8ನೇ ತರಗತಿ ಪುಸ್ತಕ: ನ್ಯಾಯಾಂಗ ಕುರಿತ ಅಧ್ಯಾಯ ವಿವಾದ; ಬಹಿರಂಗ ಕ್ಷಮೆಯಾಚಿಸಿದ ಎನ್‌ಸಿಇಆರ್‌ಟಿ

Date:

ನ್ಯಾಯಾಂಗದ ಕುರಿತಾದ ವಿವಾದಾತ್ಮಕ ಅಧ್ಯಾಯವನ್ನು ಹೊಂದಿದ್ದ 8ನೇ ತರಗತಿ ಸಮಾಜ ವಿಜ್ಞಾನ ಪಠ್ಯಪುಸ್ತಕದ ಮೇಲೆ ಸುಪ್ರೀಂ ಕೋರ್ಟ್ ಸಂಪೂರ್ಣ ನಿಷೇಧ ಹೇರಿತ್ತು. ಈ ನಿಷೇಧದ ಆದೇಶ ಬಂದ ಎರಡು ವಾರಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಇಂದು ಬೇಷರತ್ ಬಹಿರಂಗ ಕ್ಷಮೆಯಾಚಿಸಿದೆ. ಪುಸ್ತಕವನ್ನು ಹಿಂಪಡೆದಿರುವುದಾಗಿ ಘೋಷಿಸಿದೆ.

ಕ್ಷಮಾಪಣಾ ಪತ್ರ ಪ್ರಕಟಿಸಿರುವ ಎನ್‌ಸಿಇಆರ್‌ಟಿ; “ಇತ್ತೀಚೆಗೆ 8ನೇ ತರಗತಿಯ (ಭಾಗ-II) ‘ಎಕ್ಸ್‌ಪ್ಲೋರಿಂಗ್ ಸೊಸೈಟಿ: ಇಂಡಿಯಾ ಅಂಡ್ ಬಿಯಾಂಡ್’ ಎಂಬ ಸಮಾಜ ವಿಜ್ಞಾನ ಪಠ್ಯಪುಸ್ತಕವನ್ನು ಸಿದ್ದಪಡಿಸಲಾಗಿತ್ತು. ಇದರಲ್ಲಿ ‘ಸಮಾಜದಲ್ಲಿ ನ್ಯಾಯಾಂಗದ ಪಾತ್ರ’ ಎಂಬ ಶೀರ್ಷಿಕೆಯ 4ನೇ ಅಧ್ಯಾಯವಿತ್ತು. ಆ ಅಧ್ಯಾಯವನ್ನು ಸೇರಿಸಿದ್ದಕ್ಕಾಗಿ ಎನ್‌ಸಿಇಆರ್‌ಟಿಯ ನಿರ್ದೇಶಕರು ಮತ್ತು ಸದಸ್ಯರು ಬೇಷರತ್ ಕ್ಷಮೆಯಾಚಿಸುತ್ತಿದ್ದಾರೆ. ಇಡೀ ಪುಸ್ತಕವನ್ನು ಹಿಂಪಡೆಯಲಾಗಿದೆ ಮತ್ತು ಅದು ಸಾರ್ವಜನಿಕವಾಗಿ ಲಭ್ಯವಿರುವುದಿಲ್ಲ” ಎಂದು ಹೇಳಿದೆ.

ಪಠ್ಯಪುಸ್ತಕದ 4ನೇ ಅಧ್ಯಾಯದಲ್ಲಿ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ಎಂಬ ವಿಭಾಗವನ್ನು ಸೇರಿಸಲಾಗಿತ್ತು. ಈ ಕಾರಣದಿಂದಾಗಿ ಎನ್‌ಸಿಇಆರ್‌ಟಿ ಸುಪ್ರೀಂ ಕೋರ್ಟ್‌ನಿಂದ ತೀವ್ರ ಟೀಕೆಗೆ ಗುರಿಯಾಗಿತ್ತು. ಪಠ್ಯವನ್ನು ಖಂಡಿಸಿದ್ದ ಸಿಜೆಐ ಸೂರ್ಯ ಕಾಂತ್, “ನ್ಯಾಯಾಂಗದ ಸಮಗ್ರತೆಗೆ ಕಳಂಕ ತರಲು ಮತ್ತು ಸಂಸ್ಥೆಯನ್ನು ದೂಷಿಸಲು ಭೂಮಿಯ ಮೇಲಿನ ಯಾರನ್ನೂ ನಾನು ಬಿಡುವುದಿಲ್ಲ. ಯಾವುದೇ ಬೆಲೆ ತೆತ್ತಾದರೂ ನಾನು ಅದನ್ನು ಅನುಮತಿಸುವುದಿಲ್ಲ. ಅವರು ಎಷ್ಟೇ ದೊಡ್ಡವರಾಗಿದ್ದರೂ, ಕಾನೂನು ತನ್ನ ಹಾದಿಯಲ್ಲಿ ನಡೆಯಲಿದೆ. ಇದನ್ನು ಹೇಗೆ ನಿಭಾಯಿಸಬೇಕೆಂದು ನನಗೆ ತಿಳಿದಿದೆ” ಎಂದು ಕಠುವಾಗಿ ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಟಿಆರ್‌ಪಿ ವರದಿಗೆ ನಾಲ್ಕು ವಾರಗಳ ಕೊಕ್ಕೆ; ಮಾಧ್ಯಮಗಳಿಗೆ TRP ಗೀಳು ಯಾಕೆ?

“ಇಂತಹ ಬೆಳವಣಿಗೆಗಳನ್ನು ಪರಿಶೀಲಿಸದೆ ಬಿಟ್ಟರೆ ಅದು ನ್ಯಾಯಾಂಗದ ಮೇಲೆ ಜನರಿಗಿರುವ ವಿಶ್ವಾಸವನ್ನು ಕುಗ್ಗಿಸುತ್ತದೆ. ಇದಕ್ಕೆ ಜವಾಬ್ದಾರರು ಯಾರು ಎಂಬುದನ್ನು ಕಂಡುಹಿಡಿಯುವುದು ಸಂಸ್ಥೆಯ ಮುಖ್ಯಸ್ಥನಾಗಿ ನನ್ನ ಕರ್ತವ್ಯ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು” ಎಂದು ಸಿಜೆಐ ಹೇಳಿದ್ದರು. ಪುಸ್ತಕದ ಮೇಲೆ ಸುಪ್ರೀಂ ಕೋರ್ಟ್‌ ಸಂಪೂರ್ಣ ನಿಷೇಧ ಹೇರಿತ್ತು. ಎಲ್ಲ ಭೌತಿಕ ಪ್ರತಿಗಳನ್ನು ವಶಪಡಿಸಿಕೊಳ್ಳಲು ಮತ್ತು ಡಿಜಿಟಲ್ ಆವೃತ್ತಿಗಳನ್ನು ಅಳಿಸಿಹಾಕಲು ಆದೇಶಿಸಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...