿ ಧರ್ಮ ಅಥವಾ ಜಾತಿಯನ್ನು ನಿರ್ದಿಷ್ಟಪಡಿಸದಿರಲು ಅರ್ಜಿದಾರರಿಗೆ ಎಲ್ಲ ಹಕ್ಕಿದೆ ಎಂದು ಈ ನ್ಯಾಯಾಲಯವು ಪರಿಗಣಿಸಿದೆ ಎಂದು ನ್ಯಾಯಾಧೀಶರು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಮುಂದಿನ ಚುನಾವಣೆ ಗೆಲ್ಲಲು ಬಿಜೆಪಿಯಿಂದ ರಾಮ ಮಂದಿರದ ಮೇಲೆ ದಾಳಿ: ಸತ್ಯಪಾಲ್ ಮಲಿಕ್ ಆರೋಪ

ಸಂವಿಧಾನದ 25ನೇ ವಿಧಿಯು ನಾಗರಿಕರಿಗೆ ಆತ್ಮಸಾಕ್ಷಿಯ ಸ್ವಾತಂತ್ರ್ಯವನ್ನು ನೀಡುತ್ತದೆ. ಅವರು ಯಾವುದೇ ಧರ್ಮವನ್ನು ನಂಬುವುದಿಲ್ಲ ಎಂದು ಹೇಳುವ ಹಕ್ಕನ್ನು ಒಳಗೊಂಡಿದೆ ಎಂದು ತೆಲಂಗಾಣ ಹೈಕೋರ್ಟ್ ವಿವರಿಸಿತು.

“ನಾಗರಿಕನು ತನ್ನ ಆತ್ಮಸಾಕ್ಷಿ ಮತ್ತು ನಂಬಿಕೆಗಳಿಗೆ ಅನುಗುಣವಾಗಿ ವರ್ತಿಸುವ ಹಕ್ಕನ್ನು ಹೊಂದಿದ್ದಾನೆ. ರಾಜ್ಯವು ನಾಗರಿಕನನ್ನು ಒಂದು ಧರ್ಮ ಅಥವಾ ಇನ್ನೊಂದು ಧರ್ಮಕ್ಕೆ ಸೇರಿದವನೆಂದು ಪ್ರತಿಪಾದಿಸಲು ಅಥವಾ ಘೋಷಿಸಲು ಒತ್ತಾಯಿಸಲು ಸಾಧ್ಯವಿಲ್ಲ. ಸರ್ಕಾರವು ಹಾಗೆ ಮಾಡಲು ಒತ್ತಾಯಿಸಿದರೆ, ಅದು ಭಾರತದ ಸಂವಿಧಾನವು ಖಾತರಿಪಡಿಸಿದ ವ್ಯಕ್ತಿಯ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆಯೇ ಹೊರತು ಬೇರೇನೂ ಅಲ್ಲ” ಎಂಬ ಸಂವಿಧಾನದ 25ನೇ ವಿಧಿಯ ನಾಗರಿಕರಿಗೆ ಆತ್ಮಸಾಕ್ಷಿಯ ಸ್ವಾತಂತ್ರ್ಯ ನೀಡುವ ಹಕ್ಕಿನ ಬಗ್ಗೆ ನ್ಯಾಯಾಧೀಶರು ವಿವರಿಸಿದರು.

2019 ರಲ್ಲಿ ಜನಿಸಿದ ಮಗುವಿನ ಪೋಷಕರು ಸಲ್ಲಿಸಿದ ರಿಟ್ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿತ್ತು. ಅರ್ಜಿದಾರರು ಜನನ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸುವಾಗ ‘ಯಾವುದೇ ಧರ್ಮವಿಲ್ಲ’ ಮತ್ತು ‘ಯಾವುದೇ ಜಾತಿ ಇಲ್ಲ’ ಎಂಬ ಆಯ್ಕೆಗಳನ್ನು ಒದಗಿಸುವಂತೆ ನಿರ್ದೇಶನಗಳನ್ನು ನೀಡಲು ಸರ್ಕಾರಕ್ಕೆ ಒತ್ತಾಯಿಸುವಂತೆ ಮನವಿ ಮಾಡಿದ್ದರು.

ಅರ್ಜಿದಾರರು ಭಾರತವು ಜಾತ್ಯತೀತ ರಾಷ್ಟ್ರವಾಗಿದ್ದು, ಅರ್ಜಿ ನಮೂನೆಗಳು ತಮ್ಮ ಇಚ್ಛೆಗೆ ವಿರುದ್ಧವಾಗಿ ಧರ್ಮವನ್ನು ಆಯ್ಕೆ ಮಾಡಲು ನಾಗರಿಕರನ್ನು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...