ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಆರೋಗ್ಯದಲ್ಲಿ ಏರುಪೇರು; ಪ್ರಮುಖ ವಿಚಾರಣೆಗಳು ಮುಂದೂಡಿಕೆ

Date:

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರು ಅನಾರೋಗ್ಯದಿಂದ ಬಳಲುತ್ತಿರುವ ಕಾರಣ ಶುಕ್ರವಾರ ನ್ಯಾಯಾಲಯದಲ್ಲಿ ನಿಗದಿಯಾಗಿದ್ದ ವಿಚಾರಣೆಗಳನ್ನು ಜುಲೈ 29ಕ್ಕೆ ಮುಂದೂಡಲಾಗಿದೆ ಎಂದು ಸುಪ್ರೀಂ ಕೋರ್ಟ್‌ ಅಧಿಕೃತ ಪ್ರಕಟಣೆ ತಿಳಿಸಿದೆ.

“ಗೌರವಾನ್ವಿತ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರು 28.07.2023 ರಂದು (ಶುಕ್ರವಾರ) ನ್ಯಾಯಾಲಯದ ಕಲಾಪ ನಡೆಸುವುದಿಲ್ಲ. ಆದ ಕಾರಣ, ನ್ಯಾಯಾಲಯದ ಮೊದಲ ಕೊಠಡಿಯಲ್ಲಿ ನಡೆಯಬೇಕಿದ್ದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠದ ವಿಚಾರಣೆಗಳನ್ನು ರದ್ದುಗೊಳಿಸಲಾಗಿದೆ. ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರು ಏಕಸದಸ್ಯ ಪೀಠದ ಜೊತೆಗೆ ಕಚೇರಿಯ ವಿಷಯಗಳನ್ನು ನಿರ್ವಹಿಸುತ್ತಾರೆ. ಅಂದರೆ 28.07.2023ರಂದು ನ್ಯಾಯಾಲಯದ 10ನೇ ಕೊಠಡಿಯಲ್ಲಿ ಅರ್ಜಿಗಳನ್ನು ವಿಚಾರಣೆ ನಡೆಸಲಿದ್ದಾರೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಕಳೆದ 5 ವರ್ಷಗಳಲ್ಲಿ ಐಐಟಿ, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಣ ಮೊಟಕುಗೊಳಿಸಿದ 25 ಸಾವಿರ ಎಸ್‌ಸಿ,ಎಸ್‌ಟಿ ವಿದ್ಯಾರ್ಥಿಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಣಿಪುರ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದ ಮನವಿಗಳ ಬ್ಯಾಚ್ ಹಾಗೂ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ವೈರಲ್ ವಿಡಿಯೋದ ಪ್ರಕರಣ ನಾಳೆಗೆ ಮುಂದೂಡಲಾಗಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಮತ್ತು ಅವರ ಪತ್ನಿ ರುಜಿರಾ ಅವರ ಮನವಿಯ ವಿಚಾರಣೆ, ಕುಖ್ಯಾತ ನಿಥಾರಿ ಹತ್ಯೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಮೊನೀಂದರ್ ಸಿಂಗ್ ಪಂಧೇರ್ ಪ್ರಕರಣ ಸೇರಿದಂತೆ ಪ್ರಮುಖ ಪ್ರಕರಣಗಳನ್ನು ಮುಂದೂಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...