ಜಮ್ಮು ಕಾಶ್ಮೀರ | ಮತ್ತೆ ಮೇಘಸ್ಫೋಟ: ನಾಲ್ವರ ಸಾವು, ಆರು ಮಂದಿಗೆ ಗಾಯ

Date:

ಜಮ್ಮು ಕಾಶ್ಮೀರದ ಕಥುವಾ ಜಿಲ್ಲೆಯ ಜೋಡ್ ಘಾಟಿ ಎಂಬಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಮೇಘಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಇತರ ಆರು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾತ್ರಿಯಿಡೀ ಭಾರೀ ಮಳೆ ಸುರಿದಿದ್ದು, ಗ್ರಾಮಕ್ಕೆ ಸಂಪರ್ಕ ಕಡಿತಗೊಂಡಿದೆ. ಹಲವು ಆಸ್ತಿಪಾಸ್ತಿಗೆ ಹಾನಿಯಾಗಿದೆ. ಶನಿವಾರ ಮತ್ತು ಭಾನುವಾರದ ಮಧ್ಯರಾತ್ರಿ ರಾಜ್‌ಬಾಗ್ ಪ್ರದೇಶದಲ್ಲಿ ಮೇಘಸ್ಫೋಟ ಸಂಭವಿಸಿದೆ.

ಇದನ್ನು ಓದಿದ್ದೀರಾ? ಜಮ್ಮು ಕಾಶ್ಮೀರ | ಮೇಘಸ್ಫೋಟ: ಮೃತರ ಸಂಖ್ಯೆ 60ಕ್ಕೆ ಏರಿಕೆ, ನೂರಾರು ಮಂದಿ ನಾಪತ್ತೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸ್ ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (SDRF) ಜಂಟಿ ತಂಡವು ಸ್ಥಳೀಯ ಸ್ವಯಂಸೇವಕರ ಸಹಾಯದಿಂದ ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಈವರೆಗೆ ನಾಲ್ವರ ಶವ ಪತ್ತೆಯಾಗಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಥುವಾ ಪೊಲೀಸ್ ಠಾಣೆ ವ್ಯಾಪ್ತಿಯ ಬಗಾರ್ಡ್, ಚಾಂಗ್ಡಾ ಗ್ರಾಮಗಳಲ್ಲಿ ಹಾಗೂ ಲಖನ್‌ಪುರದ ದಿಲ್ವಾನ್-ಹುಟ್ಲಿ ಪ್ರದೇಶದಲ್ಲಿ ಭೂಕುಸಿತ ಉಂಟಾಗಿದೆ. ಆದರೆ ಹೆಚ್ಚಿನ ಹಾನಿ ಉಂಟಾಗಿಲ್ಲ ಎಂದು ವರದಿಯಾಗಿದೆ.

ಇನ್ನು ಜಮ್ಮು ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ಸಂಭವಿಸಿದ ಬೃಹತ್ ಮೇಘಸ್ಫೋಟದಲ್ಲಿ ಮೃತರ ಸಂಖ್ಯೆಯು 60ಕ್ಕೆ ಏರಿಕೆಯಾಗಿದೆ. ಇನ್ನೂ ನೂರಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...