ಒಪ್ಪಿಗೆಯಿಲ್ಲದೆ ಆಸ್ಪತ್ರೆಯಲ್ಲಿ ಫೋಟೋ ತೆಗೆದಿದ್ದಾರೆ, ಬೆಂಬಲ ಮಾತ್ರ ನೀಡಿಲ್ಲ: ಪಿಟಿ ಉಷಾ ವಿರುದ್ಧ ವಿನೇಶ್ ಕಿಡಿ

Date:

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಆಸ್ಪತ್ರೆಯ ಬೆಡ್‌ನಲ್ಲಿ ಮಲಗಿದ್ದ ನನ್ನೊಂದಿಗೆ ಚಿತ್ರವನ್ನು ಕ್ಲಿಕ್ಕಿಸಿಕೊಂಡಿದ್ದಾರೆ. ಬೇರೆ ಯಾವುದೇ ಸಹಾಯವನ್ನು ಮಾಡಿಲ್ಲ. ವಿಷಯವನ್ನು ರಾಜಕೀಯಗೊಳಿಸಿದ್ದಾರೆ ಎಂದು ಮಹಿಳಾ ಕುಸ್ತಿಪಟು, ಕಾಂಗ್ರೆಸ್ ನಾಯಕಿ ವಿನೇಶ್ ಫೋಗಟ್ ಅವರು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ​​ಮುಖ್ಯಸ್ಥೆ ಪಿಟಿ ಉಷಾ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ 50 ಕೆಜಿ ಕುಸ್ತಿ ಪಂದ್ಯದಲ್ಲಿ ಬರೀ 100 ಗ್ರಾಂ ತೂಕ ಹೆಚ್ಚಿದ್ದ ಕಾರಣ ವಿನೇಶ್ ಫೋಗಟ್ ಪಂದ್ಯದಿಂದ ಅನರ್ಹಗೊಂಡಿದ್ದರು. ಕಾನೂನು ಹೋರಾಟ ನಡೆಸಿದರೂ ಬೆಳ್ಳಿ ಪದಕವೂ ದಕ್ಕಿಲ್ಲ. ಒಲಿಂಪಿಕ್ಸ್ ಫೈನಲ್ ತಲುಪಿದ ದೇಶದ ಮೊದಲ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ವಿನೇಶ್ ಬರಿಗೈಯಲ್ಲಿ ಮರಳಬೇಕಾಯಿತು.

ತನ್ನ ತೂಕ ಇಳಿಸಲು ರಾತ್ರಿಯಿಡೀ ಶ್ರಮ ಪಟ್ಟಿದ್ದ ವಿನೇಶ್ ಫೋಗಟ್ ಡಿಹೈಡ್ರೇಷನ್‌ನಿಂದಾಗಿ (ನಿರ್ಜಲೀಕರಣ) ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಐಒಎ ಮುಖ್ಯಸ್ಥೆ ಪಿಟಿ ಉಷಾ ಅವರು ವಿನೇಶ್ ಫೋಗಟ್‌ ಅವರನ್ನು ಭೇಟಿಯಾಗಿದ್ದರು. ಈ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಎಲ್ಲಾ ಬೆಂಬಲದ ಭರವಸೆಯನ್ನು ನೀಡಿದ್ದರು. ಈ ಚಿತ್ರ ಭಾರೀ ವೈರಲ್ ಆಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಹರಿಯಾಣ ವಿಧಾನಸಭಾ ಚುನಾವಣೆ: ಕಾಂಗ್ರೆಸ್‌ಗೆ ಸೇರಿದ ದಿನವೇ ವಿನೇಶ್ ಫೋಗಟ್‌ಗೆ ಟಿಕೆಟ್

ಈ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ ವಿನೇಶ್ ಪೋಗಟ್, “ಆಸ್ಪತ್ರೆಯ ಹಾಸಿಗೆಯಲ್ಲಿದ್ದೆ, ಹೊರಗೆ ಏನಾಗುತ್ತಿದೆ ಎಂದು ನನಗೆ ತಿಳಿದಿಲ್ಲ. ಜೀವನದ ಅತ್ಯಂತ ಕೆಟ್ಟ ಹಂತಗಳಲ್ಲಿ ಒಂದನ್ನು ಎದುರಿಸುತ್ತಿದ್ದೆ. ಆ ವೇಳೆ ಬಂದು ನನ್ನ ಒಪ್ಪಿಗೆಯಿಲ್ಲದೆ ನನ್ನ ಬಳಿ ನಿಂತು ಫೋಟೋವನ್ನು ತೆಗೆದಿದ್ದಾರೆ. ನನ್ನೊಂದಿಗೆ ಇರುವುದಾಗಿ ಬೆಂಬಲ ಸೂಚಿಸಿ ಪೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಾಕಿದ್ದಾರೆ. ಆದರೆ ಯಾವುದೇ ಬೆಂಬಲ ನೀಡಿಲ್ಲ” ಎಂದು ಹೇಳಿದ್ದಾರೆ.

“ಈ ಘಟನೆಯಿಂದ ಮನನೊಂದಿದ್ದೇನೆ. ನನಗೆ ಅಲ್ಲಿ ಏನು ಬೆಂಬಲ ಸಿಕ್ಕಿತು ಎಂದು ನನಗೆ ತಿಳಿದಿಲ್ಲ. ಪಿಟಿ ಉಷಾ ಮೇಡಂ ನನ್ನನ್ನು ಆಸ್ಪತ್ರೆಯಲ್ಲಿ ಭೇಟಿಯಾದರು, ಒಂದು ಫೋಟೋ ಕ್ಲಿಕ್ ಮಾಡಿದರು, ಹೋದರು. ನೀವು ಹೇಳಿದಂತೆ, ರಾಜಕೀಯದಲ್ಲಿ ಮುಚ್ಚಿದ ಬಾಗಿಲಿನ ಹಿಂದೆ ಬಹಳಷ್ಟು ನಡೆಯುತ್ತದೆ. ಹಾಗೆಯೇ, ಅಲ್ಲಿ (ಪ್ಯಾರಿಸ್‌ನಲ್ಲಿ) ರಾಜಕೀಯ ನಡೆಯಿತು. ಹಾಗಾಗಿಯೇ ನಾನು ಕುಸ್ತಿಯನ್ನು ಬಿಡಬೇಕಾಯಿತು” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...