ಮೇಘಸ್ಫೋಟ | ಭಾರೀ ಮಳೆಯಿಂದ ನಾಲ್ವರು ಸಾವು, ಕೊಚ್ಚಿ ಹೋದ ಸೇತುವೆಗಳು

Date:

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಮೇಘಸ್ಫೋಟವಾಗಿದೆ. ಭಾರೀ ಮಳೆಯಿಂದ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಸದ್ಯಕ್ಕೆ ತಿಳಿದುಬಂದಿದೆ.

ಬಹುತೇಕ ಎಲ್ಲ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನಗರ ಮತ್ತು ಇತರೆಡೆ ಹಲವಾರು ತಗ್ಗು ಪ್ರದೇಶಗಳು ಮತ್ತು ರಸ್ತೆಗಳು ಮುಳುಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 24ಕ್ಕೂ ಹೆಚ್ಚು ಮನೆಗಳು ಹಾಗೂ ಸೇತುವೆಗಳು ಕೊಚ್ಚಿ ಹೋಗಿವೆ.

ಗುಡ್ಡಗಾಡು ರಾಜ್ಯಗಳಲ್ಲಿ ನಿರಂತರ ಮಳೆಯಿಂದಾಗಿ ಸಾಮಾನ್ಯ ಜನಜೀವನ ತೀವ್ರವಾಗಿ ಅಸ್ತವ್ಯಸ್ತಗೊಂಡಿದೆ. ಹಿಮಾಚಲ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ನದಿಗಳಿಂದ ಭಾರಿ ಪ್ರಮಾಣದ ನೀರು ಹರಿದಿದ್ದು, ಪಂಜಾಬ್‌ನ ಹಲವಾರು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿರಂತರ ಮಳೆಯಿಂದ ಉಂಟಾದ ಭೂಕುಸಿತಗಳು ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು ಉತ್ತರಾಖಂಡದಾದ್ಯಂತ ಪ್ರಮುಖ ರಸ್ತೆಗಳು ಮತ್ತು ಹೆದ್ದಾರಿ ನಿರ್ಬಂಧಿಸಿವೆ. ಭಾರಿ ಮಳೆಯ ಎಚ್ಚರಿಕೆ ಜಾರಿಯಲ್ಲಿದೆ. ಹಿಮಾಚಲ ಪ್ರದೇಶದಲ್ಲಿ, ಪವಿತ್ರ ಮಣಿಮಹೇಶ್ ಯಾತ್ರೆಯಲ್ಲಿದ್ದಾಗ ಆಮ್ಲಜನಕದ ಕೊರತೆಯಿಂದ ಪಂಜಾಬ್‌ನ ಮೂವರು ಯಾತ್ರಿಕರು ಪ್ರಾಣ ಕಳೆದುಕೊಂಡಿದ್ದಾರೆ.

ಜಮ್ಮು ಪ್ರಾಂತ್ಯದ ಹಲವು ಭಾಗಗಳಲ್ಲಿ ಪರಿಸ್ಥಿತಿ “ಸಾಕಷ್ಟು ಗಂಭೀರವಾಗಿದೆ” ಮತ್ತು ಪರಿಸ್ಥಿತಿಯನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡಲು ಶ್ರೀನಗರದಿಂದ ಜಮ್ಮುವಿಗೆ ಭೇಟಿ ನೀಡುವುದಾಗಿ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹೇಳಿದ್ದಾರೆ.

ಮಳೆ ಮತ್ತು ಭೂಕುಸಿತದ ಕಾರಣ ಮಣಿಮಹೇಶ್ ಯಾತ್ರೆ ಸ್ಥಗಿತಗೊಂಡಿದೆ. ಮಣಿಮಹೇಶ್ ಯಾತ್ರೆಯನ್ನು ಮತ್ತೆ ಮಳೆ ಮತ್ತು ಭೂಕುಸಿತದ ಕಾರಣ ಸ್ಥಗಿತಗೊಳಿಸಲಾಗಿದೆ ಎಂದು ಭರ್ಮೌರ್ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಕುಲದೀಪ್ ಸಿಂಗ್ ರಾಣಾ ತಿಳಿಸಿದ್ದಾರೆ.

ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಇದರ ಪರಿಣಾಮವಾಗಿ ನೂರಾರು ಭೂಕುಸಿತಗಳು ಸಂಭವಿಸಿವೆ. ಹೆಚ್ಚುವರಿಯಾಗಿ, ಹಲವಾರು ರಸ್ತೆಗಳು ಮುಚ್ಚಿಹೋಗಿವೆ ಮತ್ತು ನದಿಗಳು ಮತ್ತು ತೊರೆಗಳು ಉಕ್ಕಿ ಹರಿಯುತ್ತಿವೆ. ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ತೀವ್ರ ಮಳೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ನಾಲ್ಕು ದಿನ ಮಳೆ

ರಾಷ್ಟ್ರ ರಾಜಧಾನಿ ದೆಹಲಿ-ಎನ್‌ಸಿಆರ್‌ನ ಹಲವಾರು ಪ್ರದೇಶಗಳಲ್ಲಿ ಮಳೆಯಾಗಿದ್ದು ಮುಂದಿನ ನಾಲ್ಕೈದು ದಿನಗಳ ಕಾಲ ಬಾರಿ ಮಳೆಯಾಗುವ ಸಾಧ್ಯತೆ ಇದೆ. ಇದರ ಜೊತೆಗೆ ದೇಶದ ಹಲವು ಭಾಗಗಳಲ್ಲಿಯೂ ಕೂಡ. ಈ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸುವಂತೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...