ಆಂಧ್ರ ಪ್ರದೇಶ | ಚುನಾವಣಾ ಪ್ರಚಾರದ ವೇಳೆ ತೂರಿಬಂದ ಕಲ್ಲು: ಸಿಎಂ ಜಗನ್‌ಗೆ ಗಾಯ

Date:

ದೇಶದಲ್ಲಿ ಲೋಕಸಭಾ ಚುನಾವಣೆ ಕಾವು ಜೋರಾಗುತ್ತಿದ್ದು, ಎಲ್ಲ ಪಕ್ಷಗಳು ಮತದಾರರನ್ನು ಒಲಿಸಿಕೊಳ್ಳಲು ಭರ್ಜರಿ ಪ್ರಚಾರ, ರೋಡ್ ಶೋಗಳನ್ನು ನಡೆಸುತ್ತಿದೆ.

ಆಂಧ್ರ ಪ್ರದೇಶದ ವಿಜಯವಾಡಾದಲ್ಲಿ ತೆರೆದ ವಾಹನದ ಮೂಲಕ ರೋಡ್ ಶೋ ನಡೆಸುತ್ತಿದ್ದ ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಇದರ ಪರಿಣಾಮ ಜಗನ್ ಹಣೆ, ಎಡಗಣ್ಣು ಹಾಗೂ ತಲೆಗೆ ಗಾಯವಾಗಿದೆ. ರಕ್ತ ಸೋರುತ್ತಿದ್ದ ಜಗನ್‌ಗೆ ತಕ್ಷಣವೇ ಪ್ರಥಮ ಚಿಕಿತ್ಸೆ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವೈಎಸ್‌ಆರ್‌ಪಿ ಪಕ್ಷ ವಿಜಯವಾಡಾದಲ್ಲಿ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿರುವ ವೇಳೆ ಈ ಘಟನೆ ನಡೆದಿದೆ. ಜಗನ್ ಹಣೆ, ತಲೆ, ಎಡಗಣ್ಣಿ ಕಲ್ಲು ಬಡಿದಿದೆ. ಇದರ ಪರಿಣಾಮ ರಕ್ತ ಜಿನುಗಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಜಗನ್ ಪಕ್ಕದಲ್ಲಿದ್ದ ನಾಯಕರಿಗೂ ಕಲ್ಲೇಟು ಬಿದ್ದಿದೆ. ಓರ್ವ ನಾಯಕ ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದುಬಂದಿದೆ.

ಜಗನ್ ಜೊತೆಗೆ ತೆರೆದ ಬಸ್‌ನಲ್ಲಿದ್ದ ಶಾಸಕ ವೇಲಂಪಲ್ಲಿ ಶ್ರೀನಿವಾಸ್ ಕೂಡ ಗಾಯಗೊಂಡಿದ್ದಾರೆ. ತಕ್ಷಣವೇ ಜಗನ್ ಅವರಿಗೆ ಭದ್ರತಾ ಪಡೆಗಳು ರಕ್ಷಣೆ ನೀಡಿದೆ. ಇಷ್ಟೇ ಅಲ್ಲ ಜಗನ್ ಅವರನ್ನು ಬಸ್ ಯಾತ್ರೆಯಿಂದ ಕೆಳಗೆ ಇಳಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಕೆಲ ಹೊತ್ತು ವಿಶ್ರಾಂತಿ ಪಡೆಯಲು ವೈದ್ಯಾಧಿಕಾರಿಗಳ ತಂಡ ಸೂಚಿಸಿದೆ. ಆದರೆ ಜಗನ್ ಪ್ರಥಮ ಚಿಕಿತ್ಸೆ ಪಡೆದು ಮತ್ತೆ ಪ್ರಚಾರ ಕಾರ್ಯ ಮುಂದುವರಿಸಿರುವುದಾಗಿ ತಿಳಿದುಬಂದಿದೆ.

ವಿಜಯವಾಡದಲ್ಲಿ ಜಗನ್ ಬಸ್ ಯಾತ್ರೆಗೆ ಅದ್ಧೂರಿ ಸ್ವಾಗತ ಸಿಕ್ಕಿತ್ತು. ಬೆಂಬಲಿಗರು, ಜನರು ಜಗನ್‌ಗೆ ಹೂವಿನ ಸ್ವಾಗತ ನೀಡಿದ್ದರು. ಹಲವರು ಹೂವಿನ ದಳಗಳನ್ನು ಎಸೆದಿದ್ದರು. ಇದರ ನಡುವೆಯೇ ಕಲ್ಲು ತೂರಿ ಬಂದಿದೆ.

ಈ ಕಲ್ಲುತೂರಾಟದ ಹಿಂದೆ ಟಿಡಿಪಿ ಕೈವಾಡವಿದೆ ಎಂದು ವೈಎಸ್ಆರ್ ಕಾಂಗ್ರೆಸ್ ಆರೋಪಿಸಿದೆ. ಚುನಾವಣೆಯಲ್ಲಿ ಮತದಾರರನ್ನು ಗೆಲ್ಲಲು ಸಾಧ್ಯವಾಗದ ಪಕ್ಷಗಳು ಕಲ್ಲುತೂರಾಟ ನಡೆಸಿ ನಮ್ಮನ್ನು ಬೆದರಿಸುವ ತಂತ್ರಕ್ಕೆ ಇಳಿದಿದೆ. ಇದಕ್ಕೆ ಜನರು ಉತ್ತರಿಸಲಿದ್ದಾರೆ ಎಂದು ವೈಎಸ್ಆರ್ ಕಾಂಗ್ರೆಸ್ ಹೇಳಿಕೊಂಡಿದೆ.

175 ವಿಧಾನಸಭಾ ಸದಸ್ಯರ ಬಲ ಹೊಂದಿರುವ ಆಂಧ್ರಪ್ರದೇಶದಲ್ಲಿ ಲೋಕಸಭಾ ಚುನಾವಣೆಯ ಜೊತೆಗೇ ವಿಧಾನಸಭಾ ಚುನಾವಣೆಗೆ ಮತದಾನ ಪ್ರಕ್ರಿಯೆಯು ಕೂಡ ಮೇ 13ರಂದು ನಡೆಯಲಿದೆ. ಜೂನ್ 4ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...