800 ರೂ. ಶುಲ್ಕ ಬಾಕಿ ಕಾರಣ ಪರೀಕ್ಷೆ ಬರೆಯಲು ಅವಕಾಶ ನೀಡದ ಶಾಲಾಡಳಿತ, ಒಂಬತ್ತನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

Date:

800 ರೂಪಾಯಿ ಶುಲ್ಕ ಬಾಕಿಯಿದ್ದ ಕಾರಣ ಶಾಲಾಡಳಿತವು ಪರೀಕ್ಷೆ ಬರೆಯಲು ಅವಕಾಶ ನೀಡದ ಕಾರಣ ಮನನೊಂದು ಒಂಬತ್ತನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಪ್ರತಾಪ್‌ಘಡದಲ್ಲಿ ನಡೆದಿದೆ.

ಮೃತ ಬಾಲಕಿಯನ್ನು ಕಮಲ ಶರಣ್ ಯಾದವ್ ಇಂಟರ್ ಕಾಲೇಜು ವಿದ್ಯಾರ್ಥಿನಿ ರಿಯಾ ಪ್ರಜಾಪತಿ (17) ಎಂದು ಗುರುತಿಸಲಾಗಿದೆ. ಶಾಲಾಡಳಿತವು ಶಾಲಾ ಶುಲ್ಕ ಬಾಕಿಯಿರುವ ಕಾರಣಕ್ಕೆ ವಿದ್ಯಾರ್ಥಿನಿಗೆ ವಾರ್ಷಿಕ ಪರೀಕ್ಷೆ ಬರೆಯಲು ಅವಕಾಶ ನೀಡದಿರುವುದು ಮಾತ್ರವಲ್ಲದೇ ಆಕೆಯನ್ನು ಅವಮಾನಿಸಿದೆ ಎಂದು ಪೊಲೀಸರು ಶನಿವಾರ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಬಾಕಿ ಶುಲ್ಕ ಪಾವತಿಸಿಲ್ಲವೆಂದು ಮಗುವಿನ ಮೇಕೆ ಹಲ್ಲೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಮೃತ ವಿದ್ಯಾರ್ಥಿನಿಯ ತಾಯಿ ಪೂನಮ್ ದೇವಿ ದೂರು ನೀಡಿದ್ದಾರೆ. 800 ರೂಪಾಯಿ ಶುಲ್ಕ ಪಾವತಿಸಿಲ್ಲವೆಂದು ದಾಖಲಾತಿ ಪತ್ರವನ್ನು ನೀಡಿಲ್ಲ ಎಂದು ದೂರಿದ್ದಾರೆ. ಹಾಗೆಯೇ ಕಾಲೇಜು ಮ್ಯಾನೇಜರ್ ಸಂತೋಷ್ ಕುಮಾರ್ ಯಾದವ್, ಪ್ರಾಂಶುಪಾಲ ರಾಜ್‌ಕುಮಾರ್ ಯಾದವ್, ಸಿಬ್ಬಂದಿಗಳಾದ ದೀಪಕ್ ಸರೋಜ್, ಧನಿರಾಮ್ ಮತ್ತು ಶಿಕ್ಷಕರೋರ್ವರು ತನ್ನ ಮಗಳಿಗೆ ಶುಲ್ಕ ಬಾಕಿ ವಿಚಾರದಲ್ಲಿ ಅವಮಾನಿಸಿದ್ದಾರೆ ಎಂದು ದೂರಿನಲ್ಲಿ ತಾಯಿ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದುರ್ಗೇಶ್ ಜುಮಾರ್ ಸಿಂಗ್, “ವಿದ್ಯಾರ್ಥಿನಿಗೆ ವಾರ್ಷಿಕ ಪರೀಕ್ಷೆ ಬರೆಯಲು ಅವಕಾಶ ನೀಡಿಲ್ಲ. ಮನೆಗೆ ವಾಪಸ್ ಹೋಗುವಂತೆ ಆಕೆಗೆ ಹೇಳಲಾಗಿದೆ. ಈ ಅವಮಾನದಿಂದಾಗಿ ನೊಂದು ರಿಯಾ ಮನೆಗೆ ಹೋಗಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ” ಎಂದು ಮಾಹಿತಿ ನೀಡಿದ್ದಾರೆ.

ಸದ್ಯ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತ ದೇಹ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...