ದೆಹಲಿ | ಬಾಲಕನಿಗೆ ಹಲ್ಲೆ ನಡೆಸಿದ ಬಳಿಕ ಗುಪ್ತಾಂಗಕ್ಕೆ ಮರದ ತುಂಡು ತುರುಕಿದ ಸಹಪಾಠಿ!

Date:

ದೇಶದ ರಾಜಧಾನಿ ದೆಹಲಿಯಲ್ಲೊಂದು ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. 8ನೇ ತರಗತಿಯ ವಿದ್ಯಾರ್ಥಿಗೆ ಅವನ ಸಹಪಾಠಿಗಳು ಹಲ್ಲೆ ನಡೆಸಿದ ಬಳಿಕ ಆತನ ಗುಪ್ತಾಂಗಕ್ಕೆ ಮರದ ಕೋಲು ತುರುಕಿದ ಘಟನೆ ವರದಿಯಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ಬಾಲಾಪರಾಧಿಯನ್ನು ಬಂಧಿಸಿದ್ದಾರೆ.

ಎಫ್‌ಐಆರ್ ಪ್ರಕಾರ, 14 ವರ್ಷದ ವಿದ್ಯಾರ್ಥಿಯು ತನ್ನ ಶಾಲಾ ಸಹಪಾಠಿಗಳೊಂದಿಗೆ ಮಾ.13ರಂದು ಜಗಳವಾಡಿದ್ದನು. ಆ ಬಳಿಕ ನಾಲ್ವರು ಸಹಪಾಠಿಗಳು ಸೇರಿ ಮಾರ್ಚ್ 18ರಂದು 8ನೇ ತರಗತಿ ಬಾಲಕನಿಗೆ ಅಮಾನುಷವಾಗಿ ಥಳಿಸಿದ್ದಾರೆ. ಆ ಬಳಿಕ ಗುಂಪಿನಲ್ಲಿದ್ದ ಬಾಲಕನೋರ್ವ ಮರದ ತುಂಡೊದನ್ನು ಗುಪ್ತಾಂಗಕ್ಕೆ ತುರುಕಿರುವುದಾಗಿ ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಲಾ ಸಿಬ್ಬಂದಿ ಘಟನೆಯ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಂತ್ರಸ್ತ ವಿದ್ಯಾರ್ಥಿಯ ಕುಟುಂಬದವರು ಆರೋಪಿಸಿದ್ದಾರೆ. ಅಲ್ಲದೇ, ಘಟನೆಯ ಬಗ್ಗೆ ಶಾಲಾ ಪ್ರಾಂಶುಪಾಲರೊಂದಿಗೆ ಮಾತುಕತೆ ನಡೆಸಲು ಅವಕಾಶ ಕೇಳಿದರೂ ನಿರಾಕರಿಸಲಾಗಿದೆ ಎಂದು ದೂರಿದ್ದಾರೆ.

“ಘಟನೆಯನ್ನು ಯಾರಿಗೂ ಹೇಳದಂತೆ ಶಾಲಾ ಸಹಪಾಠಿಗಳು ಬೆದರಿಕೆ ಹಾಕಿದ್ದಾರೆ. ಒಂದು ವೇಳೆ ತಿಳಿಸಿದಲ್ಲಿ ಅದೇ ಶಾಲೆಯಲ್ಲಿ ಓದುತ್ತಿರುವ ತನ್ನ ಸಹೋದರಿ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ನನ್ನನ್ನು ಬೆದರಿಸಿದ್ದರು”  ಎಂದು 8ನೇ ತರಗತಿ ವಿದ್ಯಾರ್ಥಿ ಮಾಹಿತಿ ನೀಡಿದ್ದಾನೆ.

ಪೊಲೀಸರಿಗೆ ಪೋಷಕರು ನೀಡಿದ ದೂರಿನ ಅನ್ವಯ ಪೋಕ್ಸೋ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮಾರ್ಚ್ 13 ರಂದು ತನ್ನ ಸಹಪಾಠಿಯೊಂದಿಗೆ ಜಗಳವಾಡಿದ್ದನು. ಮಾರ್ಚ್ 18ರಂದು ಸಹಪಾಠಿಗಳು ಹಲ್ಲೆ ನಡೆಸಿದ್ದಾರೆ. ಬೆದರಿಕೆ ಹಾಕಿದ್ದರಿಂದ, ಭಯಗೊಂಡಿದ್ದ ಸಂತ್ರಸ್ತ ವಿದ್ಯಾರ್ಥಿ ಮೊದಲು ಘಟನೆಯ ಬಗ್ಗೆ ಯಾರಿಗೂ ಹೇಳಿರಲಿಲಿಲ್ಲ. ಮಾರ್ಚ್ 20ರಂದು ಅವರು ಹೊಟ್ಟೆ ನೋವು ಎಂದು ಹತ್ತಿರದ ವೈದ್ಯರ ಬಳಿಗೆ ಕರೆದೊಯ್ಯಲಾಗಿತ್ತು. ಆದರೆ, ಸಂತ್ರಸ್ತ ವಿದ್ಯಾರ್ಥಿಯ ಪರಿಸ್ಥಿತಿ ಸುಧಾರಿಸದ ಕಾರಣ ಮಾರ್ಚ್ 28ರಂದು ಆಸ್ಪತ್ರೆಗೆ ಕರೆದೊಯ್ದು ಆಪರೇಷನ್ ಮಾಡಬೇಕಾಯಿತು.

‘ಯಾವುದೋ ಅಹಿತಕರ ಘಟನೆಗೆ ಮಗು ಬಲಿಯಾಗಿರಬಹುದು’ ಎಂದು ಆಸ್ಪತ್ರೆಯ ವೈದ್ಯರು ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಏಪ್ರಿಲ್ 2 ರಂದು ಹುಡುಗನಿಗೆ ಪ್ರಜ್ಞೆ ಬಂದಾಗ, ಪೋಷಕರ ವಿಚಾರಿಸಿದಾಗ ಎಲ್ಲ ಘಟನೆಯನ್ನು ವಿವರಿಸಿದ್ದಾನೆ. ವಿಚಾರ ತಿಳಿಯುತ್ತಿದ್ದಂತೆಯೇ ಪೊಲೀಸ್ ದೂರು ದಾಖಲಿಸಲಾಗಿದೆ.

ಇದನ್ನು ಓದಿದ್ದೀರಾ? ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ: ಬಿಜೆಪಿ ಶಾಸಕ ಯತ್ನಾಳ್ ವಿವಾದಾತ್ಮಕ ಹೇಳಿಕೆ

ಬಲಿಪಶುವಾಗಿರುವ ವಿದ್ಯಾರ್ಥಿಯ ಗುದದಲ್ಲಿ ಮರದ ಕೋಲನ್ನು ತುರುಕಿದ್ದರ ಪರಿಣಾಮ ತೀವ್ರವಾದ ಗಾಯವಾಗಿದೆ. ಆದ್ದರಿಂದ ಶಸ್ತ್ರಚಿಕಿತ್ಸೆ ನಡೆಸಿರುವುದಾಗಿ ವೈದ್ಯರು ತನ್ನ ವರದಿಯಲ್ಲಿ ತಿಳಿಸಿದ್ದರು.

ವೈದ್ಯರ ವರದಿಯ ಆಧಾರದ ಮೇಲೆ ಪೊಲೀಸರು, ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 323, 341, 34 ಮತ್ತು 377 ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯಿದೆಯ ಸೆಕ್ಷನ್ 6 ಅನ್ನು ಕೂಡ ಸೇರಿಸಿದ್ದಾರೆ.

ಸಂತ್ರಸ್ತ ವಿದ್ಯಾರ್ಥಿಯ ಗುದಕ್ಕೆ ಮರದ ತುಂಡು ತುರುಕಿದ್ದ ಬಾಲಾಪರಾಧಿಯನ್ನು ಬಂಧಿಸಲಾಗಿದ್ದು, ಬಾಲ ನ್ಯಾಯ ಮಂಡಳಿ (ಜೆಜೆಬಿ) ಮುಂದೆ ಹಾಜರುಪಡಿಸಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...