ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಮತ್ತು ಶಿಕ್ಷಕರ ನಡುವೆ ವಾಗ್ವಾದ ನಡೆದಿದ್ದು, 10ನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕರ ಮೇಲೆ ಹಲ್ಲೆ ನಡೆಸಿರುವ ಘಟನೆ ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯಲ್ಲಿ ನಡೆದಿದೆ. ಘಟನೆಯ ವಿಡಿಯೋ ವೈರಲ್ ಆಗಿದ್ದು, ವಿದ್ಯಾರ್ಥಿಯ ಕೃತ್ಯದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ಜಿಲ್ಲೆಯ ವೀರವಳ್ಳಿ ಜಿಲ್ಲಾ ಪರಿಷತ್ ಪ್ರೌಢಶಾಲೆಯಲ್ಲಿ ಘಟನೆ ನಡೆದಿದೆ. ವರದಿಗಳ ಪ್ರಕಾರ, ಶೈಕ್ಷಣಿಕ ವಿಷಯಕ್ಕೆ ಸಂಬಧಿಸಿದಂತೆ ವಿದ್ಯಾರ್ಥಿಯ ನಿರ್ಲಕ್ಷ್ಯತನವನ್ನು ಶಿಕ್ಷಕ ಖಂಡಿಸಿದ್ದಾರೆ. ಆತನಿಗೆ ವ್ಯಾಸಂಗದ ಕುರಿತು ಎಚ್ಚರಿಕೆ ನೀಡಿದ್ದಾರೆ. ಇದೇ ವಿಚಾರವು ವಿದ್ಯಾರ್ಥಿ ಮತ್ತು ಶಿಕ್ಷಕನ ನಡುವೆ ವಾಗ್ವಾದಕ್ಕೆ ತಿರುಗಿದೆ. ವಿದ್ಯಾರ್ಥಿ ಶಿಕ್ಷಕನಿಗೆ ಬಲವಾಗಿ ಗುದ್ದಿದ್ದಾನೆ ಎಂದು ಹೇಳಲಾಗಿದೆ. ಘಟನೆಯು ಶಾಲೆಯಲ್ಲಿದ್ದ ಇತರ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯಲ್ಲಿ ಭೀತಿ ಉಂಟುಮಾಡಿದೆ.
ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಆದಾಗ್ಯೂ, ‘ಶಿಕ್ಷಕ ನನ್ನ ತಾಯಿ ವಿರುದ್ಧ ನಿಂದನೀಯ ಭಾಷೆ ಬಳಸಿಕ್ಕಾಗಿ, ನಾನು ಆ ರೀತಿ ಪ್ರತಿಕ್ರಿಯಿಸಬೇಕಾಯಿತು’ ಎಂದು ವಿದ್ಯಾರ್ಥಿ ಹೇಳಿಕೊಂಡಿರುವುದಾಗಿ ವರದಿಯಾಗಿದೆ.
वीरावल्ली हाई स्कूल का एक छात्र खुलेआम आगे बढ़कर अपने शिक्षक का सम्मान करते हुए देखा गया।
— Dinesh Kumar (@DineshRedBull) March 6, 2026
आज के समय में जब बच्चों में संस्कार कम होते जा रहे हैं, ऐसे उदाहरण सच में सराहनीय हैं। ऐसे बच्चों को प्रोत्साहन मिलना चाहिए ताकि शिक्षा के साथ-साथ अच्छे संस्कार भी समाज में मजबूत हों।
📍… pic.twitter.com/W2xZGLNyxo
ಘಟನೆಯ ನಂತರ ಶಾಲಾ ಅಧಿಕಾರಿಗಳು ಶಿಕ್ಷಣ ಇಲಾಖೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸ್ ಅಧಿಕಾರಿಗಳು ವಿದ್ಯಾರ್ಥಿಯನ್ನು ವಿಚಾರಣೆ ಮತ್ತು ಸಮಾಲೋಚನೆಗಾಗಿ ಕರೆದೊಯ್ದಿದ್ದಾರೆ. ವಿದ್ಯಾರ್ಥಿಯು ಅಪ್ರಾಪ್ತ ವಯಸ್ಕನಾಗಿರುವುದರಿಂದ ಮತ್ತು ಮುಂಬರುವ ಪಬ್ಲಿಕ್ ಪರೀಕ್ಷೆಗಳಿಗೆ ಹಾಜರಾಗಲು ತಯಾರಿ ನಡೆಸುತ್ತಿರುವುದರಿಂದ, ಈ ವಿಷಯವನ್ನು ಎಚ್ಚರಿಕೆಯಿಂದ ನಿರ್ವಹಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಏತನ್ಮಧ್ಯೆ, ಘರ್ಷಣೆಗೆ ಕಾರಣವಾದ ಸಂದರ್ಭಗಳನ್ನು ಅರ್ಥಮಾಡಿಕೊಳ್ಳಲು ಶಿಕ್ಷಣ ಇಲಾಖೆಯು ತನಿಖೆಗೆ ಆದೇಶಿಸಿದೆ. ಸತ್ಯಗಳನ್ನು ಪರಿಶೀಲಿಸುವುದಾಗಿ ಮತ್ತು ತನಿಖೆಯ ಆಧಾರದ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.




