ಅಸ್ಸಾಂ | ಪ್ರಶ್ನೆ ಪತ್ರಿಕೆ ಸೋರಿಕೆ; 11ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು

Date:

ಅಸ್ಸಾಂನಲ್ಲಿ ಮಾರ್ಚ್ 24ರಿಂದ ಮಾರ್ಚ್ 29ರವರೆಗೆ ನಡೆಯಲಿದ್ದ 11ನೇ ತರಗತಿ (ಪ್ರಥಮ ಪಿಯುಸಿ) ಪರೀಕ್ಷೆಯು ರದ್ದಾಗಿದೆ. ಹಲವು ವಿಷಯಗಳ ಪ್ರಶ್ನೆ ಪತ್ರಿಕೆಯು ಸೋರಿಕೆಯಾದ ಕಾರಣದಿಂದಾಗಿ ಎಲ್ಲಾ 36 ವಿಷಯಗಳ ಪರೀಕ್ಷೆಗಳು ರದ್ದಾಗಿದೆ ಎಂದು ಶಿಕ್ಷಣ ಸಚಿವ ರನೋಜ್ ಪೆಗು ತಿಳಿಸಿದ್ದಾರೆ.

ಸದ್ಯ ದೇಶದಲ್ಲಿ ಪ್ರಶ್ನಾ ಪತ್ರಿಕೆ ಸೋರಿಕೆಯ ಹಲವು ಪ್ರಕರಣಗಳು ಬಯಲಿಗೆ ಬಂದಿದೆ. ನೀಟ್‌–ಯುಜಿ ಪರೀಕ್ಷೆಯಲ್ಲೂ ಕೂಡಾ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಕೇಳಿಬಂದಿದ್ದು, ಪರೀಕ್ಷೆ ಬರೆದ ವಿದ್ಯಾರ್ಥಿಗಳು ಇಕ್ಕಟ್ಟಿನಲ್ಲಿ ಸಿಲುಕುವಂತಾಗಿದೆ. ಇತ್ತೀಚೆಗೆ ಅಸ್ಸಾಂನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಅನುಮಾನದಲ್ಲಿ 9ನೇ ತರಗತಿ ಪರೀಕ್ಷೆ ರದ್ದು ಮಾಡಲಾಗಿತ್ತು. ಹಲವು ವರ್ಷಗಳಿಂದ ಅಸ್ಸಾಂ ಮಾತ್ರವಲ್ಲ ದೇಶದಾದ್ಯಂತ ಈ ಪ್ರಶ್ನೆ ಪತ್ರಿಕೆ ಸೋರಿಕೆಯು ದೊಡ್ಡ ಸಮಸ್ಯೆಯಾಗಿ ಉಳಿದಿದೆ.

ಇದನ್ನು ಓದಿದ್ದೀರಾ? ರಾಜಸ್ಥಾನ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪಿಯ ‘ಅಕ್ರಮ’ ಮನೆ ನೆಲಸಮ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾರ್ಚ್‌ 21ರಂದು ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣ ಅಸ್ಸಾಂ ರಾಜ್ಯ ಶಾಲಾ ಶಿಕ್ಷಣ ಮಂಡಳಿ (ಎಎಸ್‌ಎಸ್‌ಇಬಿ) ಪರೀಕ್ಷೆಯನ್ನು ರದ್ದುಪಡಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತ್ತು. 11ನೇ ತರಗತಿ ಪರೀಕ್ಷೆಯು ಮಾರ್ಚ್ 6ರಂದು ಆರಂಭವಾಗಿತ್ತು ಮಾರ್ಚ್ 29ರವರೆಗೆ ನಡೆಯಲಿತ್ತು. ಇದೀಗ ಪ್ರಶ್ನೆ ಪತ್ರಿಕೆ ಸೋರಿಕೆ ಕಾರಣ ಉಳಿದ ಎಲ್ಲಾ ಪರೀಕ್ಷೆಗಳನ್ನು ರದ್ದು ಮಾಡಲಾಗುವುದು ಎಂದು ಸಚಿವ ಪೆಗು ಮಾಹಿತಿ ನೀಡಿದ್ದಾರೆ.

ಮೂರು ಸರ್ಕಾರಿ ಸಂಸ್ಥೆಗಳು ಸೇರಿದಂತೆ 18 ಸಂಸ್ಥೆಗಳು ಪರೀಕ್ಷೆ ನಡೆಯುವುದಕ್ಕೂ ಒಂದು ದಿನ ಮುನ್ನ ಪ್ರಶ್ನೆ ಪತ್ರಿಕೆಯನ್ನು ಹೊರತೆಗೆದಾಗ ಪೇಪರ್ ಸೋರಿಕೆಯಾಗಿದೆ ಎನ್ನಲಾಗಿದೆ. ನಿಗಡಿಪಡಿಸಿದ ಸಮಯಕ್ಕಿಂತ ಮೊದಲೇ ಸೀಲ್ ಅನ್ನು ತೆಗೆಯಲಾಗಿದೆ ಎಂದು ಸಚಿವರು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...