ದೆಹಲಿ | ತಿಹಾರ್ ಜೈಲಿನಲ್ಲಿ ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯಿ ಸಹಚರನ ಹತ್ಯೆ

Date:

  • 2010ರಲ್ಲಿ ಮೊದಲಿಗೆ ಬಂಧನವಾಗಿದ್ದ ಲಾರೆನ್ಸ್‌ ಬಿಷ್ಣೋಯಿ ಸಹಚರ
  • 2022ರಲ್ಲಿ ಕಾರುಗಳ್ಳತನ ಆರೋಪದಲ್ಲಿ ದೆಹಲಿ ಪೊಲೀಸರಿಂದ ಬಂಧನ

ದೆಹಲಿಯ ತಿಹಾರ್ ಜೈಲಿನಲ್ಲಿ ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯಿ ಮತ್ತು ಆತನ ವಿರೋಧಿಯ ಎರಡು ಗುಂಪುಗಳ ನಡುವೆ ಶುಕ್ರವಾರ (ಏಪ್ರಿಲ್ 14) ಸಂಜೆ ಘರ್ಷಣೆ ನಡೆದಿದೆ.

ಪರಿಣಾಮ ಲಾರೆನ್ಸ್ ಆಪ್ತ ಸಹಚರನನ್ನು ವಿರೋಧಿ ಗುಂಪಿನ ಸದಸ್ಯರು ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ (ಏಪ್ರಿಲ್ 15) ತಿಳಿಸಿದ್ದಾರೆ.

33 ವರ್ಷದ ಪ್ರಿನ್ಸ್ ತೆವಾಟಿಯಾ ಹತ್ಯೆಗೀಡಾದ ಕೈದಿ. ಈತ ವಿಚಾರಣಾಧೀನ ಕೈದಿಯಾಗಿದ್ದ. 380 ಕೈದಿಗಳಿರುವ ಸಂಖ್ಯೆ 3ರ ಕೇಂದ್ರ ಕಾರಾಗೃಹದ 6ನೇ ವಾರ್ಡ್‌ನಲ್ಲಿ ತೆವಾಟಿಯಾನನ್ನು ಇರಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶುಕ್ರವಾರ ಸಂಜೆ 5.30ರ ಸುಮಾರಿಗೆ ವಿರೋಧಿ ಗುಂಪಿನ ಅತ್ತತೂರ್ ರೆಹಮಾನ್ ಜೊತೆ ತೆವಾಟಿಯಾ ಜಗಳ ಮಾಡಿಕೊಂಡಿದ್ದಾನೆ. ಎರಡೂ ಬಣಗಳ ಸದಸ್ಯರು ಘರ್ಷಣೆಯಲ್ಲಿ ತೊಡಗಿದ್ದಾರೆ. ಈ ಸಂದರ್ಭ ಲಾರೆನ್ಸ್ ಬಿಷ್ಣೋಯಿ ಅವರ ಸಹಚರ ತೆವಾಟಿಯಾ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಗಾಯಗೊಂಡಿದ್ದ ತೆವಾಟಿಯಾ ಮತ್ತು ರೆಹಮಾನ್ ಸೇರಿ ನಾಲ್ವರನ್ನು ದೀನ್ ದಯಾಳ್ ಉಪಾಧ್ಯಾಯ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮೂವರು ಸ್ಥಿತಿ ಸ್ಥಿರವಾಗಿದ್ದು, ತೆವಾಟಿಯಾ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಕುರಿತಂತೆ ತನಿಖೆಗೆ ಆದೇಶಿಸಲಾಗಿದೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

ತೆವಾಟಿಯಾ ವಿರುದ್ಧ ಕೊಲೆ ಹಾಗೂ ಕೊಲೆ ಯತ್ನ ಸೇರಿದಂತೆ 16 ಅಪರಾಧ ಪ್ರಕರಣಗಳು ದಾಖಲಾಗಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜಪಾನ್ | ಭಾಷಣದ ವೇಳೆ ಬಾಂಬ್ ಸ್ಫೋಟ; ಪಾರಾದ ಪ್ರಧಾನಿ ಫ್ಯೂಮಿಯೋ, ಶಂಕಿತನ ಬಂಧನ

2022ರ ಡಿಸೆಂಬರ್‌ನಲ್ಲಿ ಕಾರುಗಳ್ಳತನ ಪ್ರಕರಣದ ಆರೋಪದಲ್ಲಿ ಲಾರೆನ್ಸ್ ಬಿಷ್ಣೋಯಿ ಆಪ್ತ ಸಹಚರ ತೆವಾಟಿಯಾನನ್ನು ದೆಹಲಿ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದರು.

ವ್ಯಕ್ತಿಗೆ ಗುಂಡು ಹಾರಿಸಿದ ಪ್ರಕರಣದಲ್ಲಿ ತೆವಾಟಿಯಾನನ್ನು 2018ಲ್ಲಿ ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. 2019ರಲ್ಲಿ ಪೆರೋಲ್ ಮೇಲೆ ಹೊರಬಂದ ಆತ ತಪ್ಪಿಸಿಕೊಂಡಿದ್ದ. ಈ ವೇಳೆ ಈತ ಹಲವು ಅಪರಾಧ ಕೃತ್ಯಗಳಲ್ಲಿ ತೊಡಗಿದ್ದ ಎಂದು ಪೊಲೀಸರು ಹೇಳಿದ್ದರು.

ತೆವಾಟಿಯಾನನ್ನು ಮೊದಲಿಗೆ 2010ರಲ್ಲಿ ಕೊಲೆ ಪ್ರಕರಣವೊಂದರಲ್ಲಿ ಬಂಧಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...